ಟಿ20 ವಿಶ್ವಕಪ್: ಭಾರತ ಪ್ರವಾಸ ಬಹಿಷ್ಕರಿಸಿದರೆ ಬಾಂಗ್ಲಾದೇಶ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಜಯ್ ಶಾ!

ಐಸಿಸಿ ಅಧ್ಯಕ್ಷ ಜಯ್ ಶಾ ಅವರು ಈ ವಿಷಯದ ಕುರಿತು ಅಂತಿಮ ನಿರ್ಧಾರಕ್ಕಾಗಿ ದುಬೈನಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
T20 World Cup: ICC chief Jay Shah set to take strict action against Bangladesh over India boycott
ಜಯ್ ಶಾ
Updated on

ಮುಂಬೈ: ಮುಂಬರುವ 2026 ರ ಟಿ 20 ವಿಶ್ವಕಪ್‌ಗಾಗಿ ಭಾರತಕ್ಕೆ ಬರಲು ಬಾಂಗ್ಲಾದೇಶ ನಿರಾಕರಿಸಿದರೆ, ಅದರ ವಿರುದ್ಧ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಜಯ್ ಶಾ ಅವರು ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ಐಸಿಸಿ ಮೂಲಗಳು ಶುಕ್ರವಾರ ತಿಳಿಸಿವೆ.

ಐಸಿಸಿ ಅಧ್ಯಕ್ಷ ಜಯ್ ಶಾ ಅವರು ಈ ವಿಷಯದ ಕುರಿತು ಅಂತಿಮ ನಿರ್ಧಾರಕ್ಕಾಗಿ ದುಬೈನಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಟಿ 20 ವಿಶ್ವಕಪ್‌ ಪಂದ್ಯಗಳನ್ನು ಭಾರತದಿಂದ ಶ್ರೀಲಂಕಾಕ್ಕೆ ಸ್ಥಳಾಂತರಿಸಬೇಕೆಂಬ ಬಾಂಗ್ಲಾದೇಶ ಕ್ರಿಕೆಟ್ ತಂಡದ ಬೇಡಿಕೆಯನ್ನು ಐಸಿಸಿ ತಿರಸ್ಕರಿಸಿದ ಬಳಿಕ ಮುಂದಿನ ತಿಂಗಳು ನಡೆಯಲಿರುವ ಟಿ-20 ವಿಶ್ವಕಪ್‌ಗೆ ತನ್ನ ರಾಷ್ಟ್ರೀಯ ತಂಡವನ್ನು ಭಾರತಕ್ಕೆ ಕಳುಹಿಸುವುದಿಲ್ಲ ಎಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಗುರುವಾರ ಘೋಷಿಸಿದೆ.

T20 World Cup: ICC chief Jay Shah set to take strict action against Bangladesh over India boycott
ಟಿ20 ವಿಶ್ವಕಪ್ ವಿವಾದಕ್ಕೆ ಮತ್ತೊಂದು ಟ್ವಿಸ್ಟ್: 240 ಕೋಟಿ ರೂ ಆದಾಯ ನಷ್ಟ ತಪ್ಪಿಸಲು ಬಾಂಗ್ಲಾದೇಶ ಹರಸಹಾಸ! DRC ಹಸ್ತಕ್ಷೇಪಕ್ಕೆ ಮನವಿ!

ಭದ್ರತಾ ಕಾರಣಗಳನ್ನು ಉಲ್ಲೇಖಿಸಿ ಬಾಂಗ್ಲಾದೇಶ ತನ್ನ ರಾಷ್ಟ್ರೀಯ ತಂಡವನ್ನು ಭಾರತಕ್ಕೆ ಕಳುಹಿಸಲು ಬಾಂಗ್ಲಾದೇಶ ನಿರಾಕರಿಸಿದೆ.

ಬಾಂಗ್ಲಾದೇಶಕ್ಕೆ ಐಸಿಸಿ ಅಂತಿಮ ಎಚ್ಚರಿಕೆ

ಭಾರತಕ್ಕೆ ಪ್ರಯಾಣಿಸಲು ಒಪ್ಪಿಕೊಳ್ಳಬೇಕು, ಇಲ್ಲದಿದ್ದರೆ ಬದಲಿ ತಂಡವನ್ನು ಆಡಿಸಲಾಗುವುದು ಎಂದು ಐಸಿಸಿ ಬುಧವಾರ ಬಾಂಗ್ಲಾದೇಶಕ್ಕೆ ಅಂತಿಮ ಎಚ್ಚರಿಕೆ ನೀಡಿತ್ತು.

ಭಾರತದಲ್ಲಿ ಬಾಂಗ್ಲಾದೇಶ ಆಟಗಾರರು, ಅಧಿಕಾರಿಗಳು ಅಥವಾ ಅಭಿಮಾನಿಗಳ ಸುರಕ್ಷತೆಗೆ ಯಾವುದೇ ಬೆದರಿಕೆ ಇಲ್ಲ ಎಂದು ತಿಳಿಸಿರುವ ಐಸಿಸಿ, ಇದಕ್ಕೆ ಪ್ರತಿಕ್ರಿಯಿಸಲು ಗುರುವಾರದ ತನಕ ಬಾಂಗ್ಲಾದೇಶಕ್ಕೆ ಸಮಯ ನೀಡಿತ್ತು.

ನಮ್ಮ ಕ್ರಿಕೆಟಿಗರು ವಿಶ್ವಕಪ್‌ಗೆ ಅರ್ಹತೆ ಪಡೆಯಲು ಸಾಕಷ್ಟು ಶ್ರಮಿಸಿದ್ದಾರೆ. ಆದರೆ ಭಾರತದಲ್ಲಿ ಆಡುವ ಬಗ್ಗೆ ಭದ್ರತಾ ಅಪಾಯಗಳ ಕುರಿತು ನಮ್ಮ ಆತಂಕ ನಿವಾರಣೆಯಾಗಿಲ್ಲ. ನಮ್ಮ ಇಡೀ ಇಡೀ ತಂಡ, ಪತ್ರಕರ್ತರು ಹಾಗೂ ಪ್ರೇಕ್ಷಕರ ಸುರಕ್ಷತೆ ಕುರಿತು ನಮಗೆ ಸಂಪೂರ್ಣ ಭರವಸೆ ಇಲ್ಲ. ನಾವು ವಿಶ್ವಾಸವನ್ನು ಕಳೆದುಕೊಂಡಿಲ್ಲ; ನಮ್ಮ ತಂಡ ಸಿದ್ಧವಾಗಿದೆ,” ಎಂದು ಬಾಂಗ್ಲಾದೇಶದ ಕ್ರೀಡಾ ಸಲಹೆಗಾರ ಆಸಿಫ್ ನಝ್ರುಲ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com