RCB ವಿರುದ್ಧದ ಪಂದ್ಯದ ವೇಳೆ ಮೊಬೈಲ್ ನೋಡಿದ ರೋಮಿ ಭಿಂದರ್​ಗೆ 1 ಲಕ್ಷ ರೂ. ದಂಡ; ವೈಭವ್ ಸೂರ್ಯವಂಶಿ ಜಸ್ಟ್‌ ಮಿಸ್‌!

ಏಪ್ರಿಲ್ 10 ರಂದು ಗುವಾಹಟಿಯ ಬರ್ಸಪಾರ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ವಿರುದ್ಧದ ಪಂದ್ಯದ ವೇಳೆ ಡಗೌಟ್‌ನಲ್ಲಿ ಮೊಬೈಲ್ ಫೋನ್ ಬಳಸಿದ್ದಕ್ಕಾಗಿ ರೋಮಿ ಭಿಂದರ್ ಅವರಿಗೆ 1 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.
BCCI takes action after Romi Bhinder found guilty
ವೈಭವ್ ಸೂರ್ಯವಂಶಿ - ರೋಮಿ ಭಿಂದರ್
Updated on

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯದ ವೇಳೆ ಡಗೌಟ್‌ನಲ್ಲಿ ಮೊಬೈಲ್ ಬಳಸಿದ ರಾಜಸ್ಥಾನ್ ರಾಯಲ್ಸ್(RR)ತಂಡದ ಮ್ಯಾನೇಜರ್ ರೋಮಿ ಭಿಂದರ್‌ ವಿರುದ್ಧ ಬಿಸಿಸಿಐ ಕಠಿಣ ಕ್ರಮ ತೆಗೆದುಕೊಂಡಿದೆ.

ಏಪ್ರಿಲ್ 10 ರಂದು ಗುವಾಹಟಿಯ ಬರ್ಸಪಾರ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ವಿರುದ್ಧದ ಪಂದ್ಯದ ವೇಳೆ ಡಗೌಟ್‌ನಲ್ಲಿ ಮೊಬೈಲ್ ಫೋನ್ ಬಳಸಿದ್ದಕ್ಕಾಗಿ ರೋಮಿ ಭಿಂದರ್ ಅವರಿಗೆ 1 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

ರಾಜಸ್ಥಾನ್ ರಾಯಲ್ಸ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಸಮಯದಲ್ಲಿ, ಭಿಂದರ್ ಅವರ ಫೋನ್ ಅನ್ನು ಹತ್ತಿರದಿಂದ ನೋಡುತ್ತಿರುವುದನ್ನು ಕ್ಯಾಮೆರಾಗಳು ಸೆರೆಹಿಡಿದಿವೆ. ಈ ವೇಳೆ ವೈಭವ್ ಸೂರ್ಯವಂಶಿ ಅವರ ಪಕ್ಕದಲ್ಲಿ ಕುಳಿತಿದ್ದರು. ಈ ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿತ್ತು.

BCCI takes action after Romi Bhinder found guilty
RCB ವಿರುದ್ಧದ ಪಂದ್ಯದ ವೇಳೆ ಫೋನ್ ಬಳಕೆ: RR ಅಧಿಕಾರಿ ರೋಮಿ ಭಿಂದರ್‌ಗೆ BCCI ನೋಟಿಸ್!

ಎರಡು ದಿನಗಳ ನಂತರ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ(ಬಿಸಿಸಿಐ) ಭ್ರಷ್ಟಾಚಾರ ನಿಗ್ರಹ ಘಟಕವು ಈ ಸಂಬಂಧ ಭಿಂದರ್ ಅವರಿಗೆ ಶೋ-ಕಾಸ್ ನೋಟಿಸ್ ನೀಡಿ, ವಿವರಣೆ ನೀಡಲು 48 ಗಂಟೆಗಳ ಕಾಲಾವಕಾಶ ನೀಡಿತ್ತು.

ಭಿಂಧರ್ ನೀಡಿದ ಉತ್ತರದಿಂದ ತೃಪ್ತಿಯಾಗದ ಬಿಸಿಸಿಐ, ಐಪಿಎಲ್ ನಿಯಮಗಳನ್ನು ಉಲ್ಲಂಘಿಸಿ ಮೊಬೈಲ್ ಬಳಿಸಿದ್ದಕ್ಕೆ 1 ಲಕ್ಷ ರೂ. ದಂಡ ವಿಧಿಸಿದೆ. ಇದರ ಜೊತೆಗೆ ಈ ಕೃತ್ಯವನ್ನು ಪುನರಾವರ್ತಿಸದಂತೆ ಎಚ್ಚರಿಕೆ ನೀಡಲಾಗಿದೆ. ಅದೃಷ್ಟವೆಂಬಂತೆ ಭಿಂದರ್‌ ಪಕ್ಕ ಕುಳಿತು ಅವರು ಮೊಬೈಲ್ ಬಳಸುವುದನ್ನು ನೋಡುತ್ತಾ ಕುಳಿತಿದ್ದ 15 ವರ್ಷದ ವೈಭವ್ ಸೂರ್ಯವಂಶಿ ಶಿಕ್ಷೆಯಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com