
ದುಬೈ: ದುಬೈ ನಲ್ಲಿ ನಡೆದ ಏಷ್ಯಾ ಕಪ್ ಪಂದ್ಯದಲ್ಲಿ ಭಾರತ UAE ವಿರುದ್ಧ 9 ವಿಕೆಟ್ ಗಳ ಜಯ ಗಳಿಸಿದೆ.
ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡದ ಬೌಲರ್ ಗಳು ಉತ್ತಮ ಆರಂಭ ನೀಡಿ ಆತಿಥೇಯ ತಂಡವನ್ನು 57 ರನ್‌ಗಳಿಗೆ ಮಂಡಿಯೂರುವಂತೆ ಮಾಡಿದರು. ಯುಎಇ ತಂಡವು 13.1 ಓವರ್ ನಲ್ಲಿ 57 ರನ್‌ಗಳಿಗೆ ಸರ್ವಪತನ ಕಂಡಿತು. ಕುಲದೀಪ್ ಯಾದವ್ 4 ವಿಕೆಟ್‌ಗಳನ್ನು ಕಬಳಿಸಿದರೇ, ಶಿವಂ ದುಬೆ 3, ಜಸ್ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್ ಮತ್ತು ವರುಣ್ ಚಕ್ರವರ್ತಿ 1-1 ವಿಕೆಟ್‌ಗಳನ್ನು ಪಡೆದಿದರು.
ಅತ್ಯಂತ ಕಡಿಮೆ ರನ್ ಟಾರ್ಗೆಟ್ ಬೆನ್ನಟ್ಟಿದ ಭಾರತ, ಕೇವಲ 4.3 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 60 ರನ್ ಗಳಿಸಿ 9 ವಿಕೆಟ್ ಗೆಲುವು ತನ್ನದಾಗಿಸಿಕೊಂಡಿತು. ಅಭಿಷೇಕ್ ಶರ್ಮಾ 16 ಎಸೆತಗಳಲ್ಲಿ 30 ರನ್ ಗಳಿಸಿದರೆ, ಶುಭ್ ಮನ್ ಗಿಲ್ 9 ಎಸೆತಗಳಲ್ಲಿ 20 ರನ್ ಸೂರ್ಯ ಕುಮಾರ್ ಯಾದವ್ 2 ಎಸೆತಗಳಲ್ಲಿ 7 ರನ್ ಗಳಿಸಿದರು.
Advertisement