India vs South Africa 1st ODI: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ಕೆ; ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಬ್ಯಾಕ್!

ದಕ್ಷಿಣ ಆಫ್ರಿಕಾ ನಾಯಕ ತೆಂಬಾ ಬವುಮಾ ಮತ್ತು ಸ್ಪಿನ್ನರ್ ಕೇಶವ್ ಮಹಾರಾಜ್ ಅವರಿಗೆ ವಿಶ್ರಾಂತಿ ನೀಡಲಾಗಿದೆ.
Aiden Markram - KL Rahul
ಐಡೆನ್ ಮಾರ್ಕ್ರಾಮ್ - ಕೆಎಲ್ ರಾಹುಲ್
Updated on

ರಾಂಚಿ: ಮೂರು ಪಂದ್ಯಗಳ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಹಂಗಾಮಿ ನಾಯಕ ಐಡೆನ್ ಮಾರ್ಕ್ರಾಮ್ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದಕ್ಷಿಣ ಆಫ್ರಿಕಾ ನಾಯಕ ತೆಂಬಾ ಬವುಮಾ ಮತ್ತು ಸ್ಪಿನ್ನರ್ ಕೇಶವ್ ಮಹಾರಾಜ್ ಅವರಿಗೆ ವಿಶ್ರಾಂತಿ ನೀಡಲಾಗಿದೆ.

ಭಾರತ ತಂಡದಲ್ಲಿ ಕಾಯಂ ನಾಯಕ ಶುಭಮನ್ ಗಿಲ್ ಇಲ್ಲದ ಕಾರಣ, ಭಾರತದ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಯಶಸ್ವಿ ಜೈಸ್ವಾಲ್ ಜೊತೆ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಆತಿಥೇಯರು ಮೂವರು ಸ್ಪಿನ್ನರ್‌ಗಳು ಮತ್ತು ಅಷ್ಟೇ ವೇಗಿಗಳೊಂದಿಗೆ ಕಣಕ್ಕಿಳಿದಿದ್ದಾರೆ.

ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್

ಭಾರತ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ವಾಷಿಂಗ್ಟನ್ ಸುಂದರ್, ಕೆಎಲ್ ರಾಹುಲ್ (ನಾಯಕ & ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಅರ್ಶದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ.

ದಕ್ಷಿಣ ಆಫ್ರಿಕಾ: ರಿಯಾನ್ ರಿಕಲ್ಟನ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಐಡೆನ್ ಮಾರ್ಕ್ರಾಮ್ (ನಾಯಕ), ಮ್ಯಾಥ್ಯೂ ಬ್ರೀಟ್ಜ್ಕೆ, ಟೋನಿ ಡಿ ಜೊರ್ಜಿ, ಡೆವಾಲ್ಡ್ ಬ್ರೆವಿಸ್, ಮಾರ್ಕೊ ಜಾನ್ಸನ್, ಕಾರ್ಬಿನ್ ಬಾಷ್, ಪ್ರೆನೆಲನ್ ಸುಬ್ರಾಯೆನ್, ನಾಂಡ್ರೆ ಬರ್ಗರ್, ಒಟ್ನೀಲ್ ಬಾರ್ಟ್‌ಮ್ಯಾನ್.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com