IPL 2026: ವಿರಾಟ್ ಕೊಹ್ಲಿ, ಪಡಿಕ್ಕಲ್ ಅಬ್ಬರಕ್ಕೆ GT ತತ್ತರ; RCB ಭರ್ಜರಿ ಗೆಲುವು

ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ನಾಯಕ ರಜತ್ ಪಾಟಿದರ್ ಅವರು ಬೌಲಿಂಗ್ ಆಯ್ಕೆ ಮಾಡಿಕೊಂಡರು.
Virat Kohli
ವಿರಾಟ್ ಕೊಹ್ಲಿ
Updated on

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ 19ನೇ ಸೀಸನ್​ನ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡ ಶುಕ್ರವಾರ ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.

ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ನಾಯಕ ರಜತ್ ಪಾಟಿದರ್ ಅವರು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡ, ನಿಗದಿತ 20 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತು.

ಗುಜರಾತ್ ತಂಡದ ಪರ ಸಾಯಿ ಸುದರ್ಶನ್ ಅವರು 100 ರನ್ ಗಳಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಶುಭಮನ್ ಗಿಲ್ ಕೂಡ 32 ರನ್ ಗಳಿಸಿದರು. ಜೋಸ್ ಬಟ್ಲರ್ 25 ಮತ್ತು ಜೇಸನ್ ಹೋಲ್ಡರ್ 23 ರನ್ ಗಳಿಸಿ ಅಜೇಯರಾಗಿ ಉಳಿದರು.

Virat Kohli
IPL 2026: ಮತ್ತೆ ಮುಗ್ಗರಿಸಿದ ಮುಂಬೈ; CSK ಗೆ 103 ರನ್ ಗೆಲುವು!

ಆರ್‌ಸಿಬಿ ಪರ ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮಾ ಮತ್ತು ಜೋಶ್ ಹ್ಯಾಜಲ್‌ವುಡ್ ಅವರು ತಲಾ ಒಂದು ವಿಕೆಟ್ ಪಡೆದರು.

ಗೆಲುವಿಗೆ 206 ರನ್ ಗಳ ಬೃಹತ್ ಗುರಿ ಬೆನ್ನತ್ತಿದ ಆರ್ ಸಿಬಿ, 26 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡಿತು. ಜಾಕೋಬ್ ಬೆಥೆಲ್ 14 ರನ್‌ಗಳಿಗೆ ಔಟಾದರು.

ನಂತರ ದೇವದತ್ ಪಡಿಕ್ಕಲ್(55) ಹಾಗೂ ವಿರಾಟ್ ಕೊಹ್ಲಿ(81) ಅವರ ಭರ್ಜರಿ ಶತಕದ ಜೊತೆಯಾಟ ಹಾಗೂ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಆರ್ ಸಿಬಿ ತಂಡ, 18.5 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 206 ರನ್ ಗಳಿಸುವ ಮೂಲಕ ಗುಜರಾತ್ ವಿರುದ್ಧ ಐದು ವಿಕೆಟ್ ಗಳ ಗೆಲುವು ಸಾಧಿಸಿತು.

ಗುಜರಾತ್ ಟೈಟಾನ್ಸ್ ವಿರುದ್ಧ ವಿರಾಟ್ ಕೊಹ್ಲಿ 30 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದು ಅವರ 66ನೇ ಐಪಿಎಲ್ ಅರ್ಧಶತಕ ಮತ್ತು ಈ ಋತುವಿನ ಮೂರನೇ ಅರ್ಧಶತಕವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com