
ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್ (CoE) ನಲ್ಲಿ ನಡೆದ ಫಿಟ್‌ನೆಸ್ ಪರೀಕ್ಷೆಗಳಿಗೆ ಭಾರತ ಕ್ರಿಕೆಟ್ ತಂಡದ ತಾರೆ ವಿರಾಟ್ ಕೊಹ್ಲಿ ಗೈರುಹಾಜರಾಗುವ ಬಗ್ಗೆ ಇದ್ದ ಊಹಾಪೋಹಗಳಿಗೆ ಕೊನೆಗೂ ತೆರೆ ಬಿದ್ದಿದೆ. ಭಾರತದ ಮಾಜಿ ನಾಯಕ ಇಂಗ್ಲೆಂಡ್‌ನಲ್ಲಿಯೇ ತಮ್ಮ ಫಿಟ್‌ನೆಸ್ ಪರೀಕ್ಷೆಯನ್ನು ಪೂರ್ಣಗೊಳಿಸಿದ್ದಾರೆ ಎಂದು ವರದಿಯಾಗಿದೆ. ಈ ಮೂಲಕ ವಿದೇಶಿ ನೆಲದಲ್ಲಿ ಪರೀಕ್ಷೆಗೆ ಒಳಗಾದ ಸದ್ಯದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ವಿರಾಟ್ ಕೊನೆಯ ಬಾರಿಗೆ 2025ರ ಐಪಿಎಲ್‌ನಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಮತ್ತು ಕ್ಟೋಬರ್‌ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗಾಗಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮರಳುವ ನಿರೀಕ್ಷೆಯಿದೆ.
ದೈನಿಕ್ ಜಾಗರಣ್ ಪ್ರಕಾರ, ಇಂಗ್ಲೆಂಡ್‌ನಲ್ಲಿ ವಿರಾಟ್ ಅವರ ಫಿಟ್‌ನೆಸ್ ಪರೀಕ್ಷೆಯನ್ನು ಬಿಸಿಸಿಐ ನೋಡಿಕೊಂಡಿದ್ದು, ಅಲ್ಲಿಯೇ ಫಿಟ್‌ನೆಸ್ ಪರೀಕ್ಷೆಗೆ ಒಳಗಾಗಲು ಕೊಹ್ಲಿಗೆ ಮಂಡಳಿ ಅನುಮೋದನೆ ಸಿಕ್ಕಿದೆ ಎಂದು ಮೂಲವೊಂದು ತಿಳಿಸಿದೆ.
ಏಕದಿನ ನಾಯಕ ರೋಹಿತ್ ಶರ್ಮಾ ಸೇರಿದಂತೆ ಇತರ ಎಲ್ಲ ಭಾರತೀಯ ಆಟಗಾರರು ಫಿಟ್‌ನೆಸ್ ಪರೀಕ್ಷೆಯನ್ನು ಪೂರ್ಣಗೊಳಿಸಲು ಬೆಂಗಳೂರಿನಲ್ಲಿರುವ ಬಿಸಿಸಿಐನ ಸಿಒಇಗೆ ಭೇಟಿ ನೀಡಿದರು. ಕೊಹ್ಲಿ ಸದ್ಯ ಟೆಸ್ಟ್ ಮತ್ತು ಟಿ20ಐಗಳಿಂದ ನಿವೃತ್ತರಾಗಿದ್ದಾರೆ ಮತ್ತು 50 ಓವರ್‌ಗಳ ಸ್ವರೂಪದಲ್ಲಿ ಮಾತ್ರ ಸಕ್ರಿಯರಾಗಿದ್ದಾರೆ.
ರವೀಂದ್ರ ಜಡೇಜಾ, ಕೆಎಲ್ ರಾಹುಲ್, ರಿಷಭ್ ಪಂತ್, ಆಕಾಶ್ ದೀಪ್ ಮತ್ತು ನಿತೀಶ್ ರೆಡ್ಡಿ ಅವರು ಸೆಪ್ಟೆಂಬರ್‌ನಲ್ಲಿ ಫಿಟ್‌ನೆಸ್ ಪರೀಕ್ಷೆಗೆ ಒಳಗಾಗಲಿದ್ದಾರೆ ಎಂದು ವರದಿ ಹೇಳುತ್ತದೆ. ಈ ಆಟಗಾರರಲ್ಲದೆ, ಗಾಯ ಅಥವಾ ಅನಾರೋಗ್ಯದ ಕಾರಣದಿಂದಾಗಿ ಮೊದಲ ಸುತ್ತಿನ ಪರೀಕ್ಷೆಯಿಂದ ದೂರ ಉಳಿದವರೂ ಕೂಡ ಮೇಲೆ ತಿಳಿಸಿದ ತಾರೆಯರೊಂದಿಗೆ ಪರೀಕ್ಷೆಗೆ ಒಳಗಾಗಲಿದ್ದಾರೆ.
ವರದಿ ಪ್ರಕಾರ, ಸಿಒಇಯಲ್ಲಿ ಫಿಟ್‌ನೆಸ್ ಪರೀಕ್ಷೆಯಲ್ಲಿ ರೋಹಿತ್ ಶರ್ಮಾ, ಮೊಹಮ್ಮದ್ ಸಿರಾಜ್, ಶುಭಮನ್ ಗಿಲ್, ಜಿತೇಶ್ ಶರ್ಮಾ, ಪ್ರಸಿದ್ಧ್ ಕೃಷ್ಣ, ರುತುರಾಜ್ ಗಾಯಕ್‌ವಾಡ್, ಅಭಿಷೇಕ್ ಶರ್ಮಾ, ಹರ್ಷಿತ್ ರಾಣಾ, ಶ್ರೇಯಸ್ ಅಯ್ಯರ್, ರಿಂಕು ಸಿಂಗ್, ಅಕ್ಷರ್ ಪಟೇಲ್, ರಜತ್ ಪಾಟಿದಾರ್, ರವಿ ಬಿಷ್ಣೋಯ್, ಸಂಜು ಸ್ಯಾಮ್ಸನ್, ಶಿವಂ ದುಬೆ, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ಮುಕೇಶ್ ಕುಮಾರ್, ಹಾರ್ಧಿಕ್ ಪಾಂಡ್ಯ, ಸರ್ಫರಾಜ್ ಖಾನ್, ತಿಲಕ್ ವರ್ಮಾ, ಅಭಿಮನ್ಯು ಈಶ್ವರನ್, ಅರ್ಶದೀಪ್ ಸಿಂಗ್, ಕುಲದೀಪ್ ಯಾದವ್, ಧ್ರುವ್ ಜುರೆಲ್, ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್ ಮತ್ತು ಯಶಸ್ವಿ ಜೈಸ್ವಾಲ್ ಉತ್ತೀರ್ಣರಾಗಿದ್ದಾರೆ.
Advertisement