ಗುವಾಹಟಿ: ಮೊದಲನೇ ಟೆಸ್ಟ್ ಪಂದ್ಯದಲ್ಲಿ 30 ರನ್ ಅಂತರದ ಸೋಲು ಕಂಡು ಟೀಕೆಗೆ ಗುರಿಯಾಗಿದ್ದ ಟೀಂ ಇಂಡಿಯಾ ಗುವಾಹಟಿಯಲ್ಲಿ ಬುಧವಾರ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲೂ 408 ರನ್‌ಗಳಿಂದ ಸೋಲು ಕಾಣುವ ಮೂಲಕ ತವರಿನಲ್ಲೇ ಮುಖಭಂಗ ಅನುಭವಿಸಿದೆ. ಆಫ್-ಸ್ಪಿನ್ನರ್ ಸೈಮನ್ ಹಾರ್ಮರ್ ಆರು ವಿಕೆಟ್ ಗೊಂಚಲು ಪಡೆಯುವ ಮೂಲಕ ತಂಡಕ್ಕೆ ನೆರವಾದರು. ಈ ಮೂಲಕ ದಕ್ಷಿಣ ಆಫ್ರಿಕಾ ಆಥಿತೇಯರನ್ನು ಬೃಹತ್ ರನ್‌ಗಳಿಂದ ಸೋಲಿಸಿ 2-0 ಅಂತರದ ಸರಣಿಯನ್ನು ವೈಟ್‌ವಾಶ್ ಮಾಡಿತು.
ಭಾರತದ ಟೆಸ್ಟ್ ಇತಿಹಾಸದಲ್ಲಿಯೇ ಈ ಸೋಲು ಮತ್ತೊಂದು ಮುಜುಗರದ ಅಧ್ಯಾಯವಾಗಿದೆ. ಇದು ಭಾರಿ ರನ್‌ಗಳ ಅಂತರದ ಅತಿದೊಡ್ಡ ಸೋಲಾಗಿದೆ.
ಕಳೆದ 25 ವರ್ಷಗಳಲ್ಲಿಯೇ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾ ಭಾರತದಲ್ಲಿ ಸರಣಿ ಗೆಲುವು ಸಾಧಿಸಿದೆ.
ಮೊದಲ ಇನಿಂಗ್ಸ್‌ನಲ್ಲಿ 489 ರನ್ ಗಳಿಸಿ ಆಲೌಟ್ ಆಯಿತು. ಈ ಗುರಿ ಬೆನ್ನತ್ತಿದ ಭಾರತ 201ರನ್‌ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ದಕ್ಷಿಣ ಆಫ್ರಿಕಾ 288 ರನ್‌ಗಳ ಮುನ್ನಡೆ ಕಾಯ್ದುಕೊಂಡಿತ್ತು.
ಎರಡನೇ ಇನಿಂಗ್ಸ್‌ನಲ್ಲಿಯೂ ಉತ್ತಮ ಪ್ರದರ್ಶನ ನೀಡಿದ ದಕ್ಷಿಣ ಆಫ್ರಿಕಾ ಬ್ಯಾಟರ್‌ಗಳು ಭಾರತೀಯ ಬೌಲರ್‌ಗಳನ್ನು ತರಾಟೆಗೆ ತೆಗೆದುಕೊಂಡರು. 78.3 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 260 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಈ ಮೂಲಕ ಎದುರಾಳಿ ತಂಡಕ್ಕೆ 548 ರನ್ ಮುನ್ನಡೆ ಕಾಯ್ದುಕೊಂಡಿತ್ತು.
ದಕ್ಷಿಣ ಆಫ್ರಿಕಾ ನೀಡಿದ 549 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಟೀಂ ಇಂಡಿಯಾ ಬ್ಯಾಟರ್‌ಗಳು ಆರಂಭದಲ್ಲಿಯೇ ಎಡವಿದರು. ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಮತ್ತು ಕೆಎಲ್ ರಾಹುಲ್ ಕ್ರಮವಾಗಿ 13 ಮತ್ತು 6 ರನ್ ಗಳಿಸಿ ವಿಕೆಟ್ ಕೈಚೆಲ್ಲಿದರು. 139 ಎಸೆತಗಳಲ್ಲಿ ಸಾಯಿ ಸುದರ್ಶನ್ 14, ಕುಲದೀಪ್ ಯಾದವ್ 5, ಧ್ರುವ್ ಜುರೇಲ್ 2, ನಾಯಕ ರಿಷಭ್ ಪಂತ್ 13 ರನ್ ಗಳಿಸಲಷ್ಟೇ ಶಕ್ತರಾದರು. ನಂತರ ಬಂದ ರವೀಂದ್ರ ಜಡೇಜಾ 87 ಎಸೆತಗಳಲ್ಲಿ 54 ರನ್ ಗಳಿಸುವ ಮೂಲಕ ಏಕಾಂಗಿ ಹೋರಾಟ ನಡೆಸಿದರು. ಉಳಿದಂತೆ ಯಾರೊಬ್ಬರ ಬ್ಯಾಟ್‌ನಿಂದಲೂ ರನ್‌ಗಳು ಮೂಡಿಬರಲಿಲ್ಲ.
ಇತ್ತ ದಕ್ಷಿಣ ಆಫ್ರಿಕಾ ಪರ ಸೈಮನ್ ಹಾರ್ಮರ್ 23 ಓವರ್‌ಗಳಲ್ಲಿ ಕೇವಲ 37 ರನ್ ನೀಡಿ ಆರು ವಿಕೆಟ್ ಕಬಳಿಸುವ ಮೂಲಕ ತಮ್ಮ ವೃತ್ತಿಜೀವನದ ಅತ್ಯುತ್ತಮ ಪ್ರದರ್ಶನ ನೀಡಿದರು. ಒಟ್ಟಾರೆ ಪಂದ್ಯಾವಳಿಯಲ್ಲಿ ಒಂಬತ್ತು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಭಾರತಕ್ಕೆ ದುಸ್ವಪ್ನವಾದರು.
ಪ್ರವಾಸಿ ತಂಡವು ಮೂರು ವಿಭಾಗಗಳಲ್ಲಿ ಭಾರತವನ್ನು ಮೀರಿಸಿತು. ಐಡೆನ್ ಮಾರ್ಕ್ರಮ್ (9) ಟೆಸ್ಟ್ ಪಂದ್ಯವೊಂದರಲ್ಲಿ ಅತಿ ಹೆಚ್ಚು ಕ್ಯಾಚ್ ಪಡೆದ ದಾಖಲೆಯನ್ನು ನಿರ್ಮಿಸಿದರು. 2015 ರಲ್ಲಿ ಅಜಿಂಕ್ಯ ರಹಾನೆ ಅವರ ಎಂಟು ಕ್ಯಾಚ್‌ಗಳನ್ನು ಹಿಂದಿಕ್ಕಿದರು.
Advertisement