

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ನಡುವೆ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಐದು ಪಂದ್ಯಗಳ ಟಿ20ಐ ಸರಣಿಯ ಎರಡನೇ ಪಂದ್ಯ ನಡೆಯಿತು. ಕ್ಯಾನ್‌ಬೆರಾದಲ್ಲಿ ನಡೆದ ಮೊದಲ ಟಿ20 ಮಳೆಯಿಂದ ರದ್ದಾಗಿತ್ತು. ಇದೀಗ ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 4 ವಿಕೆಟ್‌ಗಳಿಂದ ಗೆದ್ದಿದೆ. ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 125 ರನ್‌ಗಳಿಗೆ ಆಲೌಟ್ ಆಗಿತ್ತು.
ಎಂಸಿಜಿಯಲ್ಲಿ ನಡೆದ ಎರಡನೇ ಟಿ20ಐ ಅನ್ನು ಆಸ್ಟ್ರೇಲಿಯಾ ನಾಲ್ಕು ವಿಕೆಟ್‌ಗಳಿಂದ ಗೆದ್ದುಕೊಂಡಿತು. ಕೇವಲ 13.2 ಓವರ್‌ಗಳಲ್ಲಿ 126 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ಸ್ಫೋಟಕ ಬ್ಯಾಟಿಂಗ್ ಮಾಡಿತು. ನಾಯಕ ಮಿಚೆಲ್ ಮಾರ್ಷ್ 46 ರನ್‌ಗಳೊಂದಿಗೆ ಗರಿಷ್ಠ ಸ್ಕೋರರ್ ಗಳಿಸಿದರು. ಭಾರತದ ಪರ ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್ ಮತ್ತು ವರುಣ್ ಚಕ್ರವರ್ತಿ ತಲಾ ಎರಡು ವಿಕೆಟ್ ಪಡೆದರು.
ಭಾರತದ ಪರ ಆರಂಭಿಕ ಬ್ಯಾಟರ್ ಅಭಿಶೇಕ್ ಶರ್ಮಾ 68 ರನ್ ಮತ್ತು ಹರ್ಷಿತ್ ರಾಣಾ 35 ರನ್ ಬಾರಿಸಿ ತಂಡ ಅಲ್ಪ ಮೊತ್ತಕ್ಕೆ ಕುಸಿಯುವುದರಿಂದ ತಪ್ಪಿಸಿದರು. ಇನ್ನು ಭಾರತದ ಪರ ಯಾವೊಬ್ಬ ಆಟಗಾರನ್ನೂ ಎರಡಂಕಿ ದಾಟಲಿಲ್ಲ. ಆಸ್ಟ್ರೇಲಿಯಾ ಪರ ಬೌಲಿಂಗ್ ನಲ್ಲಿ ಜೋಶ್ ಹೆಜಲ್ವುಡ್ 3 ವಿಕೆಟ್ ಪಡೆದರೇ ಕ್ಸೇವಿಯರ್ ಬಾರ್ಟ್ಲೆಟ್, ನಾಥನ್ ಎಲ್ಲಿಸ್ ತಲಾ ಎರಡು ವಿಕೆಟ್ ಪಡೆದರು.
ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್ 2026ಕ್ಕೆ ಮುಂಚಿತವಾಗಿ ಈ ಸರಣಿಯನ್ನು ನಿರ್ಣಾಯಕವೆಂದು ಪರಿಗಣಿಸಲಾಗಿದೆ. ಏಕೆಂದರೆ ಎರಡೂ ತಂಡಗಳು ವಿಶ್ವ ಪ್ರಶಸ್ತಿಗಾಗಿ ಪ್ರಮುಖ ಸ್ಪರ್ಧಿಗಳಾಗಿವೆ. ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಈ ಹಿಂದೆ ಎರಡೂ ತಂಡಗಳ ನಡುವೆ ನಾಲ್ಕು ಟಿ20 ಪಂದ್ಯಗಳನ್ನು ಆಡಲಾಗಿದ್ದು, ಭಾರತ ಎರಡರಲ್ಲಿ ಗೆದ್ದು ಒಂದು ಸೋತಿತ್ತು. ಒಂದು ಪಂದ್ಯ ಫಲಿತಾಂಶವಿಲ್ಲದೆ ರದ್ದಾಗಿತ್ತು. ಇದೀಗ ಐದು ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ 1-0 ಮುನ್ನಡೆ ಸಾಧಿಸಿದೆ.
Advertisement