
ಬೆಂಗಳೂರು: ಮುಂಬರುವ ರಣಜಿ ಟ್ರೋಫಿ ಟೂರ್ನಿಗೆ ಕರ್ನಾಟಕ ತಂಡ ಪ್ರಕಟವಾಗಿದ್ದು, ಕನ್ನಡಿಗ ಮಯಾಂಕ್ ಅಗರ್ವಾಲ್ ನೇತೃತ್ವದಲ್ಲಿ ತಂಡ ಪ್ರಕಟಿಸಲಾಗಿದೆ.
ಈ ಹಿಂದೆಯೂ ಕೂಡ ಮಯಾಂಕ್ ಅಗರ್ವಾಲ್ ಕರ್ನಾಟಕ ತಂಡದ ಸಾರಥ್ಯವಹಿಸಿದ್ದರು. ಇದೀಗ ಮತ್ತೆ ಅವರದ್ದೇ ನೇತೃತ್ವದಲ್ಲಿ ಸೌರಾಷ್ಟ್ರ ವಿರುದ್ಧದ ರಣಜಿ ಟ್ರೋಫಿ ಪಂದ್ಯಕ್ಕೆ 15 ಸದಸ್ಯರ ಕರ್ನಾಟಕ ತಂಡ ಪ್ರಕಟಿಸಲಾಗಿದೆ. ತಂಡದಲ್ಲಿ ನಿರೀಕ್ಷೆಯಂತೆಯೇ ಹಿರಿಯ ಆಟಗಾರ ಕರುಣ್ ನಾಯರ್ ಗೆ ಸ್ಥಾನ ನೀಡಲಾಗಿದೆ.
ಉಳಿದಂತೆ ಸ್ಮರಣ್, ಶ್ರೇಯಸ್ ಗೋಪಾಲ್, ವೈಶಾಖ್ ವಿಜಯ್ ಕುಮಾರ್, ವಿದ್ವತ್ ಕಾವೇರಪ್ಪ, ಅಭಿಲಾಶ್ ಶೆಟ್ಟಿ, ವೆಂಕಟೇಶ್ ಎಂ, ನಿಕಿನ್ ಜೋಸ್, ಅಭಿನವ್ ಮನೋಹರ್, ಅನೀಶ್ ಕೆವಿ, ಮೊಹ್ಸಿನ್ ಖಾನ್, ಸ್ಥಾನ ಗಿಟ್ಟಿಸಿದ್ದಾರೆ. ವಿಕೆಟ್ ಕೀಪರ್ ಗಳಾಗಿ ಶ್ರೀಜಿತ್ ಮತ್ತು ಕೃತಿಕಾ ಕೃಷ್ಣ ಸ್ಥಾನ ಪಡೆದಿದ್ದಾರೆ. ಉದಯೋನ್ಮುಖ ಸ್ಪಿನ್ನರ್ ಶಿಖರ್ ಶೆಟ್ಟಿಗೆ ಅವಕಾಶ ನೀಡಿರುವುದು ಕುತೂಹಲ ಕೆರಳಿಸಿದೆ.
Advertisement