

ಕೊಲೊಂಬೋ: ಶ್ರೀಲಂಕಾದಲ್ಲಿ ನಡೆಯುತ್ತಿರುವ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಶನಿವಾರ ಬಾಂಗ್ಲಾದೇಶದ ವಿರುದ್ಧ ಭಾರತ 18 ರನ್‌ಗಳ ರೋಚಕ ಗೆಲುವು ಸಾಧಿಸಿದೆ. ಇದರೊಂದಿಗೆ ಸತತ ಎರಡನೇ ಜಯ ದಾಖಲಿಸಿತು. ಈ ಮೂಲಕ ಭಾರತ ಬಿ ಗುಂಪಿನಲ್ಲಿ ಅಗ್ರ ಸ್ಥಾನವನ್ನು ಕಾಯ್ದುಕೊಂಡಿದೆ.
ಇಂದು ಶ್ರೀಲಂಕಾದ ಬೊಲೊವಿಯಾದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತದ ಅಂಡರ್ 19 ತಂಡದ ಆರಂಭ ಕಳಪೆಯಾಗಿತ್ತು. ಆರಂಭಿಕ ನಾಯಕ ಆಯುಷ್ ಮಾತ್ರೆ(6), ವೇದಾಂತ್ ತ್ರಿವೇದಿ (0), ವಿಹಾನ್ ಮಲೋತ್ರಾ (7) ಬಾಂಗ್ಲಾ ಬೌಲರ್‌ಗಳ ರಣ ತಂತ್ರವನ್ನು ಮೆಟ್ಟಿನಿಲ್ಲುವಲ್ಲಿ ವಿಫಲರಾದರು.
ವೈಭವ್ ಸೂರ್ಯವಂಶಿ(72)ಯ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ತಂಡ 48.4 ಓವರ್‌ಗಳಲ್ಲಿ 238 ರನ್ ಸೇರಿಸಿತು. ಬಾಂಗ್ಲಾದೇಶ ತಂಡದ ಪರ ಅಲ್ ಫಹಾದ್ 5 ವಿಕೆಟ್ ಕಬಳಿಸಿದರು.
ಪಂದ್ಯಕ್ಕೆ ಮಳೆ ಅಡ್ಡಿಯಾದ ಕಾರಣ 29 ಓವರ್‌ಗಳಲ್ಲಿ 165 ರನ್‌ಗಳ ಪರಿಷ್ಕೃತ ಗುರಿಯನ್ನು ಬೆನ್ನಟ್ಟಿದ ಬಾಂಗ್ಲಾದೇಶ 28.3 ಓವರ್‌ಗಳಲ್ಲಿ 145 ರನ್‌ಗಳಿಗೆ ಆಲೌಟ್ ಆಯಿತು.
ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ವಿಹಾನ್ ಮಲ್ಹೋತ್ರಾ ನಾಲ್ಕು ಓವರ್‌ಗಳಲ್ಲಿ 14 ರನ್ ನೀಡಿ 4 ವಿಕೆಟ್‌ಗಳನ್ನು ಪಡೆದು ಮಿಂಚಿದರು.
Advertisement