India vs Sri Lanka: ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್; ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್!

ಶ್ರೀಲಂಕಾದ ವೇಗದ ಬೌಲರ್ ಲಹಿರು ಕುಮಾರ ಎಸೆತವನ್ನು ಬೌಂಡರಿಗೆ ಅಟ್ಟುವ ಮೂಲಕ ರಿಷಭ್ ಪಂತ್ ಹೊಸ ಮೈಲಿಗಲ್ಲು ತಲುಪಿದರು.
India vs Sri Lanka: Rishabh Pant Creates History, Becomes First Indian To Hit 100 Sixes In Test Cricket
ರಿಷಭ್ ಪಂತ್
Updated on

ಗ್ಯಾಲೆ: ಶ್ರೀಲಂಕಾ ವಿರುದ್ಧ ಗ್ಯಾಲೆಯಲ್ಲಿ ಮಂಗಳವಾರ ನಡೆದ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಹೊಸ ದಾಖಲೆ ಬರೆದಿದ್ದು, ಟೆಸ್ಟ್ ಕ್ರಿಕೆಟ್‌ನಲ್ಲಿ 100 ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಶ್ರೀಲಂಕಾದ ವೇಗದ ಬೌಲರ್ ಲಹಿರು ಕುಮಾರ ಎಸೆತವನ್ನು ಬೌಂಡರಿಗೆ ಅಟ್ಟುವ ಮೂಲಕ ರಿಷಭ್ ಪಂತ್ ಹೊಸ ಮೈಲಿಗಲ್ಲು ತಲುಪಿದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ ಮತ್ತು ಅತಿ ಕಡಿಮೆ ಇನ್ನಿಂಗ್ಸ್​ಗಳಲ್ಲಿ 100 ಸಿಕ್ಸರ್‌ಗಳನ್ನು ಬಾರಿಸಿದ ವಿಶ್ವ ದಾಖಲೆ ಇದೀಗ ರಿಷಭ್ ಪಂತ್ ಪಾಲಾಗಿದೆ. ಪಂತ್ ಕೇವಲ 89 ಇನ್ನಿಂಗ್ಸ್​ ಮತ್ತು 4,918 ಎಸೆತಗಳಲ್ಲಿ ಸಿಕ್ಸರ್​ಗಳ ಶತಕ ಪೂರೈಸಿದ್ದಾರೆ.

28 ವರ್ಷದ ರಿಷಭ್ ಪಂತ್, ಶ್ರೀಲಂಕಾ ವಿರುದ್ಧ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದು, ಬೌಂಡರಿ ಮತ್ತು ಸಿಕ್ಸರ್‌ಗಳೊಂದಿಗೆ ಅಬ್ಬರಿಸಿದರು. ಅವರು ತಮ್ಮ ಎರಡನೇ ಸಿಕ್ಸ್ ಹೊಡೆದ ತಕ್ಷಣ, ಟೆಸ್ಟ್ ಕ್ರಿಕೆಟ್‌ನಲ್ಲಿ ಅವರ 100 ಸಿಕ್ಸರ್‌ಗಳು ಪೂರ್ಣಗೊಂಡವು. ಇದರೊಂದಿಗೆ ಗಿಲ್‌ಕ್ರಿಸ್ಟ್ ಸಿಕ್ಸರ್‌ಗಳ ದಾಖಲೆ ಸರಿಗಟ್ಟಿದರು.

India vs Sri Lanka: Rishabh Pant Creates History, Becomes First Indian To Hit 100 Sixes In Test Cricket
India vs Sri Lanka: DRS ತೆಗೆದುಕೊಳ್ಳುವಂತೆ ಒತ್ತಾಯಿಸಿದ ಕನ್ನಡಿಗ ದೇವದತ್ ಪಡಿಕ್ಕಲ್ ಜೊತೆ ಗಮನ ಸೆಳೆದ ಕೆಎಲ್ ರಾಹುಲ್ Bromance!

ಪ್ರಸ್ತುತ ಟೆಸ್ಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ವಿಶ್ವ ದಾಖಲೆ ಇಂಗ್ಲೆಂಡ್‌ನ ಬೆನ್ ಸ್ಟೋಕ್ಸ್ ಹೆಸರಿನಲ್ಲಿದೆ. ಅವರು 138 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಎರಡನೇ ಸ್ಥಾನದಲ್ಲಿ ನ್ಯೂಜಿಲೆಂಡ್‌ನ ಬ್ರೆಂಡನ್ ಮೆಕಲಮ್ ಇದ್ದಾರೆ, ಅವರು 107 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ.

ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ 193 ರನ್​ಗಳಿಗೆ ಆಲೌಟ್ ಆಗಿದ್ದು, ಶ್ರೀಲಂಕಾಗೆ 372 ರನ್​ಗಳ ಗುರಿ ನೀಡಿದೆ. ಇನ್ನು ಎರಡನೇ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ ಪರ ರಿಷಭ್ ಪಂತ್ ಅತ್ಯಧಿಕ 66 ರನ್​ಗಳ ಇನ್ನಿಂಗ್ಸ್ ಆಡಿದರು. ಅವರ ಈ ಇನ್ನಿಂಗ್ಸ್​ನಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್‌ಗಳು ಸೇರಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com