ವೇಗದ ಶತಕ ಸಿಡಿಸುವ ಮೂಲಕ Virat Kohli ದಾಖಲೆ ಮುರಿದ ಸ್ಮೃತಿ ಮಂಧಾನ!

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂಧಾನಾ ಭರ್ಜರಿ ಶತಕ ಸಿಡಿಸಿದ್ದಾರೆ.
Smriti Mandhana
ಸ್ಮೃತಿ ಮಂಧಾನಾ
Updated on

ನವದೆಹಲಿ: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂಧಾನಾ ಭರ್ಜರಿ ಶತಕ ಸಿಡಿಸಿದ್ದಾರೆ. ಆಸ್ಟ್ರೇಲಿಯಾ ಭಾರತಕ್ಕೆ 413 ರನ್‌ಗಳ ಗುರಿಯನ್ನು ನೀಡಿದ್ದು ಮಂಧಾನಾ ಬ್ಯಾಟಿಂಗ್ ಮೂಲಕ ಅದ್ಭುತ ಪ್ರದರ್ಶನ ನೀಡಿದರು.

ಪಂದ್ಯದ ಆರಂಭದಿಂದಲೂ ಮಂಧಾನಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಅಂತಿಮವಾಗಿ 125 ರನ್ ಬಾರಿಸಿ ಔಟಾದರು. ಇನ್ನು ಮಂಧಾನಾ ಏಕದಿನ ಪಂದ್ಯಗಳಲ್ಲಿ ಶತಕ ಗಳಿಸಿದ ಅತ್ಯಂತ ವೇಗದ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಇದಲ್ಲದೆ, ಮಂಧಾನಾ ಅವರ ಶತಕವು ಮಹಿಳಾ ಕ್ರಿಕೆಟ್‌ನಲ್ಲಿ ಎರಡನೇ ಅತ್ಯಂತ ವೇಗದ ಶತಕವಾಗಿದೆ. ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಅತಿ ವೇಗದ ಶತಕವು ಆಸ್ಟ್ರೇಲಿಯಾದ ಮೇಗ್ ಲ್ಯಾನಿಂಗ್ ಅವರ ಹೆಸರಿನಲ್ಲಿದ್ದು 45 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಮಂಧಾನ ಈ ಹಿಂದೆ ದಕ್ಷಿಣ ಆಫ್ರಿಕಾ ವಿರುದ್ಧ 70 ಎಸೆತಗಳಲ್ಲಿ ಶತಕ ಬಾರಿಸಿ ಭಾರತದ ಪರ ಅತಿ ವೇಗದ ಏಕದಿನ ಶತಕ ಬಾರಿಸಿದ ದಾಖಲೆಯನ್ನು ಹೊಂದಿದ್ದರು.

ಇದರೊಂದಿಗೆ, ಮಂಧಾನ ಪುರುಷ ಮತ್ತು ಮಹಿಳಾ ಕ್ರಿಕೆಟ್ ಎರಡರಲ್ಲೂ ಭಾರತದ ಪರ ಅತಿ ವೇಗದ ಏಕದಿನ ಶತಕ ಬಾರಿಸಿದ ದಾಖಲೆಯನ್ನು ಮುರಿದಿದ್ದಾರೆ. ಇದಕ್ಕೂ ಮೊದಲು, ಆಸ್ಟ್ರೇಲಿಯಾ ವಿರುದ್ಧ 52 ಎಸೆತಗಳಲ್ಲಿ ಶತಕ ಬಾರಿಸಿದ ವಿರಾಟ್ ಕೊಹ್ಲಿ ಈ ದಾಖಲೆಯನ್ನು ಹೊಂದಿದ್ದರು. ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಸತತ ಎರಡು ಶತಕಗಳನ್ನು ಬಾರಿಸಿದ ಎರಡನೇ ಬ್ಯಾಟ್ಸ್‌ಮನ್ ಕೂಡ ಮಂಧಾನ. ಎರಡನೇ ಏಕದಿನ ಪಂದ್ಯದಲ್ಲಿಯೂ ಮಂಧಾನ ಶತಕ ಗಳಿಸಿದರು. ಹಿಂದಿನ ದಾಖಲೆ ಟ್ಯಾಮಿ ಬ್ಯೂಮಾಂಟ್.

Smriti Mandhana
Asia Cup 2025: ಹ್ಯಾಂಡ್‌ಶೇಕ್ ವಿವಾದ; ಭಾರತ ವಿರುದ್ಧದ ಪಂದ್ಯಕ್ಕೂ ಮುನ್ನ Pakistan ಪತ್ರಿಕಾಗೋಷ್ಠಿ ದಿಢೀರ್ ರದ್ದು!

ಆಸ್ಟ್ರೇಲಿಯಾ ಇನ್ನಿಂಗ್ಸ್

ಇದಕ್ಕೂ ಮೊದಲು ನಿರ್ಣಾಯಕ ಪಂದ್ಯದಲ್ಲಿ ಆಸ್ಟ್ರೇಲಿಯಾ ಮೊದಲ ಬಾರಿಗೆ ಭಾರತದ ವಿರುದ್ಧ 400ಕ್ಕೂ ಹೆಚ್ಚು ರನ್ ಗಳಿಸುವ ಮೂಲಕ ಇತಿಹಾಸ ನಿರ್ಮಿಸಿತು. ಕಾಂಗರೂ ತಂಡವು ಭಾರತೀಯ ಬೌಲರ್‌ಗಳನ್ನು ಎದುರಿಸಿ 412 ರನ್‌ಗಳ ಬೃಹತ್ ಮೊತ್ತವನ್ನು ದಾಖಲಿಸಿ ಹಲವಾರು ಹೊಸ ದಾಖಲೆಗಳನ್ನು ಸ್ಥಾಪಿಸಿತು. ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಬೆತ್ ಮೂನಿ 138 ರನ್‌ಗಳ ಅಬ್ಬರದ ಇನ್ನಿಂಗ್ಸ್ ಆಡಿದರು. ಭಾರತೀಯ ಬೌಲರ್‌ಗಳನ್ನು ಸಂಪೂರ್ಣವಾಗಿ ಹಿಮ್ಮೆಟ್ಟಿಸಿದರು. ಏತನ್ಮಧ್ಯೆ, ಜಾರ್ಜಿಯಾ ವಾಲ್ ಎರಡು ಸುಲಭ ಕ್ಯಾಚ್‌ಗಳನ್ನು ಕೈಚೆಲ್ಲಿದ್ದರಿಂದ 81 ರನ್‌ಗಳನ್ನು ಬಾರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com