
ನವದೆಹಲಿ: ಟೀಮ್ ಇಂಡಿಯಾದ ಮಾಜಿ ಆಟಗಾರ ವಿರೇಂದ್ರ ಸೆಹ್ವಾಗ್ ದಾಂಪತ್ಯ ಜೀವನ ಮತ್ತೆ ಸುದ್ದಿಗೆ ಗ್ರಾಸವಾಗಿದ್ದು, ಸೆಹ್ವಾಗ್ ಹಾಗೂ ಅವರ ಪತ್ನಿ ಆರತಿ ಅಹ್ಲಾವತ್ ನಡುವಿನ ಬಿರುಕಿಗೆ ಹಾಲಿ ಬಿಸಿಸಿಐ ಅಧ್ಯಕ್ಷ ಮಿಥುನ್ ಮನ್ಹಾಸ್ ಕಾರಣ ಎಂಬ ಚರ್ಚೆ ನಡೆಯುತ್ತಿದೆ.
ಈ ಹಿಂದೆ ಸೆಹ್ವಾಗ್ ಮತ್ತು ಪತ್ನಿ ಆರತಿ ಅಹ್ಲಾವತ್ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಸುದ್ದಿಯೊಂದು ಈ ಹಿಂದೊಮ್ಮೆ ಹರಿದಾಡಿತ್ತು. ಈ ಸುದ್ದಿ ಬೆನ್ನಲ್ಲೇ ಇಬ್ಬರು ಪತ್ಯೇಕವಾಗಿ ವಾಸಿಸುತ್ತಿರುವ ವಿಚಾರ ಕೂಡ ಬಹಿರಂಗವಾಗಿತ್ತು.
ಸೆಹ್ವಾಗ್ ವೈವಾಹಿಕ ಜೀವನಕ್ಕೆ ಇತಿಶ್ರೀ ಹಾಡಲು ನಿರ್ಧರಿಸಿದ್ದಾರೆ ಎಂಬ ಸುದ್ದಿಗಳು ಕೂಡ ವ್ಯಾಪಕವಾಗಿ ಕೇಳಿ ಬಂದಿತ್ತು. ಆದರೆ ಇದಕ್ಕೇನು ಕಾರಣ ಎಂಬುದು ಮಾತ್ರ ಬಹಿರಂಗವಾಗಿರಲಿಲ್ಲ. ಇದೀಗ ಇವರಿಬ್ಬರ ನಡುವಿನ ಬಿರುಕಿಗೆ ಮಿಥುನ್ ಮನ್ಹಾಸ್ ಕಾರಣ ಎಂದು ಆರೋಪಿಸಲಾಗಿದೆ ಎಂದು ಖಾಸಗಿ ಸುದ್ದಿ ವಾಹಿನಿ ವರದಿ ಮಾಡಿದೆ.
ಮಿಥುನ್-ಆರತಿ ನಡುವೆ ಅಫೇರ್?
ಮಿಥುನ್ ಮನ್ಹಾಸ್ ಹಾಗೂ ಸೆಹ್ವಾಗ್ ಪತ್ನಿ ಆರತಿ ಅಹ್ಲಾವತ್ ನಡುವೆ ಆಫೇರ್ ಇದ್ದು, ಇದೇ ಕಾರಣದಿಂದಾಗಿ ಸೆಹ್ವಾಗ್ ಮಡದಿಯಿಂದ ದೂರವಾಗಿದ್ದಾರೆ ಎಂಬ ಸುದ್ದಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಮೊದಲೇ ಪೋಸ್ಟ್ ಮಾಡಿದ್ದ ಪತ್ರಕರ್ತ
ಸೋಷಿಯಲ್ ಮೀಡಿಯಾದಲ್ಲಿ ಖ್ಯಾತ ಪತ್ರಕರ್ತರೊಬ್ಬರು, ಕ್ರಿಕೆಟಿಗರಾದ ಮುರಳಿ ವಿಜಯ್ ಮತ್ತು ದಿನೇಶ್ ಕಾರ್ತಿಕ್ ಅವರ 2009 ರ ವಿವಾದವನ್ನು ಉಲ್ಲೇಖಿಸಿ, ಇದೇ ರೀತಿಯ ಪರಿಸ್ಥಿತಿ ಮತ್ತೆ ಸಂಭವಿಸಬಹುದು ಎಂಬ ಸುಳಿವು ನೀಡಿದ್ದರು. ಈ ಪೋಸ್ಟ್ ವೈರಲ್ ಆದ ಬೆನ್ನಲ್ಲೇ ಆರತಿ ಅಹ್ಲಾವತ್ ಹಾಗೂ ಮಿಥುನ್ ಮನ್ಹಾಸ್ ಜೊತೆಗಿರುವ ಫೋಟೋಗಳು ಸಮಾಜಿಕ ಜಾಲತಾಣಗಳಲ್ಲಿ ಹರಿದಾಡಲಾರಂಭಿಸಿದೆ. ಅಲ್ಲದೆ ಇಬ್ಬರು ಡೇಟಿಂಗ್ ಮಾಡುತ್ತಿದ್ದು, ಇದೇ ಕಾರಣದಿಂದಾಗಿ ಸೆಹ್ವಾಗ್ ಪತ್ನಿಯಿಂದ ದೂರವಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಹುಳಿ ಹಿಂಡಿದ್ರಾ ಆಪ್ತ ಗೆಳೆಯ?
ಇನ್ನು ಕ್ರಿಕೆಟ್ ಲೋಕದಲ್ಲಿ ವಿಚ್ಚೇದನ ಮೊದಲೇನಲ್ಲ.. ಈ ಹಿಂದೆ ಮುರಳಿ ವಿಜಯ್ ಹಾಗೂ ದಿನೇಶ್ ಕಾರ್ತಿಕ್ ಒಂದು ಕಾಲದ ಸ್ನೇಹಿತರು. ಆದರೆ ತನ್ನ ಮಾಜಿ ಪತ್ನಿ ಜೊತೆ ಮುರಳಿ ವಿಜಯ್ಗೆ ಅಕ್ರಮ ಸಂಬಂಧ ಹೊಂದಿರುವ ವಿಚಾರ ಗೊತ್ತಾಗುತ್ತಿದ್ದಂತೆ ಡಿಕೆ ಮೊದಲ ಪತ್ನಿಗೆ ಡಿವೋರ್ಸ್ ನೀಡಿದ್ದರು. ಇದೀಗ ಇದೇ ವಿಚಾರವನ್ನು ಪ್ರಸ್ತಾಪಿಸಿ ಸೆಹ್ವಾಗ್ ದಾಂಪತ್ಯ ಜೀವನದ ಕುರಿತು ಪತ್ರಕರ್ತ ಪೋಸ್ಟ್ ಮಾಡಿದ್ದಾರೆ.
ಮೂಲಗಳ ಪ್ರಕಾರ ಸೆಹ್ವಾಗ್ ಮತ್ತು ಈಗ ಆರೋಪ ಕೇಳಿಬರುತ್ತಿರುವ ಬಿಸಿಸಿಐ ಅಧ್ಯಕ್ಷ ಮಿಥುನ್ ಮನ್ಹಾಸ್ ಆಪ್ತ ಗೆಳೆಯರಾಗಿದ್ದು, ಇಬ್ಬರೂ ದೆಹಲಿ ಪರವಾಗಿ ಆಡಿದ್ದರು. ಬಿಸಿಸಿಐ ಅಧ್ಯಕ್ಷರಾದ ಮಿಥುನ್ ಮನ್ಹಾಸ್ ತನ್ನ ಸ್ನೇಹಿತನಾಗಿದ್ದ ವೀರೇಂದ್ರ ಸೆಹ್ವಾಗ್ಗೆ ನಂಬಿಕೆ ದ್ರೋಹ ಎಸೆಗಿದ್ರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗಳ ನಡುವೆ ಸೆಹ್ವಾಗ್ ಪತ್ನಿ ಜೊತೆಗಿನ ಮಿಥುನ್ ಮನ್ಹಾಸ್ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವುದು ಕೂಡ ಹೊಸ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.
21 ವರ್ಷಗಳ ದಾಂಪತ್ಯ ಜೀವನ
1999ರಲ್ಲಿ ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ವೃತ್ತಿ ಜೀವನ ಆರಂಭಿಸಿದ ವೀರೇಂದ್ರ ಸೆಹ್ವಾಗ್, 2004ರ ಏಪ್ರಿಲ್‌ನಲ್ಲಿ ಆರತಿ ಅಹ್ಲಾವತ್‌ರನ್ನು ಪ್ರೀತಿಸಿ ವಿವಾಹವಾಗಿದ್ದರು. ಈ ದಂಪತಿಗೆ ಆರ್ಯವೀರ್ ಮತ್ತು ವೇದಾಂತ್ ಹೆಸರಿನ ಇಬ್ಬರು ಮಕ್ಕಳಿದ್ದಾರೆ. ಈ ಇಬ್ಬರು ಪುತ್ರರು ತಂದೆಯಂತೆ ಕ್ರಿಕೆಟ್‌ನಲ್ಲಿ ಸಕ್ರಿಯರಾಗಿದ್ದಾರೆ. 21 ವರ್ಷಗಳ ಕಾಲ ಜೊತೆಯಾಗಿ ಬಾಳಿದ್ದ ವೀರೇಂದ್ರ ಸೆಹ್ವಾಗ್ ಹಾಗೂ ಆರತಿ ಅಹ್ಲಾವತ್ ಸದ್ಯ ಪತ್ಯೇಕವಾಗಿ ವಾಸಿಸುತ್ತಿದ್ದು, ಶೀಘ್ರದಲ್ಲೇ ಇಬ್ಬರು ವೈವಾಹಿಕ ಜೀವನಕ್ಕೆ ಇತಿಶ್ರೀ ಹಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
Advertisement