

ಸಿಡ್ನಿ: 3 ಪಂದ್ಯಗಳ ಏಕದಿನ ಸರಣಿಯ ಕೊನೆ ಪಂದ್ಯದಲ್ಲಿ ಭಾರತ-ಆಸ್ಟ್ರೇಲಿಯಾ ಸಿಡ್ನಿಯಲ್ಲಿ ಇಂದು ಮುಖಾಮುಖಿಯಾಗುತ್ತಿದ್ದು, ಆಸ್ಟ್ರೇಲಿಯಾ ಸತತ 3ನೇ ಪಂದ್ಯದಲ್ಲೂ ಟಾಸ್ ಗೆದ್ದಿದ್ದು, ಇಂದು ಬ್ಯಾಟಿಂಗ್ ಮಾಡುವ ನಿರ್ಧಾರ ತೆಗೆದುಕೊಂಡಿದೆ.
ಈಗಾಗಲೇ ಸರಣಿ ಗೆದ್ದಿರುವ ಆಸ್ಟ್ರೇಲಿಯಾ ಇಂದು ಬ್ಯಾಟಿಂಗ್ ಪರೀಕ್ಷೆ ನಡೆಸಲು ಸಿದ್ಧವಾಗಿದೆ. ಕಳೆದ ಎರಡು ಪಂದ್ಯಗಳಲ್ಲಿ ಟಾಸ್ ಗೆದ್ದು ಚೇಸಿಂಗ್ ಮಾಡಿ ಸಕ್ಸಸ್ ಆಗಿತ್ತು. ಇನ್ನು ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಒಂದು ಬದಲಾವಣೆ ಮಾಡಿಕೊಂಡಿದೆ. ಕ್ಸೇವಿಯರ್ ಬಾರ್ಟ್ಲೆಟ್ ಬದಲಿಗೆ ನಾಥನ್ ಎಲಿಸ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.
ಭಾರತ 2 ಬದಲಾವಣೆ ಮಾಡಿಕೊಂಡಿದೆ. ಭಾರತದ ನಾಯಕ ಶುಭ್ಮನ್ ಗಿಲ್ ಮಣಿಕಟ್ಟಿನ ಸ್ಪಿನ್ನರ್ ಕುಲದೀಪ್ ಯಾದವ್ ಮತ್ತು ವೇಗಿ ಅರ್ಶ್ದೀಪ್ ಸಿಂಗ್ ಮತ್ತು ನಿತೀಶ್ ಕುಮಾರ್ ರೆಡ್ಡಿ ಬದಲಿಗೆ ಪ್ರಸಿದ್ಧ್ ಕೃಷ್ಣ ಅವರನ್ನು ತಂಡಕ್ಕೆ ಸೇರಿಸಿಕೊಂಡಿದ್ದಾರೆ.
ಭಾರತದ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಗಿಟ್ಟಿಸುಕೊಳ್ಳುವಲ್ಲಿ ಕುಲ್ದೀಪ್ ಯಾದವ್ ಕೊನೆಗೂ ಯಶಸ್ವಿಯಾಗಿದ್ದಾರೆ. ಪರ್ತ್ ಮತ್ತು ಅಡಿಲೇಡ್‌ನಲ್ಲಿ ಅವರನ್ನು ಆಡಿಸದ ಸಾಕಷ್ಟು ಬಗ್ಗೆ ಚರ್ಚೆ ನಡೆದಿತ್ತು. ಆದಾಗ್ಯೂ, ಹಿಂದಿನ ಎರಡು ಸೋಲುಗಳಿಂದ ಪಾಠ ಕಲಿತ ಟೀಂ ಇಂಡಿಯಾ ಮ್ಯಾನೇಜ್ಮೆಂಟ್, ಸಿಡ್ನಿಯಲ್ಲಿ ಕುಲ್ದೀಪ್ ಅವರಿಗೆ ಆಡುವ ಅವಕಾಶ ಕೊಟ್ಟಿದೆ.
ಎಡಗೈನ ಸ್ನಾಯುಗಳ ಗಾಯದಿಂದಾಗಿ ರೆಡ್ಡಿ ಮೂರನೇ ಏಕದಿನ ಪಂದ್ಯವನ್ನು ತಪ್ಪಿಸಿಕೊಂಡಿದ್ದಾರೆ.
ಅಡಿಲೇಡ್‌ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ನಿತೀಶ್ ಕುಮಾರ್ ರೆಡ್ಡಿ ಎಡಗೈ ಸ್ನಾಯು ಗಾಯಕ್ಕೆ ಒಳಗಾದರು. ನಂತರ ಮೂರನೇ ಏಕದಿನ ಪಂದ್ಯಕ್ಕೆ ಆಯ್ಕೆಗೆ ಲಭ್ಯವಾಗಲಿಲ್ಲ. ಬಿಸಿಸಿಐ ವೈದ್ಯಕೀಯ ತಂಡವು ಅವರನ್ನು ಪ್ರತಿದಿನವೂ ಮೇಲ್ವಿಚಾರಣೆ ಮಾಡುತ್ತಿದೆ ಎಂದು ತಂಡದ ಆಡಳಿತ ಮಂಡಳಿ ಹೇಳಿಕೆಯಲ್ಲಿ ತಿಳಿಸಿದೆ.
ಪರ್ತ್ ಮತ್ತು ಅಡಿಲೇಡ್‌ನಲ್ಲಿ ಸೋತಿರುವ ಭಾರತ ಸರಣಿಯಲ್ಲಿ 0-2 ಹಿನ್ನಡೆಯಲ್ಲಿದೆ.
ಭಾರತ ತಂಡ: ರೋಹಿತ್ ಶರ್ಮಾ, ಶುಭ್‌ಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಟ್ರಾವಿಸ್ ಹೆಡ್, ಮ್ಯಾಥ್ಯೂ ಶಾರ್ಟ್, ಮ್ಯಾಟ್ ರೆನ್‌ಶಾ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕೂಪರ್ ಕೊನೊಲ್ಲಿ, ಮಿಚೆಲ್ ಓವನ್, ನಾಥನ್ ಎಲ್ಲಿಸ್, ಮಿಚೆಲ್ ಸ್ಟಾರ್ಕ್, ಆಡಮ್ ಜಂಪಾ, ಜೋಶ್ ಹ್ಯಾಜಲ್‌ವುಡ್.
Advertisement