

ಕ್ಯಾನ್ ಬೆರಾ: ಪ್ರಬಲ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ನಾಯಕ ಸೂರ್ಯ ಕುಮಾರ್ ಯಾದವ್ ಅಪರೂಪದ ದಾಖಲೆ ನಿರ್ಮಿಸಿದ್ದಾರೆ.
ಆಸ್ಟ್ರೇಲಿಯಾದ ಕ್ಯಾನ್ ಬೆರಾದ ಮನುಕಾ ಓವಲ್ ಕ್ರೀಡಾಂಗಣದಲ್ಲಿ ಇಂದು ನಡೆದ ಮೊದಲ ಟಿ20 ಪಂದ್ಯ ಮಳೆಯಿಂದಾಗಿ ಯಾವುದೇ ಫಲಿತಾಂಶವಿಲ್ಲದೇ ರದ್ದಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬೌಲಿಂಗ್ ಆರಿಸಿಕೊಂಡಿತು.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ 9.4 ಓವರ್ ನಲ್ಲಿ 1 ವಿಕೆಟ್ ನಷ್ಟಕ್ಕೆ 97 ರನ್ ಗಳಿಸಿತ್ತು. ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ 14 ಎಸೆತಗಳಲ್ಲಿ 4 ಬೌಂಡರಿ ಸಹಿತ 19 ರನ್ ಗಳಿಸಿ ನಾಥನ್ ಎಲ್ಲಿಸ್ ಬೌಲಿಂಗ್ ನಲ್ಲಿ ಔಟ್ ಆದರು. ಬಳಿಕ ಶುಭ್ ಮನ್ ಗಿಲ್ ಜೊತೆಗೂಡಿದ ನಾಯಕ ಸೂರ್ಯ ಕುಮಾರ್ ಯಾದವ್ 62 ರನ್ ಗಳ ಜೊತೆಯಾಟ ಆಡಿದರು.
ಈ ಪೈಕಿ ಗಿಲ್ 20 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 4 ಬೌಂಡರಿ ಸಹಿತ 37 ರನ್ ಗಳಿಸಿದರೆ, ಸೂರ್ಯ ಕುಮಾರ್ ಯಾದವ್ 24 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 3 ಬೌಂಡರಿ ಸಹಿತ 39 ರನ್ ಕಲೆಹಾಕಿದ್ದರು. ಭಾರತ ತನ್ನ 10ನೇ ಓವರ್ ಆಡುತ್ತಿದ್ದಾಗ ಜೋರು ಮಳೆ ಬಂದು ಪಂದ್ಯ ಸ್ಥಗಿತವಾಗುವಂತೆ ಮಾಡಿತು.
ಸೂರ್ಯ ಕುಮಾರ್ ಯಾದವ್ ದಾಖಲೆ
ಇನ್ನು ಇಂದಿನ ತಮಗೆ ದೊರೆತ ಅಲ್ಪಾವಧಿಯಲ್ಲೇ ಸೂರ್ಯ ಕುಮಾರ್ ಯಾದವ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದರು. 24 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 3 ಬೌಂಡರಿ ಸಹಿತ 39 ರನ್ ಕಲೆಹಾಕಿದರು. ಅಂತೆಯೇ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ ತಮ್ಮ ಸಿಕ್ಸರ್ ಗಳ ಸಂಖ್ಯೆಯನ್ನು 150ಕ್ಕೆ ಏರಿಕೆ ಮಾಡಿಕೊಂಡರು. ಆ ಮೂಲಕ ಸೂರ್ಯ ಕುಮಾರ್ ಯಾದವ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ 5ನೇ ಬ್ಯಾಟರ್ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.
ಎಲೈಟ್ ಗ್ರೂಪ್ ಸೇರ್ಪಡೆ
ಅಂತೆಯೇ ಸೂರ್ಯ ಕುಮಾರ್ ಯಾದವ್ ರೋಹಿತ್ ಶರ್ಮಾ ಅಗ್ರಸ್ಥಾನದಲ್ಲಿರುವ ಎಲೈಟ್ ಗ್ರೂಪ್ ಗೆ ಸೇರ್ಪಡೆಯಾಗಿದ್ದಾರೆ. ಈ ಪಟ್ಟಿಯಲ್ಲಿ ಅತೀ ಹೆಚ್ಚು ಸಿಕ್ಸರ್ ಸಿಡಿಸಿರುವ ಆಟಗಾರರ ಪೈಕಿ 205 ಸಿಕ್ಸರ್ ಸಿಡಿಸಿರುವ ಭಾರತ ರೋಹಿತ್ ಶರ್ಮಾ ಅಗ್ರಸ್ಥಾನದಲ್ಲಿದ್ದು, 187 ಸಿಕ್ಸರ್ ಗಳೊಂದಿಗೆ ಮುಹಮದ್ ವಾಸೀಂ 2ನೇ ಸ್ಥಾನದಲ್ಲಿದ್ದಾರೆ. ಮೂರನೇ ಸ್ಥಾನದಲ್ಲಿ 173 ಸಿಕ್ಸರ್ ಸಿಡಿಸಿರುವ ಮಾರ್ಟಿನ್ ಗಪ್ಟಿಲ್ ಇದ್ದು, 172 ಸಿಕ್ಸರ್ ಸಿಡಿಸಿರುವ ಇಂಗ್ಲೆಂಡ್ ತಂಡದ ಜಾಸ್ ಬಟ್ಲರ್ 4ನೇ ಸ್ಥಾನದಲ್ಲಿದ್ದಾರೆ.
150 ಸಿಕ್ಸರ್ ಗಳೊಂದಿಗೆ ಸೂರ್ಯ ಕುಮಾರ್ ಯಾದವ್ 5ನೇ ಸ್ಥಾನದಲ್ಲಿದ್ದಾರೆ.
150+ sixes in T20 Internationals
205 Rohit Sharma
187 Muhammad Waseem
173 Martin Guptill
172 Jos Buttler
150 Suryakumar Yadav*
Advertisement