T20 ವಿಶ್ವಕಪ್ 2026: ICC ಪತ್ರಕ್ಕೆ ಬಾಲ ಮುದುರಿಕೊಂಡ ಪಾಕ್, ಯು-ಟರ್ನ್!

ಪಂದ್ಯದಲ್ಲಿ ಪಾಲ್ಗೊಳ್ಳುವಿಕೆಗೆ ಸಂಬಂಧಿಸಿ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (PCB) ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ICC) ಜೊತೆ ಹೊಸದಾಗಿ ಮಾತುಕತೆ ಆರಂಭಿಸಿದೆ ಎಂದು ತಿಳಿದುಬಂದಿದೆ.
INDIA-PAK PLAYERS
ಭಾರತ-ಪಾಕ್ ತಂಡದ ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸಿರುವ ಮಾತುಗಳನ್ನಾಡುತ್ತಿದ್ದ ಪಾಕಿಸ್ತಾನದ ಬಾಲ ಮುದುರಿಕೊಂಡಂತೆ ಕಾಣುತ್ತಿದೆ. ಫೆಬ್ರವರಿ 15 ರಂದು ನಡೆಯಲಿರುವ ಹೈವೋಲ್ಜೇಜ್ ಪಂದ್ಯದಲ್ಲಿ ಆಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಪಂದ್ಯದಲ್ಲಿ ಪಾಲ್ಗೊಳ್ಳುವಿಕೆಗೆ ಸಂಬಂಧಿಸಿ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (PCB) ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ICC) ಜೊತೆ ಹೊಸದಾಗಿ ಮಾತುಕತೆ ಆರಂಭಿಸಿದೆ ಎಂದು ತಿಳಿದುಬಂದಿದೆ.

ಪಾಕಿಸ್ತಾನದ ಬಹಿಷ್ಕಾರ ನಿರ್ಧಾರವನ್ನು ಆ ದೇಶದ ಸರ್ಕಾರ ಪ್ರಕಟಿಸಿದ ಬಳಿಕ ಪಿಸಿಬಿ ಇಕ್ಕಟ್ಟಿಗೆ ಸಿಲುಕಿತ್ತು. ಭಾರತದ ವಿರುದ್ಧದ ಪಂದ್ಯದ ಬಹಿಷ್ಕಾರದ ಬಗ್ಗೆ ತನ್ನ ನಿರ್ಧಾರದ ಬಗ್ಗೆ ಸೂಕ್ತ ಕಾರಣಗಳೊಂದಿಗೆ ಸ್ಪಷ್ಟನೆ ನೀಡುವಂತೆ ಐಸಿಸಿ ತಾಕೀತು ಮಾಡಿದ ನಂತರ ಈ ಹಠಾತ್ ಬದಲಾವಣೆಯಾಗಿದೆ.

ಸದ್ಯದ ಬಿಕ್ಕಟ್ಟು ಶಮನಕ್ಕೆ PCB ಅಧಿಕಾರಿಗಳೊಂದಿಗೆ ನಿರ್ಣಾಯಕ ಸಭೆ ನಡೆಸಲು BCB ಅಧ್ಯಕ್ಷ ಅಮಿನುಲ್ ಇಸ್ಲಾಂ ಬುಲ್‌ಬುಲ್ ಭಾನುವಾರ ಲಾಹೋರ್‌ ತಲುಪಿದ್ದಾರೆ. ಅಲ್ಲದೇ, ಇಬ್ಬರು ICC ಅಧಿಕಾರಿಗಳು ಸಹ BCB ಮತ್ತು PCB ಇಬ್ಬರನ್ನೊಳಗೊಂಡ ಸಭೆಗಾಗಿ ಲಾಹೋರ್‌ಗೆ ಪ್ರಯಾಣಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಒಂದು ವೇಳೆ ಪಾಕಿಸ್ತಾನ, ಭಾರತದ ವಿರುದ್ಧದ ಪಂದ್ಯ ಬಹಿಷ್ಕರಿಸುವ ನಿರ್ಧಾರ ತೆಗೆದುಕೊಂಡರೆ ಭಾರಿ ದಂಡ, ಪಾಯಿಂಟ್ ಕಡಿತ, ಸಂಭಾವ್ಯ ಸದಸ್ಯತ್ಯ ಅಮಾನತು, ಮುಂಬರುವ ಅಂತಾರಾಷ್ಟ್ರೀಯ ಟೂರ್ನಿಗಳ ಪ್ರಸಾರದ ಹಕ್ಕು ಕಡಿತ ಸೇರಿದಂತೆ ಅನೇಕ ನಿರ್ಬಂಧಗಳನ್ನು ಎದುರಿಸಬೇಕಾದ ಎಚ್ಚರಿಕೆಯನ್ನು ಐಸಿಸಿ ಈಗಾಗಲೇ ಪತ್ರದ ಮೂಲಕ ನೀಡಿದೆ ಎನ್ನಲಾಗಿದೆ.

ಭಾರತ ಮತ್ತು ಪಾಕಿಸ್ತಾನ ಎರಡೂ ತಂಡಗಳು ಈಗಾಗಲೇ T20 ವಿಶ್ವಕಪ್ ಅಭಿಯಾನವನ್ನು ಆರಂಭಿಸಿವೆ. ಕೊಲಂಬೊದಲ್ಲಿ ನಡೆದ ಟೂರ್ನಿಯ ಆರಂಭಿಕ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ಧ ಪಾಕಿಸ್ತಾನ ಮೂರು ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಭೀತಿಯಿಂದ ಹೊರಬಂದಿತು. ಮತ್ತೊಂದೆಡೆ, ಹಿಂದಿನ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನವನ್ನು ಬಗ್ಗುಬಡಿದಿದ್ದ ಅಮೆರಿಕದ ವಿರುದ್ಧ ಭಾರತ ಗೆಲುವು ಸಾಧಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com