3rd ODI: ಕೊಹ್ಲಿಯ 85ನೇ ಶತಕ ವ್ಯರ್ಥ; ಏಕದಿನ ಸರಣಿ ಗೆದ್ದು ಬೀಗಿದ ನ್ಯೂಜಿಲೆಂಡ್

ಇಂದು ಇಂದೋರ್‌ನ ಹೋಲ್ಕರ್ ಕ್ರೀಡಾಂಗಣದಲ್ಲಿ ನಡೆದೆ ಅಂತಿಮ ಏಕದಿನ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಅವರು 124 ರನ್‌ಗಳ ಆಕರ್ಷಕ ಶತಕ ಬಾರಿಸಿದರು.
Virat Kohli 's 54th ODI ton in vain as  Zealand seal series 2-1
ನ್ಯೂಜಿಲೆಂಡ್ ಆಟಗಾರರ ಸಂಭ್ರಮ
Updated on

ಇಂದೋರ್: ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ರನ್ ಮೆಷಿನ್ ವಿರಾಟ್ ಕೊಹ್ಲಿ ಅವರ ಭರ್ಜರಿ ಶತಕದ ಹೊರತಾಗಿಯೂ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ 41 ರನ್‌ಗಳಿಂದ ಸೋಲು ಅನುಭವಿಸಿದೆ.

ಇಂದು ಇಂದೋರ್‌ನ ಹೋಲ್ಕರ್ ಕ್ರೀಡಾಂಗಣದಲ್ಲಿ ನಡೆದೆ ಅಂತಿಮ ಏಕದಿನ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಅವರು 124 ರನ್‌ಗಳ ಆಕರ್ಷಕ ಶತಕ ಬಾರಿಸಿದರು. ಇದು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಅವರಿಗೆ 85ನೇ ಶತಕವಾಗಿದೆ ಮತ್ತು ಏಕದಿನ ಕ್ರಿಕೆಟ್​​ನಲ್ಲಿ ವಿರಾಟ್ ಕೊಹ್ಲಿ ಅವರ 54 ನೇ ಶತಕವಾಗಿದೆ.

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ನ್ಯೂಜಿಲೆಂಡ್ ತಂಡ ನಿಗದಿತ 50 ಓವರ್ ನಲ್ಲಿ ಡರಿಲ್ ಮಿಚೆಲ್ (137) ಮತ್ತು ಗ್ಲೇನ್ ಫಿಲಿಪ್ಸ್ (106) ಅವರ ಅಮೋಘ ಶತಕಗಳ ನೆರವಿನಿಂದ 8 ವಿಕೆಟ್ ಕಳೆದುಕೊಂಡು 337 ರನ್ ಸೇರಿಸಿತು.

Virat Kohli 's 54th ODI ton in vain as  Zealand seal series 2-1
3rd ODI: ಭಾರತದ ವಿರುದ್ಧ ಭರ್ಜರಿ ಶತಕ; ಹಲವು ದಾಖಲೆಗಳ ಬರೆದ Daryl Mitchell

ಆರಂಭಿಕ ಆಘಾತದ ಹೊರತಾಗಿಯೂ ನ್ಯೂಜಿಲೆಂಡ್ ಪರ ಡರಿಲ್ ಮಿಚೆಲ್ ಸ್ಫೋಟಕ ಬ್ಯಾಟಿಂಗ್ ಮಾಡಿದರು. ಕೇವಲ 131 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 15 ಬೌಂಡರಿಗಳ ಸಹಿತ 137 ರನ್ ಸಿಡಿಸಿದರು.

ಗೆಲುವಿಗೆ 338 ರನ್ ಗಳ ಬೃಹತ್ ಗುರಿ ಬೆನ್ನತ್ತಿದ ಭಾರತ, 46 ಓವರ್​ಗಳಲ್ಲಿ 296 ರನ್​ಗಳಿಗೆ ಆಲೌಟ್ ಆಗುವ ಮೂಲಕ 41 ರನ್​ಗಳಿಂದ ಸೋಲು ಒಪ್ಪಿಕೊಂಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com