

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ 0-2 ಅಂತರದ ಹೀನಾಯ ಸೋಲಿನ ನಂತರ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಭವಿಷ್ಯದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.
ಒಂದು ವರ್ಷಕ್ಕೂ ಕಡಿಮೆ ಅವಧಿಯಲ್ಲಿ ಭಾರತ ಎರಡನೇ ಬಾರಿ ತವರಿನಲ್ಲಿ ಟೆಸ್ಟ್ ಸರಣಿ ಕಳೆದುಕೊಂಡ ನಂತರ ಗಂಭೀರ್ ವಿರುದ್ಧ ವ್ಯಾಪಕ ಟೀಕೆಗಳು ಕೇಳಿಬರುತ್ತಿವೆ. ಗಂಭೀರ್ ಬದಲಿಗೆ ವಿವಿಎಸ್ ಲಕ್ಷ್ಮಣ್ ಅವರನ್ನು ಭಾರತದ ರೆಡ್-ಬಾಲ್ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ ಮಾಡಬಹುದು ಎಂದು ಕೆಲವು ವರದಿಗಳು ಹೇಳಿವೆ.
ಆದಾಗ್ಯೂ, BCCI ಗಂಭೀರ್ ಅವರ ಮೇಲೆ ನಂಬಿಕೆ ಇಟ್ಟಿದ್ದು, ಅವರು ತಂಡವನ್ನು ಪುನರ್ ರಚಿಸುವವರೆಗೂ ಅವರಿಗೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಮೂಲಗಳು ಹೇಳಿವೆ.
ದಕ್ಷಿಣ ಆಫ್ರಿಕಾ ವಿರುದ್ಧದ ವೈಟ್-ಬಾಲ್ ಸರಣಿಯ ಕೊನೆಯಲ್ಲಿ ತಂಡದ ಆಡಳಿತ ಮಂಡಳಿ ಮತ್ತು ಆಯ್ಕೆದಾರರ ನಡುವೆ ಸಭೆ ನಡೆಯಲಿದೆ ಎಂದು ಮೂಲಗಳು ಹೇಳಿವೆ.
ಈಗ ಗೌತಮ್ ಗಂಭೀರ್ ಅವರನ್ನು ಬದಲಾಯಿಸಲು ನೋಡುತ್ತಿಲ್ಲ. ಅವರು ತಂಡವನ್ನು ಪುನರ್ ರಚಿಸುತ್ತಿದ್ದಾರೆ. ಅವರ ಒಪ್ಪಂದವು 2027 ರ ವಿಶ್ವಕಪ್ ವರೆಗೆ ಇರುತ್ತದೆ ಎಂದು ಬಿಸಿಸಿಐ ಹೇಳಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದ ಕೊನೆಯಲ್ಲಿ ತಂಡದ ಆಡಳಿತ ಮಂಡಳಿ ಮತ್ತು ಆಯ್ಕೆದಾರರ ನಡುವೆ ಸಭೆ ನಡೆಯಲಿದೆ. ಟೆಸ್ಟ್ ತಂಡದ ಪ್ರದರ್ಶನವನ್ನು ಹೇಗೆ ಹೆಚ್ಚಿಸಿಕೊಳ್ಳುವುದು ಎಂದು ಗಂಭೀರ್ ಅವರನ್ನು ಕೇಳಲಾಗುತ್ತದೆ" ಎಂದು ಮೂಲಗಳು ತಿಳಿಸಿವೆ.
Advertisement