IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಆರ್ ಸಿಬಿ ಆರಂಭದಿಂದಲೇ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿತು.
Mumbai to chase 241 runs against RCB
ರಜತ್ ಪಾಟಿದಾರ್-ಕೊಹ್ಲಿ ಭರ್ಜರಿ ಬ್ಯಾಟಿಂಗ್
Updated on

ಮುಂಬೈ: ಐಪಿಎಲ್ ಟೂರ್ನಿಯ ಇಂದಿನ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾರ್ದಿಕ್ ಪಾಂಡ್ಯಾಗೆ ಗೆಲ್ಲಲು 241 ರನ್ ಗಳ ಬೃಹತ್ ಗುರಿ ನೀಡಿದೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಆರ್ ಸಿಬಿ ಆರಂಭದಿಂದಲೇ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿತು. ಆರಂಭಿಕರಾಗಿ ಕಣಕ್ಕಿಳಿದ ಫಿಲ್ ಸಾಲ್ಟ್ ಮತ್ತು ವಿರಾಟ್ ಕೊಹ್ಲಿ ಜೋಡಿ ಮೊದಲ ವಿಕೆಟ್ ಗೆ 120 ರನ್ ಗಳ ಭರ್ಜರಿ ಜೊತೆಯಾಟ ನೀಡಿತು.

ಆರಂಭದಿಂದಲೂ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಫಿಲ್ ಸಾಲ್ಟ್ ಕೇವಲ 36 ಎಸೆತಗಳಲ್ಲಿ ಆರು ಸಿಕ್ಸರ್ ಮತ್ತು ಆರು ಬೌಂಡರಿ ಸಹಿತ 78 ರನ್ ಕಲೆಹಾಕಿ ಶಾರ್ದೂಲ್ ಠಾಕೂರ್ ಗೆ ವಿಕೆಟ್ ಒಪ್ಪಿಸಿದರು.

ಮತ್ತೊಂದು ಬದಿಯಲ್ಲಿ ಸಮಯೋಚಿತ ಬ್ಯಾಟಿಂಗ್ ನಡೆಸುತ್ತಿದ್ದ ವಿರಾಟ್ ಕೊಹ್ಲಿ ಬಳಿಕ ನಾಯಕ ರಜತ್ ಪಾಟಿದಾರ್ ಜೊತೆಗೂಡಿ ಇನ್ನಿಂಗ್ಸ್ ಕಟ್ಟಿದರು. ಈ ಹಂತದಲ್ಲಿ 38 ಎಸೆತಗಳನ್ನು ಎದುರಿಸಿದ ಕೊಹ್ಲಿ 5 ಬೌಂಡರಿ ಮತ್ತು 1 ಸಿಕ್ಸರ್ ಸಹಿತ ಅರ್ಧಶತಕ (50 ರನ್) ಗಳಿಸಿ ಹಾರ್ದಿಕ್ ಪಾಂಡ್ಯಾಗೆ ವಿಕೆಟ್ ಒಪ್ಪಿಸಿದರು.

Mumbai to chase 241 runs against RCB
IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

ಕೊಹ್ಲಿ ಔಟಾಗುತ್ತಲೇ ಸ್ಫೋಟಕ ಬ್ಯಾಟಿಂಗ್ ನಡೆಸಿದ ಆರ್ ಸಿಬಿ ನಾಯಕ ರಜತ್ ಪಾಟಿದಾರ್ ಕೇವಲ 20 ಎಸೆತಗಳಲ್ಲಿ 5 ಸಿಕ್ಸರ್ ಮತ್ತು 4 ಬೌಂಡರಿಗಳ ಸಹಿತ 53 ರನ್ ಭಾರಿಸಿ ಸ್ಯಾಂಥ್ನರ್ ಗೆ ವಿಕೆಟ್ ಒಪ್ಪಿಸಿದರು.

ಬಳಿಕ ಜಿತೇಶ್ ಶರ್ಮಾ ಜೊತೆಗೂಡಿದ ಟಿಮ್ ಡೇವಿಜ್ ಇನ್ನಿಂಗ್ಸ್ ನ ಅಂತಿಮ ಹಂತದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಅವರು ಕೇವಲ 16 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 2 ಬೌಂಡರಿ ಸಹಿತ ಅಜೇಯ 34 ರನ್ ಪೇರಿಸಿ ತಂಡದ ಮೊತ್ತ 240ರತ್ತ ಧಾವಿಸುವಂತೆ ಮಾಡಿದರು. ಆದರೆ 10 ರನ್ ಗಳಿಸಿದ್ದ ಜಿತೇಶ್ ಶರ್ಮಾ ಅಂತಿಮ ಓವರ್ ನಲ್ಲಿ ಟ್ರೆಂಟ್ ಬೌಲ್ಟ್ ರ ಎಲ್ ಬಿ ಬಲೆಗೆ ಬಿದ್ದರು.

ಅಂತಿಮವಾಗಿ ಆರ್ ಸಿಬಿ ತಂಡ ನಿಗಧಿತ 20 ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 240 ರನ್ ಗಳಿಸಿ ಮುಂಬೈಗೆ ಗೆಲ್ಲಲು 241 ರನ್ ಗಳ ಬೃಹತ್ ಗುರಿ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com