Asia Cup 2025: ಪಾಕ್ ವಿರುದ್ಧ ಭರ್ಜರಿ ಬ್ಯಾಟಿಂಗ್, Abhishek Sharma ಅಪರೂಪದ ದಾಖಲೆ

ಭಾನುವಾರ ರಾತ್ರಿ ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಸೂಪರ್ 4 ಹಂತದ ಪಂದ್ಯದಲ್ಲಿ ಭಾರತ ಪಾಕಿಸ್ತಾನ ತಂಡವನ್ನು 6 ವಿಕೆಟ್ ಅಂತರದಲ್ಲಿ ಭರ್ಜರಿಯಾಗಿ ಮಣಿಸಿತು.
AbhishekSharma
ಅಭಿಶೇಕ್ ಶರ್ಮಾ
Updated on

ದುಬೈ: ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ತಮ್ಮ ಅಮೋಘ ಬ್ಯಾಟಿಂಗ್ ಮೂಲಕ ಅಪರೂಪದ ದಾಖಲೆಗೆ ಪಾತ್ರರಾಗಿದ್ದಾರೆ.

ಭಾನುವಾರ ರಾತ್ರಿ ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಸೂಪರ್ 4 ಹಂತದ ಪಂದ್ಯದಲ್ಲಿ ಭಾರತ ಪಾಕಿಸ್ತಾನ ತಂಡವನ್ನು 6 ವಿಕೆಟ್ ಅಂತರದಲ್ಲಿ ಭರ್ಜರಿಯಾಗಿ ಮಣಿಸಿತು. ಈ ಪಂದ್ಯದಲ್ಲಿ ಅಭಿಶೇಕ್ ಶರ್ಮಾ ಮತ್ತು ಶುಭ್ ಮನ್ ಗಿಲ್ ಜೊತೆಯಾಟ ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿತು.

ಈ ಪಂದ್ಯದಲ್ಲಿ ಭಾರತದ ಪರ ಭರ್ಜರಿಯಾಗಿ ಬ್ಯಾಟಿಂಗ್ ಮಾಡಿದ ಶುಭ್ ಮನ್ ಗಿಲ್ 28 ಎಸೆತಗಳಲ್ಲಿ 8 ಬೌಂಡರಿ ಸಹಿತ 47 ರನ್ ಸಿಡಿಸಿ ಕೇವಲ 3 ರನ್ ಅಂತರದಲ್ಲಿ ಅರ್ಧಶತಕ ಮಿಸ್ ಮಾಡಿಕೊಂಡರು. ಅಂತೆಯೇ ಮತ್ತೊಂದು ಬದಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಅಭಿಷೇಕ್ ಶರ್ಮಾ 39 ಎಸೆತಗಳಲ್ಲಿ 5 ಸಿಕ್ಸರ್ ಮತ್ತು 6 ಬೌಂಡರಿಗಳ ನೆರವಿನಿಂದ 74 ರನ್ ಸಿಡಿಸಿ ಅಬ್ರಾರ್ ಅಹ್ಮದ್ ಬೌಲಿಂಗ್ ನಲ್ಲಿ ಔಟಾದರು.

AbhishekSharma
Asia Cup 2025: ಭಾರತ ಭರ್ಜರಿ ಬ್ಯಾಟಿಂಗ್, ಹಲವು ದಾಖಲೆಗಳ ನಿರ್ಮಾಣ

ಅರ್ಧಶತಕ ದಾಖಲೆ

ಇಂದು ಭಾರತದ ಅಭಿಷೇಕ್ ಶರ್ಮಾ ಕೇವಲ 24 ಎಸೆತಗಳಲ್ಲೇ ಅರ್ಧಶತಕ ಪೂರೈಸಿದರು. ಆ ಮೂಲಕ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಟಿ20 ಪಂದ್ಯದಲ್ಲಿ ವೇಗದ ಅರ್ಧಶತಕ ಗಳಿಸಿದ 2ನೇ ಆಟಗಾರ ಎಂಬ ಕೀರ್ತಿಗೆ ಭಾಜನರಾದರು. ಈ ಹಿಂದೆ 2012ರಲ್ಲಿ ಅಹ್ಮದಾಬಾದ್ ನಲ್ಲಿ ಪಾಕಿಸ್ತಾನದ ಮಹಮದ್ ಹಫೀಜ್ 23 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು.

Fastest 50s in Ind-Pak T20Is (by balls)

  • 23 Mohd Hafeez, Ahmedabad 2012

  • 24 Abhishek Sharma, Dubai 2025 *

  • 29 Yuvraj Singh, Ahmedabad 2012

  • 32 Iftikhar Ahmed, Melbourne 2022

  • 33 Misbah-ul-Haq, Durban 2007

ಪಂದ್ಯದ ಮೊದಲ ಎಸೆತದಲ್ಲೇ ಸಿಕ್ಸರ್

ಇನ್ನು ಈ ಪಂದ್ಯದ ಭಾರತದ ಇನ್ನಿಂಗ್ಸ್ ನ ಮೊದಲ ಎಸೆತದಲ್ಲೇ ಅಭಿಷೇಕ್ ಶರ್ಮಾ ಸಿಕ್ಸರ್ ಭಾರಿಸುವ ಮೂಲಕ ಮತ್ತೊಂದು ದಾಖಲೆ ನಿರ್ಮಿಸಿದರು. ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ 2 ಬಾರಿ ಮೊದಲ ಎಸೆತದಲ್ಲೇ ಸಿಕ್ಸರ್ ಭಾರಿಸಿದ ಮೊದಲ ಆಟಗಾರ ಎಂಬ ಕೀರ್ತಿಗೂ ಅಭಿಷೇಕ್ ಶರ್ಮಾ ಪಾತ್ರರಾಗಿದ್ದಾರೆ. ಈ ಹಿಂದೆ ಇದೇ ಏಷ್ಯಾಕಪ್ ಟೂರ್ನಿಯಲ್ಲಿ ಅಭಿಷೇಕ್ ಶರ್ಮಾ ಪಾಕಿಸ್ತಾನದ ಹೈದರ್ ಅಲಿ ಓವರ್ ನ ಮೊದಲ ಎಸೆತದಲ್ಲೇ ಸಿಕ್ಸರ್ ಸಿಡಿಸಿದ್ದರು.

Indian batters hitting first ball of a T20I innings for a six

  • Rohit Sharma off Adil Rashid Ahmedabad 2021

  • Yashasvi Jaiswal off Sikandar Raza Harare 2024

  • Sanju Samson off Jofra Archer Mumbai WS 2025

  • Abhishek Sharma off Haider Ali Dubai 2025

  • Abhishek Sharma off Shaheen Afridi Dubai 2025

Abhishek Sharma becomes the FIRST Indian to smash a SIX off the very first ball of the innings — not once, but TWICE in T20Is!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com