

ಮಂಗಳವಾರ ಕ್ಯಾನ್‌ಬೆರಾದಲ್ಲಿ ನಡೆಯಲಿರುವ ಮೊದಲ ಟಿ20ಐ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ತಂಡ ಆಸ್ಟ್ರೇಲಿಯಾ ವಿರುದ್ಧ ಆಡಲಿದ್ದು, ಭಾರತ ತಂಡವು ತನ್ನ ಅದ್ಭುತ ಫಾರ್ಮ್ ಅನ್ನು ಮುಂದುವರಿಸಲು ಎದುರು ನೋಡುತ್ತಿದೆ. ಒಂದೇ ಒಂದು ಪಂದ್ಯವನ್ನು ಸೋಲದೆ 2025ರ ಏಷ್ಯಾಕಪ್ ಪ್ರಶಸ್ತಿಯನ್ನು ಗೆದ್ದುಕೊಂಡ ಭಾರತದ ಆಟಗಾರರು ಆಸ್ಟ್ರೇಲಿಯಾದಲ್ಲಿಯೂ ಇದೇ ರೀತಿಯ ಯಶಸ್ಸನ್ನು ಸಾಧಿಸುವ ವಿಶ್ವಾಸ ಹೊಂದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಭಾರತ ಮೂರನೇ ಏಕದಿನ ಪಂದ್ಯವನ್ನು ಗೆದ್ದರೂ 1-2 ಅಂತರದಿಂದ ಸರಣಿ ಸೋಲು ಕಂಡಿದೆ.
ಟಿ20ಐನಲ್ಲಿ ಅಗ್ರ ಶ್ರೇಯಾಂಕಿತ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಉಪನಾಯಕ ಶುಭಮನ್ ಗಿಲ್ ಜೊತೆ ಇನಿಂಗ್ಸ್ ಆರಂಭಿಸುವ ನಿರೀಕ್ಷೆಯಿದೆ. ಏಷ್ಯಾಕಪ್‌ನಲ್ಲಿ ಗಿಲ್ ಉತ್ತಮ ಪ್ರದರ್ಶನ ನೀಡಲಿಲ್ಲ. ಸಂಜು ಸ್ಯಾಮ್ಸನ್ ಮತ್ತು ಯಶಸ್ವಿ ಜೈಸ್ವಾಲ್ ಇಬ್ಬರೂ ಆರಂಭಿಕ ಸ್ಥಾನಕ್ಕಾಗಿ ಪೈಪೋಟಿಯಲ್ಲಿರುವುದರಿಂದ ಸ್ಟಾರ್ ಬ್ಯಾಟ್ಸ್‌ಮನ್ ರನ್ ಗಳಿಸುವುದು ಮುಖ್ಯವಾಗುತ್ತದೆ.
ಭಾರತದ ಏಷ್ಯಾ ಕಪ್ ಹೀರೋ ತಿಲಕ್ ವರ್ಮಾ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ನಿರೀಕ್ಷೆಯಿದ್ದು, ನಾಯಕ ಸೂರ್ಯಕುಮಾರ್ ಯಾದವ್ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಸಾಧ್ಯತೆ ಇದೆ. ಸಂಜು ಸ್ಯಾಮ್ಸನ್ 5ನೇ ಕ್ರಮಾಂಕದಲ್ಲಿ, ಶಿವಂ ದುಬೆ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ನಿರೀಕ್ಷೆಯಿದೆ.
ದುಬೆ ಜೊತೆಗೆ ಅಕ್ಷರ್ ಪಟೇಲ್ ಮತ್ತೊಬ್ಬ ಆಲ್‌ರೌಂಡರ್ ಆಗುವ ನಿರೀಕ್ಷೆಯಿದ್ದರೆ, ಮೂರನೇ ಏಕದಿನ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಹರ್ಷಿತ್ ರಾಣಾ ಆಡುವ ಹನ್ನೊಂದರಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ.
ಬೌಲಿಂಗ್ ವಿಭಾಗಕ್ಕೆ ಬಂದರೆ, ಕುಲದೀಪ್ ಯಾದವ್ ಹೊರಗುಳಿದಿರುವಾಗ ವರುಣ್ ಚಕ್ರವರ್ತಿ ಮಾತ್ರ ವಿಶೇಷ ಸ್ಪಿನ್ನರ್ ಆಗಿ ಆಡುವ ನಿರೀಕ್ಷೆಯಿದೆ. ಮೂರನೇ ಏಕದಿನ ಪಂದ್ಯದಲ್ಲಿ ಕುಲದೀಪ್ ಉತ್ತಮವಾಗಿ ಬೌಲಿಂಗ್ ಮಾಡಿದರೂ, ಭಾರತ ಮೂರು ಸ್ಪಿನ್ ಆಯ್ಕೆಗಳೊಂದಿಗೆ ಆಡುವ ಸಾಧ್ಯತೆ ಕಡಿಮೆ. ಜಸ್ಪ್ರೀತ್ ಬುಮ್ರಾ ಮತ್ತು ಅರ್ಶದೀಪ್ ಸಿಂಗ್ ವೇಗದ ಬೌಲಿಂಗ್ ಆಯ್ಕೆಗಳಾಗುವ ನಿರೀಕ್ಷೆಯಿದೆ.
ಭಾರತದ ಸಂಭಾವ್ಯ ಪ್ಲೇಯಿಂಗ್ XI
ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಅರ್ಶದೀಪ್ ಸಿಂಗ್.
Advertisement