IPL 2026: ಕೇವಲ 15 ಎಸೆತಗಳಲ್ಲಿ ಅರ್ಧಶತಕ; ಹೊಸ ದಾಖಲೆ ಸೃಷ್ಟಿಸಿದ ಅಭಿಷೇಕ್ ಶರ್ಮಾ!

ಇಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್(CSK) ವಿರುದ್ಧ ನಡೆದ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಈ ವಿಶೇಷ ಸಾಧನೆ ಮಾಡಿದರು.
IPL 2026: Abhishek Sharma scripts history, scores fastest fifty ever for SRH
ಅಭಿಷೇಕ್ ಶರ್ಮಾ
Updated on

ಹೈದರಾಬಾದ್‌: ಐಪಿಎಲ್ 2026 ರ 27ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್(SRH) ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರು ಶನಿವಾರ ತಮ್ಮದೇ ಆದ ದಾಖಲೆಯನ್ನು ಮುರಿದು ಹೊಸ ದಾಖಲೆ ಸೃಷ್ಟಿಸಿದ್ದಾರೆ.

ಇಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್(CSK) ವಿರುದ್ಧ ನಡೆದ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಈ ವಿಶೇಷ ಸಾಧನೆ ಮಾಡಿದರು.

ಇದಕ್ಕೂ ಮುನ್ನ ಅಭಿಷೇಕ್ 2024ರಲ್ಲಿ SRH ಪರ 16 ಎಸೆತಗಳಲ್ಲಿ ಅತ್ಯುತ್ತಮ ಅರ್ಧಶತಕ ಬಾರಿಸಿದ್ದರು. ಇದೀಗ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತಿ ವೇಗದ ಅರ್ಧಶತಕ ಗಳಿಸಿದ ಆಟಗಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದಾರೆ.

IPL 2026: Abhishek Sharma scripts history, scores fastest fifty ever for SRH
'ಈಗ ಇದೆಲ್ಲ ಏಕೆ ಬೇಕಿತ್ತು?': ವಿರಾಟ್ ಕೊಹ್ಲಿ ಟೀಕಾಕಾರರಿಗೆ ಮೊಹಮ್ಮದ್ ಕೈಫ್ ತಿರುಗೇಟು!

ಅಭಿಷೇಕ್ ಅವರು ಈ ಅರ್ಧಶತಕದ ಇನ್ನಿಂಗ್ಸ್​ನಲ್ಲಿ 5 ಬೌಂಡರಿ ಮತ್ತು 4 ಸಿಕ್ಸರ್‌ಗಳು ಸೇರಿದ್ದು, ಅವರು ಕೇವಲ 9 ಎಸೆತಗಳಲ್ಲಿ 44 ರನ್ ಗಳಿಸಿದರು. ಉಳಿದ ಆರು ಎಸೆತಗಳಲ್ಲಿ ಆರು ರನ್‌ ಕಲೆಹಾಕಿ ತಮ್ಮ ಅರ್ಧಶತಕ ಪೂರೈಸಿದರು. ಅಂತಿಮವಾಗಿ ಅಭಿಷೇಕ್ ಶರ್ಮಾ 22 ಎಸೆತಗಳಲ್ಲಿ 59 ರನ್ ಗಳಿಸಿ ಔಟಾದರು. ಇದರೊಂದಿಗೆ ಸನ್‌ರೈಸರ್ಸ್ ಹೈದರಾಬಾದ್ ಪರ ಅತಿ ಕಡಿಮೆ ಎಸೆತಗಳಲ್ಲಿ ಅರ್ಧಶತಕ ಗಳಿಸಿದ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಾತ್ರವಲ್ಲದೆ ಈ ಹಿಂದೆ ತಮ್ಮ ಹೆಸರಿನಲ್ಲಿದ್ದ ದಾಖಲೆಯನ್ನು ಸಹ ಮುರಿದಿದ್ದಾರೆ.

ಐಪಿಎಲ್ ಇತಿಹಾಸದಲ್ಲಿ ಮೂರನೇ ಅತಿ ವೇಗದ ಅರ್ಧಶತಕ ಬಾರಿಸಿದ ವೈಭವ್ ಸೂರ್ಯವಂಶಿ(ಎರಡು ಬಾರಿ), ಜೇಕ್ ಫ್ರೇಸರ್-ಮೆಕ್‌ಗುರ್ಕ್ (ಎರಡು ಬಾರಿ), ನಿಕೋಲಸ್ ಪೂರನ್, ಸುನಿಲ್ ನರೈನ್ ಮತ್ತು ಯೂಸುಫ್ ಪಠಾಣ್ ಅವರ ದಾಖಲೆಯನ್ನು ಅಭಿಷೇಕ್ ಸರಿಗಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com