Thank you, Pakistan: ಭಾರತದ ವಿರುದ್ಧ ಬಾಂಗ್ಲಾದೇಶದ ಹಗೆತನ ಬಟ್ಟ ಬಯಲು!

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಆಸಿಫ್ ನಜ್ರುಲ್, "ಧನ್ಯವಾದಗಳು, ಪಾಕಿಸ್ತಾನ" ಎಂದು ಬರೆದುಕೊಂಡಿದ್ದಾರೆ.
india, Bangladesh Casual Images
ಭಾರತ, ಬಾಂಗ್ಲಾದೇಶ ತಂಡಗಳ ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಬಾಂಗ್ಲಾದೇಶದ ಮುಖವಾಡ ಈಗ ಕಳಚಿ ಬಿದ್ದಿದೆ.T20 ವಿಶ್ವಕಪ್ 2026 ರಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಮೌನವಾಗಿ ಕೈಜೋಡಿಸಿವೆ.

ಕೊಲಂಬೊದಲ್ಲಿ ಭಾರತ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವ ಮೂಲಕ ಟಿ-20 ವಿಶ್ವಕಪ್ ನಲ್ಲಿ ಬಾಂಗ್ಲಾದೇಶವನ್ನು ಬಹಿಷ್ಕರಿಸಿರುವುದನ್ನು ಬೆಂಬಲಿಸಿದ್ದಕ್ಕಾಗಿ ಆ ದೇಶದ ಕ್ರೀಡಾ ಸಲಹೆಗಾರ, ಆಸಿಫ್ ನಜ್ರುಲ್ ಇಸ್ಲಾಮಾಬಾದ್‌ಗೆ ಧನ್ಯವಾದ ಸಲ್ಲಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಆಸಿಫ್ ನಜ್ರುಲ್, "ಧನ್ಯವಾದಗಳು, ಪಾಕಿಸ್ತಾನ" ಎಂದು ಬರೆದುಕೊಂಡಿದ್ದಾರೆ. ಟಿ20 ವಿಶ್ವಕಪ್‌ನಿಂದ ಬಾಂಗ್ಲಾದೇಶವನ್ನು ಹೊರಗಿಟ್ಟಿರುವುದನ್ನು ವಿರೋಧಿಸಿ ಭಾರತ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಲು ತಮ್ಮ ದೇಶ ನಿರ್ಧರಿಸಿದೆ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿಕೆ ಬೆನ್ನಲ್ಲೇ ಆಸಿಫ್ ನಜ್ರುಲ್ ಈ ಪೋಸ್ಟ್ ಮಾಡಿದ್ದಾರೆ.

2024ರ ಜುಲೈ-ಆಗಸ್ಟ್ ನಲ್ಲಿ ನಡೆದ ದಂಗೆಯಲ್ಲಿ ಶೇಖ್ ಹಸೀನಾ ಅವರ ಸರ್ಕಾರ ಪದಚ್ಯುತಿ ನಂತರ ಅಸ್ತಿತ್ವಕ್ಕೆ ಬಂದಿರುವ ಮಧ್ಯಂತರ ಆಡಳಿತದಲ್ಲಿ ನಜ್ರುಲ್ ಕ್ರೀಡಾ ಸಚಿವರಾಗಿದ್ದಾರೆ. ಭದ್ರತಾ ಕಾರಣಗಳನ್ನು ಉಲ್ಲೇಖಿಸಿ ಭಾರತದ ನೆಲದಲ್ಲಿ ಆಡಲು ಬಾಂಗ್ಲಾದೇಶ ನಿರಾಕರಿಸಿದ ನಂತರ ಫೆಬ್ರವರಿ 15 ರಂದು ಕೊಲಂಬೊದಲ್ಲಿ ಭಾರತ ವಿರುದ್ಧದ ಪಂದ್ಯವನ್ನು ನಿರ್ಬಂಧಿಸುವಂತೆ ಪಾಕಿಸ್ತಾನ ಸರ್ಕಾರ ಅಲ್ಲಿನ ಕ್ರಿಕೆಟ್ ಮಂಡಳಿಗೆ (ಪಿಸಿಬಿ) ತಿಳಿಸಿದೆ.

ಈ ಕುರಿತ ನಮ್ಮ ನಿಲುವು ಸ್ಪಷ್ಟವಾಗಿದೆ. ಭಾರಕತದ ವಿರುದ್ಧದ ಪಂದ್ಯವನ್ನು ನಾವು ಆಡಲ್ಲ. ಏಕೆಂದರೆ ಕ್ರೀಡಾ ಕ್ಷೇತ್ರದಲ್ಲಿ ರಾಜಕೀಯ ಇರಬಾರದು ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿಕೆ ಬೆನ್ನಲ್ಲೇ ನಜ್ರುಲ್ ಧನ್ಯವಾದ ಸಲ್ಲಿಸಿದದಾರೆ. ಇಸ್ಲಾಮಾಬಾದ್‌ನಲ್ಲಿ ನಡೆದ ಸರ್ಕಾರಿ ಸಭೆಯಲ್ಲಿ ಷರೀಫ್ ಹೇಳಿಕೆ ನೀಡಿದ್ದು, ಟಿ20 ವಿಶ್ವಕಪ್‌ನಲ್ಲಿ ನಾವು ಭಾರತದ ವಿರುದ್ಧದ ಪಂದ್ಯವನ್ನು ಆಡುವುದಿಲ್ಲ ಎಂಬ ಸ್ಪಷ್ಟ ನಿಲುವನ್ನು ತೆಗೆದುಕೊಂಡಿದ್ದೇವೆ.

india, Bangladesh Casual Images
T20 World Cup 2026, India vs Pakistan: ಪಂದ್ಯ ಬಹಿಷ್ಕರಿಸುವ​ ನಿರ್ಧಾರ, ನಮ್ಮ ನಿಲುವು ಸ್ಪಷ್ಟ ಎಂದ ಪಾಕ್ ಪ್ರಧಾನಿ; Video

ನಾವು ಸಂಪೂರ್ಣವಾಗಿ ಬಾಂಗ್ಲಾದೇಶದ ಪರವಾಗಿ ನಿಲ್ಲಬೇಕು.ಇದು ಅತ್ಯಂತ ಸೂಕ್ತವಾದ ನಿರ್ಧಾರ ಎಂದು ನಾನು ಭಾವಿಸುತ್ತೇನೆ. ನಾವು ಬಾಂಗ್ಲಾದೇಶದೊಂದಿಗೆ ಇದ್ದೇವೆ ಎಂದು ಅವರು ಹೇಳಿದ್ದಾರೆ. ಷರೀಫ್ ಹೇಳಿಕೆ T20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ಹಿಂದಿನ ಕಾರಣವನ್ನು ಪಾಕಿಸ್ತಾನದ ಸರ್ಕಾರ ಅಥವಾ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಪರವಾಗಿ ಬಂದ ಮೊದಲ ಅಧಿಕೃತ ಹೇಳಿಕೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com