ಕರ್ನಾಟಕ ಅಂಡರ್-19 ತಂಡದ ನಾಯಕನಾಗಿ ರಾಹುಲ್ ದ್ರಾವಿಡ್ ಕಿರಿಯ ಪುತ್ರ ಅನ್ವಯ್ ಆಯ್ಕೆ

ವಿಶೇಷ ಎಂದರೆ ಅನ್ವಯ್ ದ್ರಾವಿಡ್ ವಿಕೆಟ್ ಕೀಪರ್ ಬ್ಯಾಟರ್. ಹೀಗಾಗಿ ಈ ಟೂರ್ನಿಯಲ್ಲಿ ಅವರು ಕೀಪಿಂಗ್ ಜವಾಬ್ದಾರಿಯೊಂದಿಗೆ ನಾಯಕನಾಗಲಿದ್ದಾರೆ.
Rahul dravid and anvay
ರಾಹುಲ್ ದ್ರಾವಿಡ್ ಮತ್ತು ಅನ್ವಯ್
Updated on

ಬೆಂಗಳೂರು: ಹಿರಿಯ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರ ಕಿರಿಯ ಪುತ್ರ ಅನ್ವಯ್ ದ್ರಾವಿಡ್ ಕರ್ನಾಟಕ ಅಂಡರ್-19 ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಅಕ್ಟೋಬರ್ 9 ರಿಂದ 17 ರವರೆಗೆ ಡೆಹ್ರಾಡೂನ್‌ನಲ್ಲಿ ನಡೆಯಲಿರುವ ವಿನೂ ಮಂಕಡ್ ಟೂರ್ನಿಗಾಗಿ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದ್ದು, ಈ ತಂಡದ ನಾಯಕರಾಗಿ ಅನ್ವಯ್ ದ್ರಾವಿಡ್ ತಂಡ ಮುನ್ನಡೆಸಲಿದ್ದಾರೆ.

ವಿಶೇಷ ಎಂದರೆ ಅನ್ವಯ್ ದ್ರಾವಿಡ್ ವಿಕೆಟ್ ಕೀಪರ್ ಬ್ಯಾಟರ್. ಹೀಗಾಗಿ ಈ ಟೂರ್ನಿಯಲ್ಲಿ ಅವರು ಕೀಪಿಂಗ್ ಜವಾಬ್ದಾರಿಯೊಂದಿಗೆ ನಾಯಕನಾಗಲಿದ್ದಾರೆ. ಭಾನುವಾರವಷ್ಟೇ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಿಂದ ಅತ್ಯುತ್ತಮ ಕಿರಿಯ ಬ್ಯಾಟರ್ ಪ್ರಶಸ್ತಿ ಪಡೆದಿದ್ದ ಅನ್ವಯ್​ಗೆ ಇದೀಗ ನಾಯಕತ್ವ ಒಲಿದಿದೆ.

ಈಗಾಗಲೇ ಶಾಂತ ಸ್ವಭಾವದಿಂದ ಗಮನ ಸೆಳೆದಿರುವ ಅನ್ವಯ್ ವಿನೂ ಮಂಕಡ್ ಟೂರ್ನಿಯಲ್ಲಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದರೆ, ಕೆಲ ವರ್ಷಗಳ ಕಾಲ ಅವರನ್ನೇ ನಾಯಕನ್ನಾಗಿ ಮುಂದುವರೆಸುವ ಸಾಧ್ಯತೆಯಿದೆ.

ಕರ್ನಾಟಕ ಅಂಡರ್-19 ತಂಡ: ಅನ್ವಯ್ ದ್ರಾವಿಡ್ (ನಾಯಕ, ವಿಕೆಟ್ ಕೀಪರ್ ), ನಿತೀಶ್ ಆರ್ಯ, ಆದರ್ಶ್ ಡಿ ಅರಸ್, ಎಸ್ ಮಣಿಕಾಂತ್ (ಉಪನಾಯಕ), ಪ್ರಣೀತ್ ಶೆಟ್ಟಿ, ವಾಸವ್ ವೆಂಕಟೇಶ್, ಅಕ್ಷತ್ ಪ್ರಭಾಕರ್, ಸಿ ವೈಭವ್, ಕುಲದೀಪ್ ಸಿಂಗ್ ಪುರೋಹಿತ್, ರತನ್ ಬಿಆರ್, ವೈಭವ್ ಶರ್ಮಾ, ಕೆಎ ತೇಜಸ್, ಅಥರ್ವ್ ಮಾಳವಿಯಾ, ಸನ್ನಿ ಕಾಂಚಿ, ರೆಹಾನ್ ಮೊಹಮ್ಮದ್ (ವಿಕೆಟ್ ಕೀಪರ್).

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com