

ಮುಂಬೈ: 2026ರ T20 ವಿಶ್ವಕಪ್‌ನ ಸೂಪರ್ 8 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಜಿಂಬಾಬ್ವೆ ವಿರುದ್ಧ ಬರೋಬ್ಬರಿ 107 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲ ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ವೆಸ್ಟ್ ಇಂಡೀಸ್, ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 254 ರನ್ ಗಳಿಸಿತು.
ಶಿಮ್ರಾನ್ ಹೆಟ್ಮೈಯರ್ 19 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು ಮತ್ತು 34 ಎಸೆತಗಳಲ್ಲಿ 85 ರನ್ ಗಳಿಸಿ ಔಟಾದರು. ಟಿ20 ವಿಶ್ವಕಪ್ ಇತಿಹಾಸದಲ್ಲಿ ರೋವ್ಮನ್ ಪೊವೆಲ್ ಕೂಡ ಅರ್ಧಶತಕ ಗಳಿಸಿದರು. 35 ಎಸೆತಗಳಲ್ಲಿ 4 ಬೌಂಡರಿ ಮತ್ತು 4 ಸಿಕ್ಸರ್‌ಗಳ ಸಹಾಯದಿಂದ 59 ರನ್ ಗಳಿಸಿ ಔಟಾದರು. ಕೊನೆಯಲ್ಲಿ, ಶೆರ್ಫೇನ್ ರುದರ್ಫೋರ್ಡ್ 13 ಎಸೆತಗಳಲ್ಲಿ 31 ರನ್ ಗಳಿಸಿದರೆ, ಜೇಸನ್ ಹೋಲ್ಡರ್ 4 ಎಸೆತಗಳಲ್ಲಿ 13 ರನ್ ಗಳಿಸಿದರು.
ಜಿಂಬಾಬ್ವೆ ಪರ, ರಿಚರ್ಡ್ ನ್ಗಾರವಾ 4 ಓವರ್‌ಗಳಲ್ಲಿ 47 ರನ್‌ಗಳಿಗೆ 2 ವಿಕೆಟ್ ಪಡೆದರು.
ಗೆಲುವಿಗೆ 255 ರನ್ ಗಳ ಬೃಹತ್ ಗುರಿ ಬೆನ್ನತ್ತಿದ ಜಿಂಬಾಬ್ವೆ, 17. 4 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು ಕೇವಲ 148 ರನ್ ಗಳಿಸುವ ಮೂಲಕ 107 ರನ್ ಗಳಿಂದ ಸೋಲು ಒಪ್ಪಿಕೊಂಡಿತು.
ಜಿಂಬಾಬ್ವೆ ತಂಡ ಗ್ರೂಪ್ ಹಂತದಲ್ಲಿ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾದಂತಹ ತಂಡಗಳನ್ನು ಸೋಲಿಸಿ ಅಜೇಯವಾಗಿ ಸೂಪರ್ 8 ಪ್ರವೇಶಿಸಿತ್ತು. ಆದರೆ ಇಂದು ಹೀನಾಯ ಸೋಲು ಅನುಭವಿಸಿದೆ.
Advertisement