
ಅಡಿಲೇಡ್: ಗುರುವಾರ ಇಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಮಿಚೆಲ್ ಮಾರ್ಷ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.
ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ, ಆದರೆ ಆಸ್ಟ್ರೇಲಿಯಾ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದ್ದು, ಜೋಶ್ ಫಿಲಿಪ್ ಬದಲಿಗೆ ಅಲೆಕ್ಸ್ ಕ್ಯಾರಿ ಮತ್ತು ನಾಥನ್ ಎಲ್ಲಿಸ್ ಬದಲಿಗೆ ಕ್ಸೇವಿಯರ್ ಬಾರ್ಟ್ಲೆಟ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಮೂರು ಬದಲಾವಣೆಗಳೊಂದಿಗೆ ಕಣಕ್ಕಿಳಿದಿರುವ ಆಸೀಸ್ ಸರಣಿ ಗೆಲ್ಲುವ ತವಕದಲ್ಲಿದ್ದರೆ, ಯಾವುದೇ ಬದಲಾವಣೆ ಇಲ್ಲದ ಟೀಂ ಇಂಡಿಯಾ ಸರಣಿ ಜೀವಂತವಾಗಿರಿಸಿಕೊಳ್ಳಲು ಹೋರಾಡಲಿದೆ.
ತಂಡಗಳು: ಭಾರತ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಅರ್ಶ್ದೀಪ್ ಸಿಂಗ್, ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ: ಮಿಚೆಲ್ ಮಾರ್ಷ್ (ನಾಯಕ), ಟ್ರಾವಿಸ್ ಹೆಡ್, ಮ್ಯಾಥ್ಯೂ ಶಾರ್ಟ್, ಮ್ಯಾಥ್ಯೂ ರೆನ್ಶಾ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕೂಪರ್ ಕಾನೊಲ್ಲಿ, ಮಿಚೆಲ್ ಓವನ್, ಕ್ಸೇವಿಯರ್ ಬಾರ್ಟ್ಲೆಟ್, ಮಿಚೆಲ್ ಸ್ಟಾರ್ಕ್, ಆಡಮ್ ಜಂಪಾ, ಜೋಶ್ ಹ್ಯಾಜಲ್‌ವುಡ್.
Advertisement