

ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ 36ನೇ ಪಂದ್ಯದಲ್ಲಿ ಶನಿವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ ರೋಚಕ ಗೆಲುವು ಸಾಧಿಸಿದೆ.
ಇಂದು ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಹೈದರಾಬಾದ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ, ವೈಭವ್ ಸೂರ್ಯವಂಶಿ(103) ಅವರ ಭರ್ಜರಿ ಶತಕದ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 228 ರನ್ ಗಳಿಸಿತು.
ರಾಜಸ್ಥಾನ ರಾಯಲ್ಸ್ ತಂಡದ ಪರ ವೈಭವ್ ಸೂರ್ಯವಂಶಿ ಅವರು 37 ಎಸೆತಗಳಲ್ಲಿ 103 ರನ್ ಗಳಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು.
ಗೆಲುವಿಗೆ 229 ರನ್ ಗಳ ಬೃಹತ್ ಗುರಿ ಬೆನ್ನತ್ತಿದ ಹೈದರಾಬಾದ್ ತಂಡ, ಅಭಿಷೇಕ್ ಶರ್ಮಾ(57) ಇಶಾನ್ ಕಿಶನ್ ಅವರ ಭರ್ಜರಿ ಅರ್ಧ ಶತಕಗಳ ನೆರವಿನಿಂದ 18.3 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 229 ರನ್ ಗಳಿಸುವ ಮೂಲಕ ಆರ್ ಆರ್ ವಿರುದ್ಧ ಐದು ವಿಕೆಟ್ ಗಳ ಗೆಲುವು ಸಾಧಿಸಿತು.
Advertisement