

ನವದೆಹಲಿ: ಇತ್ತೀಚೆಗೆ ತನ್ನ ವಿವಾಹ ವಿಚ್ಚೇದನ ವಿಚಾರವಾಗಿ ಭಾರಿ ಸುದ್ದಿಗೆ ಗ್ರಾಸಾವಾಗಿದ್ದ ಭಾರತ ಕ್ರಿಕೆಟ್ ತಂಡದ ಆಟಗಾರ ಯಜುವೇಂದ್ರ ಚಹಲ್ ಇದೀಗ ಬೇಡದ ಕಾರಣಕ್ಕಾಗಿ ಮತ್ತೆ ಭಾರಿ ಸುದ್ದಿಗೆ ಗ್ರಾಸವಾಗುತ್ತಿದ್ದಾರೆ.
ಪ್ರಸ್ತುತ ಹಾಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಂಡಿರುವ ಚಹಲ್ ಇದರ ನಡುವೆಯೇ ವಿವಾದವೊಂದನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ. ಶುಕ್ರವಾರ ರಾತ್ರಿ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಪ್ಲಾಟ್‌ಫಾರ್ಮ್‌ಗಳಲ್ಲಿ ಒಂದು ವಿಡಿಯೋ ಹರಿದಾಡುತ್ತಿದೆ.
ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಅವರನ್ನು ಹೋಲುವ ವ್ಯಕ್ತಿಯೊಬ್ಬರು ಧೂಮಪಾನ ಮಾಡಿ, ಸಿಗರೇಟ್ ತುಂಡನ್ನು ರಸ್ತೆಗೆ ಎಸೆದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿದ ಅಭಿಮಾನಿಗಳು ಭಾರೀ ಟೀಕೆ ಮಾಡುತ್ತಿದ್ದಾರೆ.
ವೈರಲ್ ವಿಡಿಯೋ, ನೈಜತೆ ಏನು?
ಟೀಮ್ ಇಂಡಿಯಾದ ಅನುಭವಿ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಚಾಲನೆ ಮಾಡುವಾಗ ಸಿಗರೇಟ್ ಸೇದುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಈ ವಿಡಿಯೋದಲ್ಲಿ ಚಾಹಲ್ ಅವರನ್ನು ಹೋಲುವ ವ್ಯಕ್ತಿಯೊಬ್ಬರು ಕಾರಿನಲ್ಲಿ ಧೂಮಪಾನ ಮಾಡುತ್ತಾ ಸಿಗರೇಟ್ ತುಂಡುಗಳನ್ನು ರಸ್ತೆಗೆ ಎಸೆಯುವುದನ್ನು ಸ್ಪಷ್ಟವಾಗಿ ಕಾಣಬಹುದು.
ಆದಾಗ್ಯೂ, ಈ ವಿಡಿಯೋ ನಿಜವೋ ಅಥವಾ ಮಾರ್ಫ್ ಮಾಡಲಾದದ್ದೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಶುಕ್ರವಾರ ರಾತ್ರಿಯಿಂದ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಪ್ಲಾಟ್‌ಫಾರ್ಮ್‌ಗಳಲ್ಲಿ ಒಂದು ವಿಡಿಯೋ ಹರಿದಾಡುತ್ತಿದೆ. ಆದರೆ ವೈರಲ್ ಆಗುತ್ತಿರುವ ವಿಡಿಯೋ ಬಗ್ಗೆ ಈ ವರೆಗೂ ಚಹಲ್ ಸ್ಪಷ್ಟನೆ ನೀಡಿಲ್ಲ.
Advertisement