

ಮೆಲ್ಬೋರ್ನ್: ಶುಕ್ರವಾರ ಇಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಮಿಚೆಲ್ ಸ್ಟಾರ್ಕ್ ಬೌಲಿಂಗ್ ಆಯ್ಕೆ ಮಾಡಿಕೊಂಡರು.
ಭಾರತ ತಂಡ ಯಾವುದೇ ಬದಲಾವಣೆಗಳಿಲ್ಲದೆ ಆಡುತ್ತಿದ್ದು, ಆಸ್ಟ್ರೇಲಿಯಾ ಜೋಶ್ ಫಿಲಿಪ್ ಬದಲಿಗೆ ಮ್ಯಾಥ್ಯೂ ಶಾರ್ಟ್ ಅವರನ್ನು ಪ್ಲೇಯಿಂಗ್ ಇಲೆವೆನ್‌ಗೆ ಸೇರಿಸಿಕೊಂಡಿದೆ.
ಐದು ಪಂದ್ಯಗಳ ಟಿ20 ಸರಣಿಯ ಕ್ಯಾನ್‌ಬೆರಾದಲ್ಲಿ ನಡೆದ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು.
ನಾವು ಮೊದಲು ಬ್ಯಾಟಿಂಗ್ ಮಾಡಲು ಸಂತೋಷಪಡುತ್ತೇವೆ. ಅದು ನಾವು ಆಡಲು ಬಯಸುವ ಕ್ರಿಕೆಟ್‌ನ ಬ್ರ್ಯಾಂಡ್ (ಆಕ್ರಮಣಕಾರಿ). ಶುಭಮನ್‌ಗೆ ರನ್ ಗಳಿಸುವುದು ಹೇಗೆಂದು ತಿಳಿದಿದೆ. ಅವರೊಂದಿಗೆ ನೀವು ವಿಕೆಟ್‌ಗಳ ನಡುವೆಯೂ ಕಷ್ಟಪಟ್ಟು ಓಡಬೇಕು. ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ತಿಳಿಸಿದರು.
ಭಾರತದ ಪ್ಲೇಯಿಂಗ್ XI
ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.
ಆಸ್ಟ್ರೇಲಿಯಾ ಪ್ಲೇಯಿಂಗ್ XI
ಮಿಚೆಲ್ ಮಾರ್ಷ್ (ನಾಯಕ), ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಟಿಮ್ ಡೇವಿಡ್, ಮ್ಯಾಥ್ಯೂ ಶಾರ್ಟ್, ಮಿಚೆಲ್ ಓವನ್, ಮಾರ್ಕಸ್ ಸ್ಟೊಯಿನಿಸ್, ಕ್ಸೇವಿಯರ್ ಬಾರ್ಟ್ಲೆಟ್, ನಾಥನ್ ಎಲ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಜಾಶ್ ಹೇಜಲ್‌ವುಡ್.
Advertisement