

ವಡೋದರಾ: ಗುಜರಾತ್ ಜೈಂಟ್ಸ್ (GG) ವಿರುದ್ಧದ ಮಹಿಳಾ ಪ್ರೀಮಿಯರ್ ಲೀಗ್ 2026ನೇ ಪಂದ್ಯದ ವೇಳೆ ಸ್ಲೋ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡದ ನಾಯಕಿ ಜೆಮಿಮಾ ರೊಡ್ರಿಗಸ್ಗೆ ₹12 ಲಕ್ಷ ದಂಡ ವಿಧಿಸಲಾಗಿದೆ.
ಮಂಗಳವಾರ ಬರೋಡಾ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮೂರು ರನ್‌ಗಳ ಅಂತರದಿಂದ ಸೋತು ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ.
'ಮಂಗಳವಾರ ವಡೋದರಾದ ಬಿಸಿಎ ಕ್ರೀಡಾಂಗಣದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಜೆಮಿಮಾ ರೊಡ್ರಿಗಸ್‌ಗೆ ದಂಡ ವಿಧಿಸಲಾಗಿದೆ' ಎಂದು WPL ಹೇಳಿಕೆಯಲ್ಲಿ ತಿಳಿಸಿದೆ.
'WPL ನ ಕನಿಷ್ಠ ಓವರ್ ದರದ ಅಪರಾಧಗಳಿಗೆ ಸಂಬಂಧಿಸಿದಂತೆ ನೀತಿ ಸಂಹಿತೆ ಅಡಿಯಲ್ಲಿ ಇದು ಈ ಆವೃತ್ತಿಯಲ್ಲಿ ಅವರ ಮೊದಲ ಅಪರಾಧವಾಗಿರುವುದರಿಂದ, ಜೆಮಿಮಾ ಅವರಿಗೆ ₹12 ಲಕ್ಷ ದಂಡ ವಿಧಿಸಲಾಗಿದೆ' ಎಂದು ಅದು ಹೇಳಿದೆ.
ಆಡಿರುವ 7 ಪಂದ್ಯಗಳ ಪೈಕಿ ಮೂರರಲ್ಲಿ ಗೆಲುವು ಸಾಧಿಸುವ ಮೂಲಕ ಆರು ಅಂಕಗಳೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. -0.164 ನೆಟ್ ರನ್ ರೇಟ್ ಹೊಂದಿರುವುದರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂಬೈ ತಂಡದ ಬಳಿಕ ಸ್ಥಾನ ಪಡೆದಿದ್ದು, WPL ಪ್ಲೇಆಫ್‌ಗಳಲ್ಲಿ ಅಗ್ರ ಮೂರು ಸ್ಥಾನ ಪಡೆಯಲು ಪೈಪೋಟಿ ನಡೆಸುತ್ತಿದೆ.
ಫೆಬ್ರುವರಿ 1 ರಂದು ನಡೆಯುವ ತಮ್ಮ ಮುಂದಿನ ಪಂದ್ಯದಲ್ಲಿ ಅವರು ಪಾಯಿಂಟ್ಸ್ ಟೇಬಲ್‌ನಲ್ಲಿ ಕೊನೆಯ ಸ್ಥಾನದಲ್ಲಿರುವ UP ವಾರಿಯರ್ಸ್ ತಂಡವನ್ನು ಎದುರಿಸಲಿದ್ದಾರೆ.
Advertisement