ಐದು ವರ್ಷದ ಬಳಿಕ RCB ಸ್ಟಾರ್ ಆಟಗಾರನಿಗೆ ಗುಡ್ ನ್ಯೂಸ್; ಮತ್ತೆ ಟೀಂ ಇಂಡಿಯಾಗೆ ಕೃನಾಲ್ ಪಾಂಡ್ಯ ಎಂಟ್ರಿ?

ಐಪಿಎಲ್​ನಲ್ಲಿ ಆರ್ ಸಿಬಿ ಪರ ಅದ್ಭುತ ಪ್ರದರ್ಶನ ನೀಡಿದ್ದ ಕೃನಾಲ್ ಪಾಂಡ್ಯ ಇದೀಗ ಟೀಂ ಇಂಡಿಯಾಗೆ ಮರಳುವ ಸಾಧ್ಯತೆ ಇದೆ.
Krunal Pandya
ಕೃನಾಲ್ ಪಾಂಡ್ಯ
Updated on

ನವದೆಹಲಿ: ವಿರಾಟ್ ಕೊಹ್ಲಿ ನೇತೃತ್ವದ ಆರ್‌ಸಿಬಿ ತಂಡದ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯ ಅವರಿಗೆ ಬರೋಬ್ಬರಿ ಐದು ವರ್ಷಗಳ ನಂತರ ಗುಡ್ ನ್ಯೂಸ್ ಸಿಕ್ಕಿದ್ದು, ಮುಂದಿನ ತಿಂಗಳು ದೆಹಲಿಯಲ್ಲಿ ನಡೆಯುವ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20ಐ ಸರಣಿಗೆ ಆಯ್ಕೆಯಾಗುವ ಸಾಧ್ಯತೆ ಇದೆ.

ಐಪಿಎಲ್ 2026ರ ಸೀಸನ್‌ಗೂ ಮುನ್ನ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ(RCB) ಕೃನಾಲ್ ಪಾಂಡ್ಯ ಅವರನ್ನು 5.75 ಕೋಟಿ ರೂ.ಗೆ ಉಳಿಸಿಕೊಂಡಿತ್ತು. ಐಪಿಎಲ್​ನಲ್ಲಿ ಆರ್ ಸಿಬಿ ಪರ ಅದ್ಭುತ ಪ್ರದರ್ಶನ ನೀಡಿದ್ದ ಕೃನಾಲ್ ಪಾಂಡ್ಯ ಇದೀಗ ಟೀಂ ಇಂಡಿಯಾಗೆ ಮರಳುವ ಸಾಧ್ಯತೆ ಇದೆ.

ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿ ಸೆಪ್ಟೆಂಬರ್ 13 ರಂದು ಆರಂಭವಾಗಲಿದ್ದು, ಈ ಸರಣಿಗಾಗಿ ಟೀಂ ಇಂಡಿಯಾ ಆಯ್ಕೆ ಶೀಘ್ರದಲ್ಲೇ ನಡೆಯುವ ನಿರೀಕ್ಷೆಯಿದೆ.

Krunal Pandya
ಬೆಸ್ಟ್ ಕ್ರಿಕೆಟಿಂಗ್ ಬ್ರೈನ್ ಇರುವುದು ಯಾರಿಗೆ?; ಎಂಎಸ್ ಧೋನಿ ಖಂಡಿತಾ ಅಲ್ಲ, RCB ಮಾಜಿ ಮೆಂಟರ್ ಹೆಸರೇಳಿದ ಮೊಯಿನ್ ಅಲಿ!

ವರದಿಯ ಪ್ರಕಾರ ಈ ಸರಣಿಗೆ ಕೆಲವು ಅಚ್ಚರಿಯ ಆಯ್ಕೆಗಳನ್ನು ಮಾಡಲು ಬಿಸಿಸಿಐ ಮುಂದಾಗಿದೆ. ಅದರಂತೆ 2021 ರಿಂದ ಭಾರತ ತಂಡದಿಂದ ಹೊರಗುಳಿದಿದ್ದ ಸ್ಪಿನ್ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಅವರನ್ನು ಈ ಸರಣಿಗೆ ತಂಡದಲ್ಲಿ ಆಯ್ಕೆ ಮಾಡಬಹುದು ಎನ್ನಲಾಗಿದೆ.

ಕಳೆದ ಐದು ವರ್ಷಗಳಿಂದ ಭಾರತ ತಂಡದಿಂದ ಹೊರಗುಳಿದಿರುವ ಕೃನಾಲ್ ಪಾಂಡ್ಯ ಕೊನೆಯ ಬಾರಿಗೆ 2021 ರಲ್ಲಿ ಟೀಂ ಇಂಡಿಯಾ ಪರ ಟಿ20 ಪಂದ್ಯ ಆಡಿದ್ದರು. ಅಂದಿನಿಂದ ಕೃನಾಲ್​ಗೆ ತಂಡದಲ್ಲಿ ಅವಕಾಶ ಸಿಕ್ಕಿಲ್ಲ. ಆದಾಗ್ಯೂ ಕೃನಾಲ್ ಐಪಿಎಲ್​ನಲ್ಲಿ ತಮ್ಮ ಅಮೋಘ ಪ್ರದರ್ಶನವನ್ನು ಮುಂದುವರೆಸಿದ್ದು, ಈಗ ಆಯ್ಕೆದಾರರು ಕೃನಾಲ್ ಪಾಂಡ್ಯ ಅವರ ಹೆಸರನ್ನು ಪರಿಗಣಿಸುತ್ತಿದ್ದಾರೆ ಎಂದು ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com