

ಬೆಂಗಳೂರು: ಕರ್ನಾಟಕ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಟೀಂ ಇಂಡಿಯಾ ಮಾಜಿ ವೇಗಿ, ದಾವಣಗೆರೆ ಎಕ್ಸ್‌ಪ್ರೆಸ್ ಖ್ಯಾತಿಯ ಆರ್ ವಿನಯ್ ಕುಮಾರ್ ಅವರನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ನೇಮಕ ಮಾಡಿದೆ.
2026-27ರ ದೇಶೀಯ ಕ್ರಿಕೆಟ್ ಋತುವಿಗಾಗಿ ರಾಜ್ಯದ ಪುರುಷರ ಮತ್ತು ಮಹಿಳೆಯರ ವಿವಿಧ ವಯೋಮಾನದ ತಂಡಗಳಿಗೆ ಕ್ರಿಕೆಟ್ ಸಲಹಾ ಸಮಿತಿಯ (CAC) ಶಿಫಾರಸಿನ ಮೇರೆಗೆ KSCA ನೂತನ ಕೋಚ್ ಗಳನ್ನು ನೇಮಕ ಮಾಡಿದೆ. ಇನ್ನು ಕರ್ನಾಟಕದ ಮಾಜಿ ಬ್ಯಾಟ್ಸ್‌ಮನ್ ದೀಪಕ್ ಚೌಗುಲೆ ಅವರನ್ನು ಫೀಲ್ಡಿಂಗ್ ಕೋಚ್ ಆಗಿ ನೇಮಿಸಲಾಗಿದೆ.
ವಿನಯ್ ಕುಮಾರ್ 2010ರಲ್ಲಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದರು. 31 ಏಕದಿನ, 9 ಟಿ20 ಹಾಗೂ 1 ಟೆಸ್ಟ್ ಪಂದ್ಯವನ್ನಾಡಿದ್ದಾರೆ. 2004ರಿಂದ 2019ರವರೆಗೂ ಕರ್ನಾಟಕ ತಂಡ ಪ್ರತಿನಿಧಿಸಿದ್ದ ವಿನಯ್ ಕುಮಾರ್ ನಾಯಕತ್ವದಲ್ಲಿ ಸತತ 2 ರಣಜಿ ಟ್ರೋಫಿ ಹಾಗೂ ವಿಜಯ್ ಹಜಾರೆ ಟ್ರೋಫಿಯನ್ನು ಕರ್ನಾಟಕ ಗೆದ್ದಿತ್ತು.