'Gambhir haaye haaye': ಕ್ರೀಡಾಂಗಣದಲ್ಲಿ ಅಭಿಮಾನಿಗಳ ಘೋಷಣೆಗೆ ವಿರಾಟ್ ಕೊಹ್ಲಿ ಪ್ರತಿಕ್ರಿಯೆ; ವೈರಲ್ ವಿಡಿಯೋ!

ಇತ್ತೀಚೆಗೆ ಭಾರತ ತಂಡದ ಕಳಪೆ ಫಲಿತಾಂಶಗಳು ಮತ್ತು ಮಾಜಿ ನಾಯಕರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯನ್ನು ನಿಭಾಯಿಸಿದ ರೀತಿಯಿಂದಾಗಿ ಗಂಭೀರ್ ಈಗಾಗಲೇ ಸಾಕಷ್ಟು ಟೀಕೆಗೆ ಗುರಿಯಾಗಿದ್ದಾರೆ.
Virat Kohli
ವಿರಾಟ್ ಕೊಹ್ಲಿ
Updated on

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯು ಪ್ರವಾಸಿ ತಂಡಕ್ಕೆ 2-1 ಅಂತರದ ಗೆಲುವಿನೊಂದಿಗೆ ಕೊನೆಗೊಂಡಿತು. ಆರಂಭಿಕ ಪಂದ್ಯದಲ್ಲಿ ಜಯಗಳಿಸಿದ ನಂತರ ಭಾರತ ತಂಡವು ಎರಡನೇ ಮತ್ತು ಮೂರನೇ ಪಂದ್ಯಗಳಲ್ಲಿ ಸೋಲು ಅನುಭವಿಸಿತು. 3 ಪಂದ್ಯಗಳ ಸರಣಿಯಲ್ಲಿ 93, 23 ಮತ್ತು 124 ರನ್ ಗಳಿಸಿದ ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ, ಬೇರೆ ಯಾವುದೇ ಆಟಗಾರ ಹೇಳಿಕೊಳ್ಳುವಂತ ಪ್ರದರ್ಶನ ನೀಡಿಲ್ಲ. ಈ ಫಲಿತಾಂಶವು ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಮೇಲೆ ಒತ್ತಡ ಉಂಟುಮಾಡಿದೆ. ಮುಖ್ಯ ಕೋಚ್ ಆಗಿ ಅವರು ಭಾರತ ತಂಡದ ತವರಿನಲ್ಲಿ ಮತ್ತೊಂದು ಸರಣಿ ಸೋಲನ್ನು ತಡೆಯಲು ಸಾಧ್ಯವಾಗಲಿಲ್ಲ.

ಮೂರನೇ ಏಕದಿನ ಪಂದ್ಯದ ಸೋಲಿನ ನಂತರ, ಪಂದ್ಯದ ನಂತರದ ಪ್ರಸ್ತುತಿ ಸಮಾರಂಭಕ್ಕಾಗಿ ಭಾರತೀಯ ತಂಡದ ಸದಸ್ಯರು ಇಂಧೋರ್‌ನ ಹೋಲ್ಕರ್ ಕ್ರೀಡಾಂಗಣದೊಳಗೆ ನಿಂತಿದ್ದಾಗ, ಅಭಿಮಾನಿಗಳ ಒಂದು ವರ್ಗವು 'ಗಂಭೀರ್ ಹಾಯೆ ಹಾಯೆ' ಎಂಬ ಘೋಷಣೆಗಳನ್ನು ಕೂಗಿದೆ. ಆಗ ಗೌತಮ್ ಗಂಭೀರ್ ಕೂಡ ಅಲ್ಲಿಯೇ ಇದ್ದರು.

ಆಗ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ರವೀಂದ್ರ ಜಡೇಜಾ ಮತ್ತು ಬ್ಯಾಟಿಂಗ್ ಕೋಚ್ ಸೀತಾಂಶು ಕೊಟಕ್ ಸೇರಿದಂತೆ ಅವರಂತಹವರು ಅಭಿಮಾನಿಗಳು ಕೂಗಿದ ಇಂತಹ ಘೋಷಣೆಗಳನ್ನು ನೋಡಿ ಆಶ್ಚರ್ಯಚಕಿತರಾದರು. ಆಗ ವಿರಾಟ್ ಕೊಹ್ಲಿ ನೀಡಿದ ಪ್ರತಿಕ್ರಿಯೆ ಇದೀಗ ವೈರಲ್ ಆಗಿದೆ.

Virat Kohli
ನ್ಯೂಜಿಲೆಂಡ್ ವಿರುದ್ಧ ಸೋಲು: ತವರಿನಲ್ಲೇ ಭಾರತಕ್ಕೆ ಮತ್ತೆ ಮುಖಭಂಗ; ಗೌತಮ್ ಗಂಭೀರ್ ವಿರುದ್ಧ ಸಿಡಿದೆದ್ದ ಫ್ಯಾನ್ಸ್!

ಇತ್ತೀಚೆಗೆ ಭಾರತ ತಂಡದ ಕಳಪೆ ಫಲಿತಾಂಶಗಳು ಮತ್ತು ಮಾಜಿ ನಾಯಕರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯನ್ನು ನಿಭಾಯಿಸಿದ ರೀತಿಯಿಂದಾಗಿ ಗಂಭೀರ್ ಈಗಾಗಲೇ ಸಾಕಷ್ಟು ಟೀಕೆಗೆ ಗುರಿಯಾಗಿದ್ದಾರೆ. ಕ್ರೀಡಾಂಗಣದಲ್ಲಿ ಮಾತ್ರವಲ್ಲದೆ ಸಾಮಾಜಿಕ ಮಾಧ್ಯಮಗಳಲ್ಲಿಯೂ ಅಭಿಮಾನಿಗಳು ಗಂಭೀರ್ ವಿರುದ್ಧ ತಮ್ಮ ಕೋಪವನ್ನು ಪ್ರದರ್ಶಿಸುತ್ತಿದ್ದಾರೆ.

ಆಟಗಾರರು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಆದರೆ, ಫಲಿತಾಂಶಗಳು ನಿರೀಕ್ಷಿತ ಮಟ್ಟದಲ್ಲಿ ಇಲ್ಲ ಎಂದು ತಂಡದ ಆಡಳಿತ ಮಂಡಳಿ ಹೇಳುತ್ತಿರುವುದಕ್ಕೆ ಕೆಲವು ಅಭಿಮಾನಿಗಳು ಅಪಹಾಸ್ಯ ಮಾಡಿದ್ದಾರೆ. ನಾಯಕ ಶುಭಮನ್ ಗಿಲ್ ಅವರ ಇತ್ತೀಚಿನ ಏಕದಿನ ದಾಖಲೆಯನ್ನು ದೇಶೀಯ 50 ಓವರ್‌ಗಳ ಪಂದ್ಯಾವಳಿಯಲ್ಲಿ ಸಂಜು ಸ್ಯಾಮ್ಸನ್ ಅವರ ಪ್ರದರ್ಶನದೊಂದಿಗೆ ಹೋಲಿಸಲಾಗುತ್ತಿದೆ. ಸ್ಯಾಮ್ಸನ್‌ ಅವರನ್ನು ಬದಿಗೊತ್ತಿ ಗಿಲ್ ಅವರನ್ನು ಆಯ್ಕೆ ಮಾಡಿದ್ದಕ್ಕಾಗಿ ಆಯ್ಕೆದಾರರು ಟೀಕೆಗೆ ಗುರಿಯಾಗಿದ್ದಾರೆ.

2-1 ಫಲಿತಾಂಶದೊಂದಿಗೆ, ನ್ಯೂಜಿಲೆಂಡ್ 37 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತದಲ್ಲಿ ODI ಸರಣಿಯನ್ನು ಗೆದ್ದಿತು ಮತ್ತು ಕಳೆದ ವರ್ಷ ಟೆಸ್ಟ್ ಸರಣಿಯಲ್ಲಿ 3-0 ಅಂತರದಿಂದ ಭಾರತ ತಂಡವನ್ನು ಸೋಲಿಸಿತ್ತು. ಮುಂಬರುವ 50 ಓವರ್‌ಗಳ ಕ್ರಿಕೆಟ್ ವಿಶ್ವಕಪ್‌ಗೆ ಮುನ್ನವೇ 2023ರ ODI ವಿಶ್ವಕಪ್ ಫೈನಲಿಸ್ಟ್‌ಗಳು ಇಂತಹ ಫಲಿತಾಂಶಗಳನ್ನು ಪಡೆಯುತ್ತಿರುವುದು ಆಡಳಿತ ಮಂಡಳಿಗೆ ತಲೆನೋವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com