2nd T20I: Debut ಪಂದ್ಯದಲ್ಲೇ Vaibhav Sooryavanshi ಝಲಕ್, ಇಂಗ್ಲೆಂಡ್ ಗೆ ಗೆಲ್ಲಲು 191 ರನ್ ಸವಾಲಿನ ಗುರಿ ನೀಡಿದ ಭಾರತ!

ಅಭಿಷೇಕ್ ಶರ್ಮಾ 24 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 8 ಬೌಂಡರಿಗಳ ನೆರವಿನಿಂದ 43 ರನ್ ಗಳಿಸಿದರೆ, 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಇಶಾನ್ ಕಿಶನ್ 40 ಎಸೆತಗಳಲ್ಲಿ 6 ಬೌಂಡರಿ ಸಹಿತ 49 ರನ್ ಗಳಿಸಿದರು.
England to chase 191 runs against India
ಭಾರತ ಬ್ಯಾಟಿಂಗ್
Updated on

ಮ್ಯಾಂಚೆಸ್ಟರ್: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಇಂಗ್ಲೆಂಡ್ ತಂಡಕ್ಕೆ ಗೆಲ್ಲಲು 191 ರನ್ ಗಳ ಸವಾಲಿನ ಗುರಿ ನೀಡಿದೆ.

ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫೋರ್ಡ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಅದರಂತೆ ಭಾರತ ನಿಗಧಿತ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಿ ಇಂಗ್ಲೆಂಡ್ ಗೆ ಗೆಲ್ಲಲು 191 ರನ್ ಗಳ ಬೃಹತ್ ಗುರಿ ನೀಡಿತು.

ಭಾರತದ ಪರ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ 24 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 8 ಬೌಂಡರಿಗಳ ನೆರವಿನಿಂದ 43 ರನ್ ಗಳಿಸಿದರೆ, 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಇಶಾನ್ ಕಿಶನ್ 40 ಎಸೆತಗಳಲ್ಲಿ 6 ಬೌಂಡರಿ ಸಹಿತ 49 ರನ್ ಗಳಿಸಿ ಕೇವಲ 1 ರನ್ ಅಂತರದಲ್ಲಿ ಅರ್ಧಶತಕ ಮಿಸ್ ಮಾಡಿಕೊಂಡರು.

ಬಳಿಕ ನಾಯಕ ಶ್ರೇಯಸ್ ಅಯ್ಯರ್ 22 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 3 ಬೌಂಡರಿ ನೆರವಿನಿಂದ 37 ರನ್ ಪೇರಿಸಿದರೆ, ಮಧ್ಯಮ ಕ್ರಮಾಂಕದಲ್ಲಿ ತಿಲಕ್ ವರ್ಮಾ 11 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 1 ಬೌಂಡರಿ ನೆರವಿನಿಂದ ಅಜೇಯ 24 ರನ್ ಗಳಿಸಿ ಭಾರತದ ಬೃಹತ್ ಮೊತ್ತದಲ್ಲಿ ಪ್ರಮುಖ ಪಾತ್ರ ವಹಿಸಿದರು.

ಉಳಿದಂತೆ ಶಿವಂ ದುಬೆ 5, ಅಕ್ಸರ್ ಪಟೇಲ್ 2 ಮತ್ತು ಹರ್ಷಿತ್ ರಾಣಾ 6 ರನ್ ಗಳಿಸಿದರು.

England to chase 191 runs against India
2nd T20: ಇಂಗ್ಲೆಂಡ್ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ; Vaibhav Sooryavanshi ಪದಾರ್ಪಣೆ; ಸಚಿನ್ ದಾಖಲೆ ಧ್ವಂಸ!

ಪದಾರ್ಪಣೆ ಪಂದ್ಯದಲ್ಲೇ ವೈಭವ್ ಸೂರ್ಯವಂಶಿ ಬ್ಯಾಟಿಂಗ್ ಝಲಕ್

ಇಂದಿನ ಪಂದ್ಯದ ಮೂಲಕ ಭಾರತ ತಂಡದ ಉದಯೋನ್ಮುಖ ಹಾರ್ಡ್ ಹಿಟ್ಟಿಂಗ್ ಬ್ಯಾಟರ್ ವೈಭವ್ ಸೂರ್ಯವಂಶಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿ ಭಾರತದ ಪರ ವಿಶ್ವ ದಾಖಲೆ ನಿರ್ಮಿಸಿದರು. ಈ ಪಂದ್ಯದಲ್ಲಿ 2 ಸಿಕ್ಸರ್ ಗಳ ನೆರವಿನಿಂದ ಕೇವಲ 10 ಎಸೆತಗಳಲ್ಲಿ 14 ರನ್ ಗಳಿಸಿ ವಿಲ್ ಜ್ಯಾಕ್ಸ್ ಬೌಲಿಂಗ್ ನಲ್ಲಿ ಸ್ಟಂಪೌಟ್ ಆದರು.

ವೈಭವ್ ಗಳಿಸಿದ್ದು ಕೇವಲ 14 ರನ್ ಗಳೇ ಆದರೂ ಇಂಗ್ಲೆಂಡ್ ನ ಜೋಫ್ರಾಆರ್ಚರ್ ಎಸೆದ ಮೊದಲ ಎಸೆತವನ್ನೇ ಸಿಕ್ಸರ್ ಗೆ ಅಟ್ಟಿ ತಮ್ಮ ಬ್ಯಾಟಿಂಗ್ ನ ಟ್ರೈಲರ್ ತೋರಿಸಿದರು. ಆದರೆ ವಿಲ್ ಜ್ಯಾಕ್ಸ್ ಬೌಲಿಂಗ್ ನಲ್ಲಿ ಮುನ್ನುಗ್ಗಿ ಭಾರಿಸುವ ಭರದಲ್ಲಿ ಸ್ಟಂಪೌಟ್ ಗೆ ಬಲಿಯಾಗಿ ನಿರಾಶೆ ಮೂಡಿಸಿದರು.

ಇತ್ತ ಇಂಗ್ಲೆಂಡ್ ಪರವಾಗಿ ಸ್ಯಾಮ್ ಕರನ್ 3 ವಿಕೆಟ್ ಕಬಳಿಸಿದರೆ, ಜೋಫ್ರಾ ಆರ್ಚರ್, ವಿಲ್ ಜ್ಯಾಕ್ಸ್ ಮತ್ತು ಲಿಯಾಮ್ ಡಾಸನ್ ತಲಾ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com