

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಭಾರತ 9 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ನೀಡಿದ್ದ 237 ರನ್ ಗಳ ಸಾಧಾರಣ ಗುರಿಯನ್ನು ಬೆನ್ನು ಹತ್ತಿರುವ ಭಾರತ ತಂಡ ರೋಹಿತ್ ಶರ್ಮಾ ಶತಕ ಮತ್ತು ವಿರಾಟ್ ಕೊಹ್ಲಿ ಅವರ ಅರ್ಧಶತಕದ ನೆರವಿನಿಂದ ಗೆಲುವು ಸಾಧಿಸಿದೆ.
ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಇಂದು ನಡೆದ 3ನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ನೀಡಿದ್ದ 237 ರನ್ ಗಳ ಸಾಧಾರಣ ಗುರಿ ನೀಡಿತ್ತು.
ಆಸಿಸ್ ನ ಗುರಿಯನ್ನು ಬೆನ್ನು ಹತ್ತಿದ ಭಾರತ ತಂಡ ಆರಂಭಿಕ ಆಘಾತ ಎದುರಿಸಿತ್ತು. 24 ರನ್ ಗಳಿಸಿ ನಾಯಕ ಶುಭ್ ಮನ್ ಗಿಲ್ ಹೇಜಲ್ ವುಡ್ ಗೆ ವಿಕೆಟ್ ಒಪ್ಪಿಸಿದರು.
ಬಳಿಕ ರೋಹಿತ್ ಶರ್ಮಾ ಜೊತೆಗೂಡಿದ ವಿರಾಟ್ ಕೊಹ್ಲಿ ಪ್ರಬಲ ಆಸಿಸ್ ಗೆ ಅವಕಾಶವನ್ನೇ ನೀಡಲಿಲ್ಲ. ರೋಹಿತ್ ಶರ್ಮಾ ಶತಕ ಮತ್ತು ವಿರಾಟ್ ಕೊಹ್ಲಿ ಅವರ ಅರ್ಧಶತಕದ ನೆರವಿನಿಂದ ಭಾರತ ಭರ್ಜರಿ ಗೆಲವು ದಾಖಲಿಸಿತು.
ಭಾರತ 38.3 ಓವರ್ ನಲ್ಲಿಯೇ 1 ವಿಕೆಟ್ ಮಾತ್ರ ಕಳೆದುಕೊಂಡು 237 ರನ್ ಗಳಿಸಿ 9 ವಿಕೆಟ್ ಗಳ ಗೆಲುವು ದಾಖಲಿಸಿತು. ಆ ಮೂಲಕ 3 ಪಂದ್ಯಗಳ ಏಕದಿನ ಸರಣಿಯಲ್ಲಿ 2-1 ಅಂತರದಲ್ಲಿ ಸೋಲು ಕಂಡಿತು.
Advertisement