

ನಟ ಶಾರುಖ್ ಖಾನ್ ಒಡೆತನದ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡಕ್ಕೆ ಬಾಂಗ್ಲಾದೇಶದ ಬೌಲರ್ ಮುಸ್ತಾಫಿಜುರ್ ರೆಹಮಾನ್ ನನ್ನು ತಮ್ಮ ತಂಡದಿಂದ ಕೈಬಿಡುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಸೂಚಿಸಿದ ಬೆನ್ನಲ್ಲೇ KKR ಫ್ರಾಂಚೈಸಿ ಮುಸ್ತಾಫಿಜುರ್ ರೆಹಮಾನ್ ನನ್ನು ತಂಡದಿಂದ ಕೈಬಿಟ್ಟಿದೆ.
ಬಾಂಗ್ಲಾದೇಶದಲ್ಲಿ ಹಿಂದೂಗಳ ಸಾಲು ಸಾಲು ಹತ್ಯೆಗಳು ಭಾರತೀಯ ಕ್ರಿಕೆಟ್ ಜಗತ್ತಿನಲ್ಲಿ ಪ್ರಮುಖ ಚರ್ಚೆಯ ವಿಷಯವಾಯಿತು. ಇದು ಗಡಿಯಾಚೆಗಿನ ಭಾವನೆಗಳನ್ನು ಕೆರಳಿಸಿತು. ಹೀಗಾಗಿ ಬಿಸಿಸಿಐ ಕೆಕೆಆರ್ ತಂಡಕ್ಕೆ ಮುಸ್ತಾಫಿಜುರ್ ರೆಹಮಾನ್ ಅವರನ್ನು ಕೈಬಿಡುವಂತೆ ತಿಳಿಸಿತ್ತು.
ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಮಾತನಾಡಿ, "ಇತ್ತೀಚಿನ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು, ಬಿಸಿಸಿಐ ಕೆಕೆಆರ್ ಫ್ರಾಂಚೈಸಿಗೆ ಮುಸ್ತಾಫಿಜುರ್ ರೆಹಮಾನ್ ಅವರನ್ನು ತಮ್ಮ ತಂಡದಿಂದ ಕೈಬಿಡುವಂತೆ ನಿರ್ದೇಶಿಸಿತ್ತು. ಇದಲ್ಲದೆ, ಆತನ ಬದಲಿ ಆಟಗಾರನಿಗಾಗಿ ಕೆಕೆಆರ್ ವಿನಂತಿಸಿದರೆ, ಬಿಸಿಸಿಐ ಆ ಬದಲಿ ಆಟಗಾರನಿಗೆ ಅವಕಾಶ ನೀಡುತ್ತದೆ ಎಂದು ಬಿಸಿಸಿಐ ಹೇಳಿದೆ.
ಮುಸ್ತಾಫಿಜುರ್ ರೆಹಮಾನ್ ಹಲವು ಲೀಗ್‌ಗಳಲ್ಲಿ ಆಡುತ್ತಿದ್ದಾರೆ. ಮುಸ್ತಾಫಿಜುರ್ ರೆಹಮಾನ್ 2016ರಿಂದ ಐಪಿಎಲ್‌ನಲ್ಲಿ ಆಡುತ್ತಿದ್ದಾರೆ. ಇಲ್ಲಿಯವರೆಗೆ, ಬಾಂಗ್ಲಾದೇಶದ ಆಟಗಾರ ಸನ್‌ರೈಸರ್ಸ್ ಹೈದರಾಬಾದ್, ಮುಂಬೈ ಇಂಡಿಯನ್ಸ್, ರಾಜಸ್ಥಾನ ರಾಯಲ್ಸ್, ದೆಹಲಿ ಕ್ಯಾಪಿಟಲ್ಸ್ ಮತ್ತು ಸಿಎಸ್‌ಕೆ ಪರ ಆಡಿದ್ದಾರೆ. ಮುಸ್ತಾಫಿಜುರ್ ರೆಹಮಾನ್ 60 ಐಪಿಎಲ್ ಪಂದ್ಯಗಳಲ್ಲಿ 65 ವಿಕೆಟ್‌ಗಳನ್ನು ಪಡೆದಿದ್ದಾರೆ. ಇತ್ತೀಚಿನ ಐಪಿಎಲ್ 2026 ರ ಹರಾಜಿನಲ್ಲಿ ಕೆಕೆಆರ್ ಮುಸ್ತಾಫಿಜುರ್ ರೆಹಮಾನ್ ಅವರನ್ನು ₹9.20 ಕೋಟಿಗೆ ಖರೀದಿಸಿತ್ತು.
Advertisement