IPL 2026: ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್; ಲಕ್ನೋ ವಿರುದ್ಧ ಗೆದ್ದು ಬೀಗಿದ ಡೆಲ್ಲಿ

ಇಂದು ಲಖನೌನ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ನಾಯಕ ಅಕ್ಷರ್ ಪಟೇಲ್ ಅವರು, ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.
IPL 2026: Delhi Capitals win by 6 wicket
ಟ್ರಿಸ್ಟಾನ್ ಸ್ಟಬ್ಸ್ - ಸಮೀರ್ ರಿಜ್ವಿ
Updated on

ಲಖನೌ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ 19ನೇ ಸೀಸನ್​ನ ಐದನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌(DC) ತಂಡ ಬುಧವಾರ ಲಕ್ನೋ ಸೂಪರ್ ಜೈಂಟ್ಸ್‌ (LSG) ವಿರುದ್ಧ 6 ವಿಕೆಟ್ ಗಳ ರೋಚ ಗೆಲುವು ಸಾಧಿಸಿದೆ.

ಇಂದು ಲಖನೌನ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ನಾಯಕ ಅಕ್ಷರ್ ಪಟೇಲ್ ಅವರು, ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಮೊದಲ ಬ್ಯಾಟಿಂಗ್‌ ಮಾಡಿದ ಲಕ್ನೋ ಸೂಪರ್ ಜೈಂಟ್ಸ್‌ ನಿಗದಿತ 18.4 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು ಕೇವಲ 141 ರನ್​ಗಳ ಸಾಧಾರಣ ಮೊತ್ತ ಕಲೆಹಾಕಿತು.

ಡೆಲ್ಲಿ ಪರ ನಟರಾಜನ್ ಅವರು ಒಂದೇ ಓವರ್‌ನಲ್ಲಿ ಎರಡು ವಿಕೆಟ್ ಪಡೆದರು. ಸಮದ್ ಅವರನ್ನು ಔಟ್ ಮಾಡಿದ ನಂತರ, ಅದೇ ಓವರ್‌ನಲ್ಲಿ ಶಮಿಯನ್ನೂ ಔಟ್ ಮಾಡಿದರು. ಇದರೊಂದಿಗೆ ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದರು.

IPL 2026: Delhi Capitals win by 6 wicket
IPL 2026: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್; CSK ವಿರುದ್ಧ RRಗೆ ಭರ್ಜರಿ ಗೆಲುವು

ಗೆಲುವಿಗೆ 142 ರನ್ ಗಳ ಗುರಿ ಬೆನ್ನತ್ತಿದ ಡೆಲ್ಲಿ, ಸಮೀರ್ ರಿಜ್ವಿ(70) ಮತ್ತು ಟ್ರಿಸ್ಟಾನ್ ಸ್ಟಬ್ಸ್(39) ಅವರ ಉತ್ತಮ ಜೊತೆಯಾಟದ ನೆರವಿನಿಂದ 17.1 ಓವರ್ ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು 145 ರನ್ ಗಳಿಸುವ ಮೂಲಕ 6 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com