IPL 2026, RCB vs DC: ಭುವಿ, ಪಾಂಡ್ಯ ಶ್ರಮ ವ್ಯರ್ಥ; ಡೆಲ್ಲಿ ಕ್ಯಾಪಿಟಲ್ಸ್ ಗೆ 6 ವಿಕೆಟ್ ಭರ್ಜರಿ ಜಯ

ಆರ್ ಸಿಬಿ ನೀಡಿದ್ದ 176 ರನ್ ಗಳ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಡೆಲ್ಲಿ ತಂಡ 19.5 ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 178 ರನ್ ಕಲೆಹಾಕಿ 6 ವಿಕೆಟ್ ಅಂತರದಲ್ಲಿ ಭರ್ಜರಿ ಜಯ ಸಾಧಿಸಿತು.
DC beat RCB by 6 Wickets in Chinnaswamy Stadium
ಆರ್ ಸಿಬಿ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ
Updated on

ಬೆಂಗಳೂರು: ಐಪಿಎಲ್ ಟೂರ್ನಿಯ ಇಂದಿನ ರೋಚಕ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 6 ವಿಕೆಟ್ ಗಳ ಅಂತರದಲ್ಲಿ ಮಣಿಸಿದೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಪಂದ್ಯದಲ್ಲಿ ಆರ್ ಸಿಬಿ ನೀಡಿದ್ದ 176 ರನ್ ಗಳ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಡೆಲ್ಲಿ ತಂಡ 19.5 ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 178 ರನ್ ಕಲೆಹಾಕಿ 6 ವಿಕೆಟ್ ಅಂತರದಲ್ಲಿ ಭರ್ಜರಿ ಜಯ ಸಾಧಿಸಿತು.

ಡೆಲ್ಲಿ ಪರ ಕನ್ನಡಿಗ ಕೆಎಲ್ ರಾಹುಲ್ (57) ಅರ್ಧಶತಕ ಗಳಿಸಿದರೆ, ಟ್ರಿಸ್ಟಾನ್ ಸ್ಟಬ್ಸ್ ಅಜೇಯ 60 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಉಳಿದಂತೆ ಡೆಲ್ಲಿ ಪರ ಅಕ್ಸರ್ ಪಟೇಲ್ 26 ರನ್ ಗಳಿಸಿ ರಿಟೈರ್ಡ್ ಹರ್ಟ್ ಆದರೆ, ಡೇವಿಡ್ ಮಿಲ್ಲರ್ ಅಜೇಯ 22 ರನ್ ಗಳಿಸಿದರು.

DC beat RCB by 6 Wickets in Chinnaswamy Stadium
IPL 2026: ಡೆಲ್ಲಿ ಕ್ಯಾಪಿಟಲ್ಸ್ ಗೆ 176 ರನ್‌ ಸಾಧಾರಣ ಗುರಿ ನೀಡಿದ RCB

ಡೆಲ್ಲಿಗೆ ಆರಂಭಿಕ ಆಘಾತ

ಸವಾಲಿನ ಗುರಿ ಬೆನ್ನು ಹತ್ತಿದ ಡೆಲ್ಲಿಗೆ ಆರಂಭಿಕ ಆಘಾತ ಎದುರಾಗಿತ್ತು. ಆರ್ ಸಿಬಿ ತಂಡದ ಹಿರಿಯ ವೇಗಿ ಭುವನೇಶ್ವರ್ ಕುಮಾರ್ ಆರಂಭದಲ್ಲೇ 3 ಪ್ರಮುಖ ವಿಕೆಟ್ ಕಬಳಿಸಿ ಡೆಲ್ಲಿಗೆ ಮರ್ಮಾಘಾತ ನೀಡಿದರು. ಡೆಲ್ಲಿ ತಂಡದ ಆರಂಭಿಕ ಆಟಗಾರ ನಿಸ್ಸಾಂಕಾ ಕೇವಲ 1 ರನ್ ಗಳಿಸಿ ಭುವಿ ಬೌಲಿಂಗ್ ನಲ್ಲಿ ಎಲ್ ಬಿ ಬಲೆಗೆ ಬಿದ್ದರು.

ಬಳಿಕ ಕನ್ನಡಿಗ ಕರುಣ್ ನಾಯರ್ ಕೂಡ ಕೇವಲ 5 ರನ್ ಗಳಿಸಿ ಮತ್ತದೇ ಭುವಿಗೆ ವಿಕೆಟ್ ಒಪ್ಪಿಸಿದರು. ಕರುಣ್ ಬೆನ್ನಲ್ಲೇ ಸಮೀರ್ ರಿಜ್ವಿ ಕೂಡ 2 ರನ್ ಗಳಿಸಿ ಭುವಿಗೆ ವಿಕೆಟ್ ಒಪ್ಪಿಸಿದರು.

ಆದರೆ ಮತ್ತೊಂದು ಬದಿಯಲ್ಲಿ ಕೆಎಲ್ ರಾಹುಲ್ ಮಾತ್ರ ಸಮಯೋಚಿತ ಬ್ಯಾಟಿಂಗ್ ಪ್ರದರ್ಶನ ನೀಡಿದ ತಂಡಕ್ಕೆ ಆಸರೆಯಾದರು. ರಾಹುಲ್ ಕೇವಲ 34 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 6 ಬೌಂಡರಿ ಸಹಿತ 57 ರನ್ ಗಳಿಸಿದರು. ಅವರಿಗೆ ಸ್ಟಬ್ಸ್ ಉತ್ತಮ ಸಾಥ್ ನೀಡಿದರು. ಈ ಜೋಡಿ 4ನೇ ವಿಕೆಟ್ ಗೆ 69 ರನ್ ಗಳ ಭರ್ಜರಿ ಜೊತೆಯಾಟವಾಡಿತು.

ಬಳಿಕ ಅಕ್ಸರ್ ಪಟೇಲ್ ಮತ್ತು ಡೇವಿಡ್ ಮಿಲ್ಲರ್ ಜೊತೆ ಉತ್ತಮ ಜೊತೆಯಾಟವಾಡಿದ ಸ್ಟಬ್ಸ್ ಗೆಲುವಿನ ಔಪಚಾರಕತೆ ಮುಕ್ತಾಯಗೊಳಿಸಿದರು. ಅಂತಿಮವಾಗಿ ಡೆಲ್ಲಿ ತಂಡ 19.5 ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 178 ರನ್ ಕಲೆಹಾಕಿ 6 ವಿಕೆಟ್ ಅಂತರದಲ್ಲಿ ಭರ್ಜರಿ ಜಯ ಸಾಧಿಸಿತು.

ಅಂತೆಯೇ ಆರ್ ಸಿಬಿ ಪರ ಭುವನೇಶ್ವರ್ ಕುಮಾರ್ 3 ವಿಕೆಟ್ ಕಬಳಿಸಿದರೆ, ಕೃನಾಲ್ ಪಾಂಡ್ಯ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com