T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

ಇಂದು ಕೊಲಂಬೋದ ಐತಿಹಾಸಿಕ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲ ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್, ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 168 ರನ್ ಗಳಿಸಿತು.
T20 World Cup 2026: New Zealand crush Sri Lanka, boost semifinal hopes
ಮಿಚೆಲ್ ಸ್ಯಾಂಟ್ನರ್
Updated on

ಕೊಲಂಬೋ: 2026ರ T20 ವಿಶ್ವಕಪ್‌ನ ಆರನೇ ಸೂಪರ್ 8 ಪಂದ್ಯದಲ್ಲಿ ನ್ಯೂಜಿಲ್ಯಾಂಡ್​​ ತಂಡ ಬುಧವಾರ ಶ್ರೀಲಂಕಾ ವಿರುದ್ಧ 61 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಸೆಮಿಫೈನಲ್ ಪ್ರವೇಶಿಸುವ ವಿಶ್ವಾಸ ಹೆಚ್ಚಿಸಿಕೊಂಡಿದೆ.

ಇಂದು ಕೊಲಂಬೋದ ಐತಿಹಾಸಿಕ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲ ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್, ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 168 ರನ್ ಗಳಿಸಿತು.

ನ್ಯೂಜಿಲ್ಯಾಂಡ್ ನಾಯಕ ಮುಚೆಲ್​ ಸ್ಯಾಂಟ್ನರ್(47) ಹಾಗೂ ಆಲ್​ರೌಂಡರ್ ಕೋಲ್ ಮೆಕೆಂಜಿ(32) ಜವಾಬ್ದಾರಿಯುತ ಬ್ಯಾಟಿಂಗ್ ಮಾಡಿದರು.

T20 World Cup 2026: New Zealand crush Sri Lanka, boost semifinal hopes
T20 World Cup 2026: ಬ್ರೂಕ್ ಭರ್ಜರಿ ಶತಕ; ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ ಇಂಗ್ಲೆಂಡ್​

ಗೆಲುವಿಗೆ 169 ರನ್ ಗಳ ಸವಾಲಿನ ಮೊತ್ತ ಬೆನ್ನತ್ತಿದ ಶ್ರೀಲಂಕಾ, 20 ಓವರ್‌ಗಳಲ್ಲಿ ಎಂಟು ವಿಕೆಟ್ ಕಳೆದುಕೊಂಡು ಕೇವಲ 107 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ 61 ರನ್ ಗಳಿಂದ ಸೋಲು ಒಪ್ಪಿಕೊಂಡ ಶ್ರೀಲಂಕಾ, T20 ವಿಶ್ವಕಪ್‌ ಟೂರ್ನಿಯಿಂದ ಹೊರಬಿದ್ದಿದೆ.

Follow KannadaPrabha channel on WhatsApp

Download the KannadaPrabha News app to follow the latest news updates

Subscribe and Receive exclusive content and updates on your favorite topics

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com