IPL 2026: LSG ವಿರುದ್ಧ ಸೂಪರ್​ ಓವರ್​ನಲ್ಲಿ ಗೆದ್ದು ಬೀಗಿದ KKR

ಇಂದು ಲಖನೌನ ಏಕನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು.
IPL 2026: Rinku Singh Stars As KKR Beat LSG In Super Over
ಕೆಕೆಆರ್ ಆಟಗಾರರು
Updated on

ಲಖನೌ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ 38ನೇ ಪಂದ್ಯದಲ್ಲಿ ಭಾನುವಾರ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ಸೂಪರ್​ ಓವರ್ ನಲ್ಲಿ ರೋಚಕ ಗೆಲುವು ಸಾಧಿಸಿದೆ.

ಇಂದು ಲಖನೌನ ಏಕನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ, ನಿಗದಿತ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 155 ರನ್ ಗಳಿಸಿತು.

ಕೆಕೆಆರ್ ಆರಂಭದಲ್ಲಿ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿತು. ಆದರೆ, ಇನಿಂಗ್ಸ್‌ ಕೊನೇ ಓವರ್‌ವೊಂದರಲ್ಲೇ ರಿಂಕು ಸಿಂಗ್‌ ಅವರು 4 ಸಿಕ್ಸರ್‌ ಬಾರಿಸುವ ಮೂಲಕ ತಂಡದ ಮೊತ್ತವನ್ನು 150ರ ಗಡಿ ದಾಟಿಸಿದರು.

IPL 2026: Rinku Singh Stars As KKR Beat LSG In Super Over
IPL 2026: RCBಗೆ ದೊಡ್ಡ ಆಘಾತ; ಡೆಲ್ಲಿ ವಿರುದ್ಧದ ಪಂದ್ಯಕ್ಕೂ ಫಿಲ್ ಸಾಲ್ಟ್​ ಅಲಭ್ಯ

ಲಖನೌ ಪರ ಉತ್ತಮ ಬೌಲಿಂಗ್‌ ಮಾಡಿದ ಮೊಹ್ಸಿನ್‌ ಖಾನ್‌, 26 ರನ್‌ ನೀಡಿ ಐದು ವಿಕೆಟ್‌ ಪಡೆದರು. ಜಾರ್ಜ್‌ ಲಿಂಡೆ ಇನ್ನೊಂದು ವಿಕೆಟ್‌ ಪಡೆದರು.

ಗೆಲುವಿಗೆ 156 ರನ್ ಗಳ ಸಾಧಾರಣ ಗುರಿ ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್, ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 155 ರನ್ ಗಳಿಸುವ ಮೂಲಕ ಪಂದ್ಯ ಡ್ರಾನಲ್ಲಿ ಕೊನೆಗೊಂಡಿತು.

ನಂತರ ಸೂಪರ್ ಓವರ್ ನಲ್ಲಿ ಮೂರು ಎಸೆತೆಗಳಲ್ಲಿ ಲಕ್ನೋ ಎರಡು ವಿಕೆಟ್ ಕಳೆದುಕೊಂಡು ಕೇವಲ 1 ರನ್ ಮಾತ್ರ ಗಳಿಸಿತು. ಬಳಿಕ ಬ್ಯಾಟಿಂಗ್ ಮಾಡಿದ ಕೋಲ್ಕತಾ 4 ರನ್ ಗಳಿಸುವ ಮೂಲಕ ರೋಚಕ ಗೆಲುವು ಸಾಧಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com