ತವರಿನಲ್ಲೇ ಆಸ್ಟ್ರೇಲಿಯಾಗೆ ಮುಖಭಂಗ: 3ನೇ ಪಂದ್ಯ ಗೆದ್ದ ಭಾರತ, T20 ಸರಣಿ ಟೀಂ ಇಂಡಿಯಾ ಕೈವಶ!

ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ 17 ರನ್‌ಗಳಿಂದ ಜಯಗಳಿಸಿದೆ. ಇದರೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ 2-1 ಗೆಲುವು ಸಾಧಿಸಿತು.
Team India
ಟೀಂ ಇಂಡಿಯಾ
Updated on: 

ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ 17 ರನ್‌ಗಳಿಂದ ಜಯಗಳಿಸಿದೆ. ಇದರೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ 2-1 ಗೆಲುವು ಸಾಧಿಸಿತು. ಅಡಿಲೇಡ್ ಓವಲ್‌ನಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 177 ರನ್‌ಗಳ ಗುರಿಯನ್ನು ನಿಗದಿಪಡಿಸಿತು. ಇದಕ್ಕೆ ಪ್ರತಿಕ್ರಿಯೆಯಾಗಿ ಆಸ್ಟ್ರೇಲಿಯನ್ನರು ಕೇವಲ 159 ರನ್‌ಗಳನ್ನು ಗಳಿಸಲಷ್ಟೇ ಶಕ್ತವಾಗಿದ್ದು 17 ರನ್‌ಗಳಿಂದ ಭಾರತಕ್ಕೆ ಶರಣಾಯಿತು.

ಭಾರತದ 177 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡವು ಉತ್ತಮ ಆರಂಭವನ್ನು ಪಡೆಯಲಿಲ್ಲ. ಜಾರ್ಜಿಯಾ ವೋಲ್ ರೂಪದಲ್ಲಿ ಮೊದಲ ವಿಕೆಟ್ ಪತನವಾಯಿತು. ಅವರು ಕೇವಲ 10 ರನ್‌ಗಳಿಗೆ ಔಟಾದರು. ಬೆತ್ ಮೂನಿ (6), ಅಲಿಸಾ ಪೆರ್ರಿ (1), ಮತ್ತು ಫೋಬೆ ಲಿಚ್‌ಫೀಲ್ಡ್ (26) ಔಟಾದರು. ಆಸ್ಟ್ರೇಲಿಯಾದ ಪ್ರಮುಖ ಸ್ಕೋರರ್ ಆಶ್ಲೀ ಗಾರ್ಡ್ನರ್ ಅವರು 45 ಎಸೆತಗಳಲ್ಲಿ 57 ರನ್‌ಗಳಿಗೆ ಔಟಾದರು. ಗಾರ್ಡ್ನರ್ ತಮ್ಮ ಇನ್ನಿಂಗ್ಸ್‌ನಲ್ಲಿ ಐದು ಬೌಂಡರಿ ಮತ್ತು ಒಂದು ಸಿಕ್ಸರ್ ಬಾರಿಸಿದರು.

ಭಾರತದ ಶಿಸ್ತಿನ ಬೌಲಿಂಗ್ ಎದುರು ಇತರ ಯಾವುದೇ ಬ್ಯಾಟ್ಸ್‌ಮನ್‌ಗಳು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಉಳಿಯಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಆಸ್ಟ್ರೇಲಿಯಾ ಕೇವಲ 159 ರನ್‌ಗಳನ್ನು ಗಳಿಸಲು ಮಾತ್ರ ಸಾಧ್ಯವಾಯಿತು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತೀಯ ಕ್ರಿಕೆಟ್ ತಂಡವು ಅದ್ಭುತವಾಗಿ ಬ್ಯಾಟಿಂಗ್ ಮಾಡಿ 177 ರನ್‌ಗಳ ಗುರಿಯನ್ನು ನೀಡಿತು. ಸ್ಮೃತಿ ಮಂಧಾನ ಮತ್ತು ಜೆಮಿಮಾ ರೊಡ್ರಿಗಸ್ ಎರಡನೇ ವಿಕೆಟ್‌ಗೆ 140 ರನ್‌ಗಳ ಜೊತೆಯಾಟವಾಡಿದರು. ಸ್ಮೃತಿ ಮಂಧಾನ ಮತ್ತು ಜೆಮಿಮಾ ರೊಡ್ರಿಗಸ್ ಭಾರತದ ಪರ ಗರಿಷ್ಠ ಸ್ಕೋರರ್‌ಗಳಾಗಿದ್ದರು, 82 ಮತ್ತು 59 ರನ್ ಗಳಿಸಿದರು.

Team India
ಭಾರತದ ವಿರುದ್ಧ ಸೋತಿದ್ದು ಅವಮಾನ ಅನಿಸಲಿಲ್ಲ; ಆದರೆ ಲಂಕಾ ಪೊಲೀಸರ ಬಗ್ಗೆ ಬೇಸರ ವ್ಯಕ್ತಪಡಿಸಿದ Pak ಬೌಲರ್!

ಭಾರತ 2-1 ಅಂತರದಲ್ಲಿ ಸರಣಿ ಗೆಲುವು

ಭಾರತ ಮತ್ತು ಆಸ್ಟ್ರೇಲಿಯಾ ಮಹಿಳಾ ತಂಡಗಳ ನಡುವೆ ಮೂರು ಪಂದ್ಯಗಳ ಟಿ20 ಸರಣಿ ನಡೆಯಿತು. ಭಾರತ ಮೊದಲ ಪಂದ್ಯವನ್ನು ಗೆದ್ದರೆ, ಆಸ್ಟ್ರೇಲಿಯಾ ಎರಡನೇ ಪಂದ್ಯವನ್ನು ಗೆದ್ದಿತು. ಭಾರತ ಮತ್ತೊಮ್ಮೆ ಮೂರನೇ ಪಂದ್ಯವನ್ನು ಗೆದ್ದು, 2-1 ಸರಣಿಯನ್ನು ಗೆದ್ದುಕೊಂಡಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com