

ಮುಲ್ಲನ್‌ಪುರ: ಗುಜರಾತ್ ಟೈಟಾನ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ 'ಸ್ಲೋ ಓವರ್ ರೇಟ್' ಕಾಯ್ದುಕೊಂಡಿದ್ದಕ್ಕಾಗಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.
ಐಪಿಎಲ್ ಸಮಿತಿಯು ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿದೆ. ಮೂರು ವಿಕೆಟ್ ಗಳಿಂದ ಗುಜರಾತ್ ನ್ನು ಸೋಲಿಸಿದ ಪಂಜಾಬ್ ಕಿಂಗ್ಸ್ IPL 2026 ರ ಗೆಲುವಿನ ಅಭಿಯಾನವನ್ನು ಆರಂಭಿಸಿತು. ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ ಕಾರಣಕ್ಕಾಗಿ ಲಕ್ಷಾಂತರ ರೂಪಾಯಿ ದಂಡ ವಿಧಿಸಲಾಗಿದೆ.
ನಿಧಾನಗತಿಯ ಓವರ್ ರೇಟ್ ಗೆ ಸಂಬಂಧಿಸಸಿದಂತೆ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.22 ಪ್ರಕಾರ, ಇದು ಪಂಜಾಬ್ ಕಿಂಗ್ಸ ತಂಡದ ಮೊದಲ ತಪ್ಪು ಆಗಿದೆ. ಇದಕ್ಕಾಗಿ ಶ್ರೇಯಸ್ ಅಯ್ಯರ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಒಂದು ವೇಳೆ ಮುಂದಿನ ಪಂದ್ಯಗಳಲ್ಲಿ ಇದೇ ತಪ್ಪು ಪುನರಾವರ್ತನೆಯಾದರೆ ದಂಡದ ಮೊತ್ತ 24 ಲಕ್ಷಕ್ಕೆ ಏರಿಕೆಯಾಗಲಿದೆ. ಮತ್ತು ತಂಡದ ಇತರ ಆಟಗಾರರಿಗೂ ದಂಡ ಬೀಳಲಿದೆ. ಮೂರನೇ ಬಾರಿ ತಪ್ಪು ಮಾಡಿದರೆ ನಾಯಕನಿಗೆ ಒಂದು ಪಂದ್ಯದ ನಿಷೇಧ ಎದುರಾಗುವ ಸಾಧ್ಯತೆಯಿದೆ.
ಮುಲ್ಲನ್‌ಪುರದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವನ್ನು ಪಂಜಾಬ್ ಕಿಂಗ್ಸ್ ಬೌಲರ್‌ಗಳು 162 ರನ್‌ಗಳಿಗೆ ಕಟ್ಟಿಹಾಕಿದ್ದರು.
ಗುರಿ ಬೆನ್ನತ್ತಿದ ಪಂಜಾಬ್ ಪರ ಪ್ರಭ್‌ಸಿಮ್ರಾನ್ ಸಿಂಗ್ ಮತ್ತು ಕೂಪರ್ ಕೊನೊಲಿ ಎರಡನೇ ವಿಕೆಟ್‌ಗೆ 77 ರನ್‌ಗಳ ಜೊತೆಯಾಟವಾಡಿ ಸುಲಭ ಗೆಲುವಿನತ್ತ ತಂಡವನ್ನು ಕೊಂಡೊಯ್ದಿದ್ದರು.
Advertisement