3rd ODI: ಕುಮಾರ ಸಂಗಕ್ಕಾರ, ಸಚಿನ್ ತೆಂಡೂಲ್ಕರ್ ದಾಖಲೆ ಸೇರಿ ಹಲವು ರೆಕಾರ್ಡ್ಸ್ ಮುರಿದ Virat Kohli

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಇಂದು ನಡೆದ 3ನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ನೀಡಿದ್ದ 237 ರನ್ ಗಳ ಗುರಿಯ ಬೆನ್ನು ಹತ್ತಿದ ಭಾರತ ಕೇವಲ 1 ವಿಕೆಟ್ ಮಾತ್ರ ಕಳೆದುಕೊಂಡು 38.3 ಓವರ್ ನಲ್ಲಿ 237 ರನ್ ಗಳಿಸಿ 9 ವಿಕೆಟ್ ಗಳ ಅಂತರದ ಭರ್ಜರಿ ಜಯ ದಾಖಲಿಸಿತು.
Virat Kohli
ವಿರಾಟ್ ಕೊಹ್ಲಿ
Updated on

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಶೂನ್ಯ ಸುತ್ತಿ ನಿರಾಶೆ ಮೂಡಿಸಿದ್ದ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಅಂತಿಮ ಹಾಗೂ 3ನೇ ಏಕದಿನ ಪಂದ್ಯದಲ್ಲಿ ತಮ್ಮ ವಿರಾಟ ರೂಪ ಪ್ರದರ್ಶಿಸಿದ್ದಾರೆ.

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಇಂದು ನಡೆದ 3ನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ನೀಡಿದ್ದ 237 ರನ್ ಗಳ ಗುರಿಯ ಬೆನ್ನು ಹತ್ತಿದ ಭಾರತ ಕೇವಲ 1 ವಿಕೆಟ್ ಮಾತ್ರ ಕಳೆದುಕೊಂಡು 38.3 ಓವರ್ ನಲ್ಲಿ 237 ರನ್ ಗಳಿಸಿ 9 ವಿಕೆಟ್ ಗಳ ಅಂತರದ ಭರ್ಜರಿ ಜಯ ದಾಖಲಿಸಿತು.

ಭಾರತದ ಪರ ನಾಯಕ ಶುಭ್ ಮನ್ ಗಿಲ್ 24 ರನ್ ಗಳಿಸಿದರೆ, ರೋಹಿತ್ ಶರ್ಮಾ 121 ರನ್ ಸಿಡಿಸಿದರು. ರೋಹಿತ್ ಶರ್ಮಾಗೆ ಭರ್ಜರಿ ಸಾಥ್ ನೀಡಿದ ವಿರಾಟ್ ಕೊಹ್ಲಿ 74 ರನ್ ಸಿಡಿಸಿ ಭಾರತದ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದರು.

ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ 125 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 13 ಬೌಂಡರಿ ಸಹಿತ 121 ರನ್ ಗಳಿಸಿದರೆ, ಅವರಿಗೆ ಉತ್ತಮ ಸಾಥ್ ನೀಡಿದ ವಿರಾಟ್ ಕೊಹ್ಲಿ ಕೂಡ 81 ಎಸೆತಗಳಲ್ಲಿ 7 ಬೌಂಡರಿ ಸಹಿತ 74 ರನ್ ಗಳಿಸಿದರು.

Virat Kohli
3rd ODI: 'ರೋ-ಕೊ' ಭರ್ಜರಿ ಕಮ್ ಬ್ಯಾಕ್; ಸಿಡ್ನಿಯಲ್ಲಿ ಭಾರತಕ್ಕೆ 9 ವಿಕೆಟ್ ಭರ್ಜರಿ ಜಯ

ಸಚಿನ್ ತೆಂಡೂಲ್ಕರ್ ಮತ್ತೊಂದು ದಾಖಲೆ ಪತನ

ಇನ್ನು ಇಂದಿನ ತಮ್ಮ ಅಮೋಘ ಬ್ಯಾಟಿಂಗ್ ಮೂಲಕ ಕೊಹ್ಲಿ ಸಚಿನ್ ತೆಂಡೂಲ್ಕರ್ ರ ಮತ್ತೊಂದು ದಾಖಲೆ ಮುರಿದಿದ್ದಾರೆ. ಚೇಸಿಂಗ್ ನಲ್ಲಿ ಭಾರತದ ಪರ ಅತೀ ಹೆಚ್ಚು ಬಾರಿ 50 ಪ್ಲಸ್ ರನ್ ಸ್ಕೋರ್ ಮಾಡಿದ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಕೊಹ್ಲಿ ಚೇಸಿಂಗ್ ವೇಳೆ ಒಟ್ಟು 70 ಬಾರಿ 50ಕ್ಕೂ ಅಧಿಕ ರನ್ ಗಳಿಸಿದ್ದು, 69 ಬಾರಿ ಈ ಸಾಧನೆ ಮಾಡಿದ್ದ ಸಚಿನ್ ತೆಂಡೂಲ್ಕರ್ 2ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.

ಇಂದಿನ ಪಂದ್ಯದ ಸ್ಟಾರ್ ರೋಹಿತ್ ಶರ್ಮಾ 55 ಬಾರಿ ಈ ಸಾಧನೆ ಮಾಡಿದ್ದು, ಚೇಸಿಂಗ್ ವೇಳೆ 50 ಬಾರಿ 50ಕ್ಕೂ ಅಧಿಕ ರನ್ ಕಲೆಹಾಕಿರುವ ದಕ್ಷಿಣ ಆಫ್ರಿಕಾದ ಜಾಕ್ ಕಾಲಿಸ್ 4ನೇ ಸ್ಥಾನಕ್ಕೆ ಮತ್ತು 46 ಬಾರಿ 50ಕ್ಕೂ ಅಧಿಕ ರನ್ ಕಲೆಹಾಕಿರುವ ವೆಸ್ಟ್ ಇಂಡೀಸ್ ನ ಕ್ರಿಸ್ ಗೇಯ್ಲ್ 5ನೇ ಸ್ಥಾನದಲ್ಲಿದ್ದಾರೆ.

ಸಂಗಕ್ಕಾರ ದಾಖಲೆಯೂ ಪತನ

ಇನ್ನು ಇದೇ ವೇಳೆ ವಿರಾಟ್ ಕೊಹ್ಲಿ ಶ್ರೀಲಂಕಾದ ದಂತಕಥೆ ಕುಮಾರ ಸಂಗಕ್ಕಾರ ಅವರ ದಾಖಲೆಯನ್ನೂ ಹಿಂದಿಕ್ಕಿದ್ದಾರೆ. ಏಕದಿನ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ ಸಂಗಕ್ಕಾರ ಅವರ ಅತೀ ಹೆಚ್ಚು ರನ್ ಗಳಿಕೆ ದಾಖಲೆಯನ್ನು ಮುರಿದಿದ್ದಾರೆ.

ಕೊಹ್ಲಿ 293 ಇನ್ನಿಂಗ್ಲ್ ಗಳಿಂದ ಒಟ್ಟು 14255 ರನ್ ಗಳಿಸಿದ್ದು ಆ ಮೂಲಕ 14234 ರನ್ ಗಳಿಸಿದ್ದ ಕುಮಾರ ಸಂಗಕ್ಕಾರ ಅವರ ದಾಖಲೆಯನ್ನು ಮುರಿದಿದ್ದಾರೆ. ಸಂಗಕ್ಕಾರ ಒಟ್ಟು 380 ಇನ್ನಿಂಗ್ಸ್ ನಲ್ಲಿ ಇಷ್ಟು ರನ್ ಕಲೆಹಾಕಿದ್ದರು.

ಉಳಿದಂತೆ ಈ ಪಟ್ಟಿಯಲ್ಲಿ ಭಾರತದ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದು ಸಚಿನ್ ಒಟ್ಟು 452 ಇನ್ನಿಂಗ್ಸ್ ನಲ್ಲಿ 18426 ರನ್ ಗಳನ್ನು ಕಲೆಹಾಕಿದ್ದಾರೆ. ಸಚಿನ್ ನಿವೃತ್ತಿಯಾಗಿ ವರ್ಷಗಳೇ ಕಳೆದರೂ ಈ ದಾಖಲೆಯನ್ನು ಮಾತ್ರ ಇನ್ನೂ ಪತನ ಮಾಡಲು ಸಾಧ್ಯವಾಗಿಲ್ಲ.

ಉಳಿದಂತೆ ಈ ಪಟ್ಟಿಯಲ್ಲಿ 13704 ಆಸ್ಟ್ರೇಲಿಯಾದ ಮಾಜಿ ನಾಯಕ ರಿಕ್ಕಿ ಪಾಂಟಿಂಗ್ 4ನೇ ಸ್ಥಾನ ಮತ್ತು 13430 ರನ್ ಗಳಿಸಿರುವ ಶ್ರೀಲಂಕಾದ ಸನತ್ ಜಯಸೂರ್ಯ 5ನೇ ಸ್ಥಾನದಲ್ಲಿದ್ದಾರೆ.

Most runs on ODIs

  • 18426 Sachin Tendulkar (452 innings)

  • 14255 Virat Kohli (293)

  • 14234 Kumar Sangakkara (380)

  • 13704 Ricky Ponting (365)

  • 13430 Sanath Jayasuriya (433)

Virat Kohli
3rd ODI: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್; ಕ್ರಿಕೆಟ್ ಇತಿಹಾಸದ ಹಲವು ದಾಖಲೆ ಪತನ

ಆಸಿಸ್ ವಿರುದ್ಧ ಅತೀ ಹೆಚ್ಚು 50 ಪ್ಲಸ್ ರನ್

ಇನ್ನು ವಿರಾಟ್ ಕೊಹ್ಲಿ ಚೇಸಿಂಗ್ ನಲ್ಲಿ ಅತೀ ಹೆಚ್ಚು 50 ಪ್ಲಸ್ ರನ್ ಗಳಿಸಿದ್ದು, ಈ ಪೈಕಿ ಅತೀ ಹೆಚ್ಚು ಬಾರಿ ಅಂದರೆ 24 ಬಾರಿ ಆಸ್ಟ್ರೇಲಿಯಾ ವಿರುದ್ಧ ಈ ಸಾಧನೆ ಮಾಡಿದ್ದಾರೆ.

ಅಂತೆಯೇ ಇಂದಿನ ಅರ್ಧಶತಕದ ಮೂಲಕ ಕೊಹ್ಲಿ ತಮ್ಮ 75ನೇ ಅರ್ಧಶತಕ ಪೂರ್ಣಗೊಳಿಸಿದರು. ಮಾತ್ರವಲ್ಲದೇ ಆಸ್ಚ್ರೇಲಿಯಾ ವಿರುದ್ದ 2500 ರನ್ ಗಳಿಸಿದ ಕೀರ್ತಿಗೂ ಭಾಜನರಾದರು. ಆ ಮೂಲಕ ಈ ಸಾಧನೆ ಮಾಡಿದ ಭಾರತದ ಮೂರನೇ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com