1st ODI: ಮಿಚೆಲ್ ಸ್ಫೋಟಕ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್
ವಡೋದರ: ಭಾರತದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ 301 ರನ್ ಗಳ ಬೃಹತ್ ಗುರಿ ನೀಡಿದೆ.
ಗುಜರಾತ್ ನ ವಡೋದರಾದ ಬಿಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಪ್ರವಾಸಿ ನ್ಯೂಜಿಲೆಂಡ್ ತಂಡ ನಿಗಧಿತ 50 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 300 ರನ್ ಪೇರಿಸಿ ಭಾರತಕ್ಕೆ ಗೆಲ್ಲಲು 301 ರನ್ ಗಳ ಬೃಹತ್ ಗುರಿ ನೀಡಿದೆ.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ನ್ಯೂಜಿಲೆಂಡ್ ಡೆವಾನ್ ಕಾನ್ವೆ (56 ರನ್), ಹೆನ್ರಿ ನಿಕೋಲಸ್ (62 ರನ್) ಮತ್ತು ಡರೆಲ್ ಮೆಚೆಲ್ (84 ರನ್) ಅವರ ಅರ್ಧಶತಕಗಳ ನೆರವಿನಿಂದ ಬೃಹತ್ ಮೊತ್ತ ಪೇರಿಸಿತು.
16 ರನ್ ಗಳ ಅಂತರದಲ್ಲಿ ಶತಕ ಮಿಸ್
ಇನ್ನು ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ಡರೆಲ್ ಮೆಚೆಲ್ 71 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 5 ಬೌಂಡರಿಗಳ ಸಹಿತ 84 ರನ್ ಸಿಡಿಸಿದರು. ಆದರೆ ಪ್ರಸಿದ್ಧ್ ಕೃಷ್ಣ ಬೌಲಿಂಗ್ ನಲ್ಲಿ ಎಲ್ ಬಿ ಬಲೆಗೆ ಬಿದ್ದರು. ಆ ಮೂಲಕ ಕೇವಲ 16 ರನ್ ಗಳ ಅಂತರದಲ್ಲಿ ಶತಕದಿಂದ ವಂಚಿತರಾದರು.
ಭಾರತದ ಪರ ಮಹಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ ತಲಾ 2ವಿಕೆಟ್ ಪಡೆದರೆ, ಕುಲದೀಪ್ ಯಾದವ್ 1 ವಿಕೆಟ್ ಪಡೆದರು.

