India vs New Zealand, 5th T20: ಭಾರತದ ಸಂಭಾವ್ಯ ಪ್ಲೇಯಿಂಗ್ XI; ಇಶಾನ್ ಕಿಶನ್, ಅಕ್ಷರ್ ಪಟೇಲ್‌ ಮರಳುವ ಸಾಧ್ಯತೆ; ಸಂಜು ಸ್ಯಾಮ್ಸನ್?

ಮುಂಬರುವ ಟಿ20 ವಿಶ್ವಕಪ್‌ಗೆ ಮುನ್ನ ಭಾರತದ ಕೊನೆಯ ಪಂದ್ಯ ಇದಾಗಿರುವುದರಿಂದ, ಪಂದ್ಯಾವಳಿಯಲ್ಲಿ ಕಾಣಿಸಿಕೊಳ್ಳುವ ಆಟಗಾರರಿಗೆ ಅವಕಾಶ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ.
5th T20I: Samson under spotlight as India targets series finale win vs New Zealand.
ಸಂಜು ಸ್ಯಾಮ್ಸನ್ - ಅಭಿಷೇಕ್ ಶರ್ಮಾ
Updated on

ಸೂರ್ಯಕುಮಾರ್ ಯಾದವ್ ನೇತೃತ್ವದ ತಂಡವು ಶನಿವಾರ ತಿರುವನಂತಪುರದಲ್ಲಿ ನ್ಯೂಜಿಲೆಂಡ್ ವಿರುದ್ಧ ಐದನೇ ಮತ್ತು ಕೊನೆಯ ಪಂದ್ಯವನ್ನು ಆಡಲಿದ್ದು, ಸರಣಿಯನ್ನು ಸಕಾರಾತ್ಮಕವಾಗಿ ಕೊನೆಗೊಳಿಸುವ ನಿರೀಕ್ಷೆಯಿದೆ. ಆತಿಥೇಯರು ಮೊದಲ ಮೂರು ಪಂದ್ಯಗಳನ್ನು ಗೆದ್ದು ಐದು ಪಂದ್ಯಗಳ ಸರಣಿಯಲ್ಲಿ ಮುನ್ನಡೆ ಸಾಧಿಸಿದ್ದರೂ, ನಾಲ್ಕನೇ ಪಂದ್ಯವನ್ನು 50 ರನ್‌ಗಳಿಂದ ಸೋತಿದೆ. ಟಿಮ್ ಸೈಫರ್ಟ್ ಸ್ಫೋಟಕ ಅರ್ಧಶತಕ ಗಳಿಸಿದರೆ, ಡೆವೊನ್ ಕಾನ್ವೇ ಮತ್ತು ಡೆರಿಲ್ ಮಿಚೆಲ್ ಅವರ ಅದ್ಭುತ ಆಟದಿಂದಾಗಿ ನ್ಯೂಜಿಲೆಂಡ್ ತಂಡವು ಸರಣಿ ವೈಟ್‌ವಾಶ್‌ನಿಂದ ತಪ್ಪಿಸಿಕೊಂಡಿದೆ.

ಮುಂಬರುವ ಟಿ20 ವಿಶ್ವಕಪ್‌ಗೆ ಮುನ್ನ ಭಾರತದ ಕೊನೆಯ ಪಂದ್ಯ ಇದಾಗಿರುವುದರಿಂದ, ಪಂದ್ಯಾವಳಿಯಲ್ಲಿ ಕಾಣಿಸಿಕೊಳ್ಳುವ ಆಟಗಾರರಿಗೆ ಅವಕಾಶ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ.

ತವರಿನ ಪ್ರೇಕ್ಷಕರ ಮುಂದೆ ಆಡಲಿರುವ ಸಂಜು ಸ್ಯಾಮ್ಸನ್ ತಮ್ಮ ಫಾರ್ಮ್ ಕಂಡುಕೊಳ್ಳಲು ಇದು ಸೂಕ್ತ ಸಂದರ್ಭವಾಗಲಿದೆ. ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಡಿರುವ 4 ಪಂದ್ಯಗಳಲ್ಲಿ ಕೇವಲ 40 ರನ್ ಗಳಿಸಿದ್ದಾರೆ. ಸದ್ಯ ಫಾರ್ಮ್‌ನಲ್ಲಿರುವ ಅಭಿಷೇಕ್ ಶರ್ಮಾ ಅವರೊಂದಿಗೆ ಬ್ಯಾಟಿಂಗ್ ಆರಂಭಿಸುವ ಅವರು ಇಂದು ದೊಡ್ಡ ರನ್ ಗಳಿಸುವ ನಿರೀಕ್ಷೆಯಲ್ಲಿದ್ದಾರೆ.

ತಂಡಕ್ಕೆ ಮರಳಲಿರುವ ಇಶಾನ್ ಕಿಶನ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ ಮತ್ತು ನಾಯಕ ಸೂರ್ಯಕುಮಾರ್ ಯಾದವ್ 4ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡುತ್ತಾರೆ ಎಂದು ನಿರೀಕ್ಷಿಸಲಾಗಿದೆ.

5th T20I: Samson under spotlight as India targets series finale win vs New Zealand.
'ಬುದ್ಧಿವಂತ ಬ್ಯಾಟ್ಸ್‌ಮನ್': ಅಭಿಷೇಕ್ ಶರ್ಮಾ ಬೇಕಾಬಿಟ್ಟಿಯಾಗಿ ಶಾಟ್‌ಗಳನ್ನು ಹೊಡೆಯುವುದಿಲ್ಲ; ಬ್ಯಾಟಿಂಗ್ ಕೋಚ್

ಮೊದಲ ಟಿ20 ಪಂದ್ಯದಲ್ಲಿ ಗಾಯದಿಂದ ಬಳಲುತ್ತಿದ್ದ ಅಕ್ಷರ್ ಪಟೇಲ್ ಕೂಡ ತಂಡಕ್ಕೆ ಮರಳುವ ನಿರೀಕ್ಷೆಯಿದೆ. ವರುಣ್ ಚಕ್ರವರ್ತಿ ಮತ್ತು ಕುಲದೀಪ್ ಯಾದವ್ ಸ್ಪಿನ್ನರ್‌ಗಳಾಗಿ ಆಡುವ ನಿರೀಕ್ಷೆಯಿದ್ದರೆ, ವೇಗಿಗಳ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ ಮತ್ತು ಅರ್ಶ್‌ದೀಪ್ ಸಿಂಗ್ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಹೆಚ್ಚಿದೆ.

ಭಾರತದ ಸಂಭಾವ್ಯ ಪ್ಲೇಯಿಂಗ್ XI

ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ಶಿವಂ ದುಬೆ, ರಿಂಕು ಸಿಂಗ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com