

ಶುಕ್ರವಾರ ವಡೋದರಾದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (WPL) 2026 ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವು ಡಬ್ಲ್ಯುಪಿಎಲ್ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಮುಂಬೈ ಇಂಡಿಯನ್ಸ್ ವಿರುದ್ಧ 11 ರನ್‌ಗಳ ಜಯ ಸಾಧಿಸುವ ಮೂಲಕ ಎಲಿಮಿನೇಟರ್‌ಗೆ ಲಗ್ಗೆ ಇಟ್ಟಿದೆ. ಆಶ್ಲೀ ಗಾರ್ಡ್ನರ್ ಮತ್ತು ಜಾರ್ಜಿಯಾ ವೇರಂ ಕ್ರಮವಾಗಿ 46 ಮತ್ತು 44 ರನ್ ಗಳಿಸುವ ಮೂಲಕ ತಂಡಕ್ಕೆ ನೆರವಾದರು. ಗುಜರಾತ್ ತಂಡವನ್ನು ಸಂಕಷ್ಟದಿಂದ ಪಾರು ಮಾಡುವಲ್ಲಿ ನಿರ್ಣಾಯಕ 71 ರನ್‌ಗಳ ಜೊತೆಯಾಟ ನಡೆಸಿದರು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಜಿಜಿ ಅಂತಿಮವಾಗಿ 4 ವಿಕೆಟ್ ನಷ್ಟಕ್ಕೆ 167 ರನ್ ಕಲೆಹಾಕಿತು.
168 ರನ್‌ಗಳ ಸವಾಲಿನ ಗುರಿಯನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡವು ಆರಂಭದಲ್ಲಿಯೇ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಬಳಿಕ ಬಂದ ನಾಯಕಿ ಹರ್ಮನ್‌ಪ್ರೀತ್ ಕೌರ್ 48 ಎಸೆತಗಳಲ್ಲಿ ಅಜೇಯ 82 ರನ್ ಗಳಿಸಿದರೂ ತಂಡವನ್ನು ಸೋಲಿನಿಂದ ಪಾರುಮಾಡಲು ಸಾಧ್ಯವಾಗಲಿಲ್ಲ. ಮುಂಬೈ ಇಂಡಿಯನ್ಸ್ 156/7ಕ್ಕೆ ಸೀಮಿತವಾಯಿತು.
ಸತತ ಎಂಟು ಸೋಲುಗಳ ನಂತರ ಗುಜರಾತ್ ತಂಡವು ಹಾಲಿ ಚಾಂಪಿಯನ್‌ಗಳ ವಿರುದ್ಧ ಡಬ್ಲ್ಯುಪಿಎಲ್ ಇತಿಹಾಸದಲ್ಲಿಯೇ ಗಳಿಸಿದ ಮೊದಲ ಜಯ ಇದಾಗಿದ್ದು, ಮಂಗಳವಾರದ ಎಲಿಮಿನೇಟರ್‌ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ.
ಭಾನುವಾರ ನಡೆಯಲಿರುವ ಅಂತಿಮ ಲೀಗ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಯುಪಿ ವಾರಿಯರ್ಸ್ ತಂಡವನ್ನು ಎದುರಿಸಲಿದ್ದು, ಈ ಪಂದ್ಯದಲ್ಲಿ ಮುಂಬೈ ತಂಡದ ಭವಿಷ್ಯ ನಿರ್ಧಾರವಾಗಲಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವು ಎಲಿಮಿನೇಟರ್‌ನಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಳ್ಳಲು ಅಂಕಪಟ್ಟಿಯಲ್ಲಿ ಕೊನೆಯಲ್ಲಿರುವ ಯುಪಿ ವಾರಿಯರ್ಸ್ ಗೆಲುವು ಸಾಧಿಸಬೇಕಿದೆ.
-1.146 ರ ಅತ್ಯಂತ ಕಳಪೆ ನೆಟ್ ರನ್ ರೇಟ್ ಹೊಂದಿರುವ ಯುಪಿಡಬ್ಲ್ಯುಗೆ ಎಲಿಮಿನೇಟರ್‌ನಲ್ಲಿ ಪಾಲ್ಗೊಳ್ಳಲು ಅವಕಾಶವಿದ್ದು, ಭಾರಿ ಅಂತರದಿಂದ ಗೆಲುವು ಸಾಧಿಸಿದರೆ ಮಾತ್ರ ನೆಟ್ ರನ್ ರೇಟ್ ಆಧರಿಸಿ ಸ್ಥಾನ ಪಡೆಯಬಹುದು. ಆಗ ಮುಂಬೈ ತಂಡವು 0.146 ನೆಟ್ ರನ್ ರೇಟ್ ಹೊಂದಿದ್ದರೂ ಪಂದ್ಯಾವಳಿಯಿಂದಲೇ ಹೊರಗುಳಿಯಲಿದೆ.
ಆಡಿರುವ ಎಂಟು ಪಂದ್ಯಗಳಲ್ಲಿ ಆರು ಗೆಲುವುಗಳೊಂದಿಗೆ ಐದು ತಂಡಗಳಿರುವ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈಗಾಗಲೇ ಫೈನಲ್ ತಲುಪಿದೆ. ಎಲಿಮಿನೇಟರ್‌ನಲ್ಲಿ ಗೆಲುವು ಸಾಧಿಸುವ ತಂಡದೊಂದಿಗೆ ಟ್ರೋಫಿಗಾಗಿ ಸೆಣಸಬೇಕಿದೆ.
Advertisement