2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದ 3ನೇ ದಿನದಾಟದಲ್ಲಿ ವೆಸ್ಟ್ ಇಂಡೀಸ್ ತಂಡ ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 248 ರನ್ ಗಳಿಗೆ ಆಲೌಟ್ ಆಗಿದೆ.
Kuldeep Yadav
ಕುಲದೀಪ್ ಯಾದವ್
Updated on

ನವದೆಹಲಿ: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲೂ ಭಾರತೀಯ ಬೌಲರ್ ಗಳ ಪಾರಮ್ಯ ಮುಂದುವರೆದಿದ್ದು, ಪ್ರಮುಖವಾಗಿ ಸ್ಪಿನ್ ಮಾಂತ್ರಿಕ ಕುಲದೀಪ್ ಯಾದವ್ ದಾಖಲೆ ನಿರ್ಮಿಸಿದ್ದಾರೆ.

ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದ 3ನೇ ದಿನದಾಟದಲ್ಲಿ ವೆಸ್ಟ್ ಇಂಡೀಸ್ ತಂಡ ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 248 ರನ್ ಗಳಿಗೆ ಆಲೌಟ್ ಆಗಿದೆ.

ಆ ಮೂಲಕ ವಿಂಡೀಸ್ ತಂಡ 270 ರನ್ ಗಳ ಹಿನ್ನಡೆಯಲ್ಲಿದ್ದು ಭಾರತ ಫಾಲೋಆನ್ ಹೇರಿದೆ. ಮೂರನೇ ದಿನದಾಟದಲ್ಲಿ ವೆಸ್ಟ್ ಇಂಡೀಸ್ 81.5 ಓವರ್‌ಗಳಲ್ಲಿ 248 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡು ಆಲೌಟ್ ಆಯಿತು.

ವಿಂಡೀಸ್ ಯಾವೊಬ್ಬ ಬ್ಯಾಟರ್ ಅರ್ಧಶತಕ ಕೂಡ ಸಿಡಿಸಲಿಲ್ಲ. ಅಲಿಕ್ ಅಥನಾಜೆ ಗಳಿಸಿದ 41 ರನ್ ಗಳೇ ವಿಂಡೀಸ್ ಪರ ಬ್ಯಾಟರ್ ಓರ್ವ ಸಿಡಿಸಿದ ಗರಿಷ್ಠ ರನ್ ಗಳಿಕೆಯಾಗಿದೆ.

Kuldeep Yadav
2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಕುಲದೀಪ್ ಯಾದವ್ ಗೆ 5 ವಿಕೆಟ್

ಭಾರತದ ಪರ ಭಾರತದ ಪರ ಕುಲದೀಪ್ ಯಾದವ್ 82 ರನ್ ಗಳಿಗೆ ಐದು ವಿಕೆಟ್ ಪಡೆದು ಮಿಂಚಿದರು. ರವೀಂದ್ರ ಜಡೇಜ ಮೂರು ಮತ್ತು ಜಸ್‌ಪ್ರೀತ್ ಬೂಮ್ರಾ ಹಾಗೂ ಮೊಹಮ್ಮದ್ ಸಿರಾಜ್ ತಲಾ ಒಂದು ವಿಕೆಟ್ ಗಳಿಸಿದರು.

ವಿಶ್ವದಾಖಲೆ

ಈ ಪಂದ್ಯದಲ್ಲಿ ಕುಲದೀಪ್ ಯಾದವ್ 5 ವಿಕೆಟ್ ಗಳನ್ನು ಪಡೆದಿದ್ದು, ಇದು ಅವರ 5ನೇ 5 ವಿಕೆಟ್ ಗಳ ಗೊಂಚಲಾಗಿದೆ. ಆ ಮೂಲಕ ಭಾರತದ ರಿಸ್ಟ್ ಸ್ಪಿನ್ನರ್ ಅಪರೂಪದ ದಾಖಲೆ ನಿರ್ಮಿಸಿದ್ದು, ಅತೀ ಹೆಚ್ಚು ಬಾರಿ 5 ವಿಕೆಟ್ ಗೊಂಚಲು ಪಡೆದ ಮೊದಲ ಎಡಗೈ ಸ್ಪಿನ್ನರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಆ ಮೂಲಕ ಇಂಗ್ಲೆಂಡ್‌ನ ಮಾಜಿ ಸ್ಪಿನ್ನರ್ ಜಾನಿ ವಾರ್ಡ್ಲೆ ಅವರ ದಾಖಲೆಯನ್ನು ಕುಲದೀಪ್ ಯಾದವ್ ಹಿಂದಿಕ್ಕಿದ್ದಾರೆ. ಎಡಗೈ ಚೈನಾಮನ್ ಬೌಲರ್ ವಾರ್ಡೆಲ್‌ಗಿಂತ 13 ಟೆಸ್ಟ್‌ಗಳಲ್ಲಿ ವೇಗವಾಗಿ ಈ ಸಾಧನೆ ಮಾಡಿದ್ದಾರೆ, ಇದರಿಂದಾಗಿ ಚೈನಾಮನ್ ಬೌಲರ್‌ಗಳಲ್ಲಿ ಈ ಸಾಧನೆಯನ್ನು ವೇಗವಾಗಿ ಮಾಡಿದ ಬೌಲರ್ ಎನಿಸಿಕೊಂಡಿದ್ದಾರೆ.

Most five-fers by left arm wrist spinners (Tests)

  • 5 Kuldeep Yadav (15 Tests)

  • 5 Johnny Wardle (28)

  • 4 Paul Adams (45)

ಈ ಟೆಸ್ಟ್ ಪಂದ್ಯಕ್ಕೂ ಮುನ್ನ ಕೊನೆಯ ಬಾರಿಗೆ ಭಾರತ 300 ಕ್ಕಿಂತ ಕಡಿಮೆ ಮುನ್ನಡೆಯೊಂದಿಗೆ ಫಾಲೋ-ಆನ್ ಹೇರಿದ್ದು 2015 ರಲ್ಲಿ ಫತುಲ್ಲಾದಲ್ಲಿ ಬಾಂಗ್ಲಾದೇಶ ವಿರುದ್ಧ ವಿರಾಟ್ ಕೊಹ್ಲಿ, ಆ ಪಂದ್ಯದಲ್ಲಿ ಒಂದು ದಿನದ ಆಟ ಮಳೆಯಿಂದ ರದ್ದಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com