India Vs England: ರಿಕಿ ಪಾಂಟಿಂಗ್ ದಾಖಲೆ ಮುರಿದ ವಿರಾಟ್ ಕೊಹ್ಲಿ; ಸಾರ್ವಕಾಲಿಕ ಟಾಪ್-ಫೈವ್ ಪಟ್ಟಿಗೆ ಸೇರ್ಪಡೆ!

ಇಂದು ನಡೆದ ಇಂಗ್ಲೆಂಡ್‌ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದರು. ಹಾಗೆಯೇ ಕಾರ್ಡಿಫ್‌ನ ಸೋಫಿಯಾ ಗಾರ್ಡನ್ಸ್‌ನಲ್ಲಿ ತಮ್ಮ ರನ್​ಗಳ ಖಾತೆಯನ್ನು ತೆರೆದರು.
Virat Kohli
ವಿರಾಟ್ ಕೊಹ್ಲಿ
Updated on

ಕಾರ್ಡಿಫ್‌: ಕಾರ್ಡಿಫ್‌ನಲ್ಲಿ ಗುರುವಾರ ನಡೆದ ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಅರ್ಧ ಶತಕ ಬಾರಿಸುವ ಮೂಲಕ ಹಲವು ದಾಖಲೆಗಳನ್ನು ಬರೆದಿದ್ದಾರೆ.

ಇಂದು ಕಾರ್ಡಿಫ್‌ನ ಸೋಫಿಯಾ ಗಾರ್ಡನ್ಸ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಬೌಲಿಂಗ್ ಅನ್ನು ಆಯ್ಕೆ ಮಾಡಿಕೊಂಡಿತು. ಹೀಗಾಗಿ ಭಾರತ ಮೊದಲು ಬ್ಯಾಟಿಂಗ್ ಆರಂಭಿಸಿತು. 30 ಎಸೆತಗಳಲ್ಲಿ 31 ರನ್ ಗಳಿಸಿ ಪ್ರವಾಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿದ್ದ ಶುಭಮನ್ ಗಿಲ್ ಔಟಾದ ನಂತರ, ಎಂಟನೇ ಓವರ್‌ನಲ್ಲಿ ವಿರಾಟ್ ಕೊಹ್ಲಿ ಕ್ರೀಸ್‌ಗೆ ಬಂದರು.

ಕಳೆದ ಪಂದ್ಯದಲ್ಲಿ ಕೇವಲ 5 ರನ್​ಗಳಿಗೆ ವಿಕೆಟ್ ಒಪ್ಪಿಸಿದ್ದ ವಿರಾಟ್ ಕೊಹ್ಲಿ ಇಂದು ಉತ್ತಮವಾಗಿ ಬ್ಯಾಟಿಂಗ್ ಮಾಡಿದರು. 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಇಳಿದಿದ್ದ ಕೊಹ್ಲಿ 66 ಎಸೆತಗಳನ್ನಾಡಿ 8 ಬೌಂಡರಿಗಳ ಸಹಿತ 65 ರನ್​​ಗಳಿಸಿ ಔಟ್ ಆದರು. ಈ ಇನ್ನಿಂಗ್ಸ್ ಮೂಲಕ ಆಸ್ಟ್ರೇಲಿಯಾದ ದಿಗ್ಗಜ ರಿಕಿ ಪಾಂಟಿಂಗ್ ಅವರ ದಾಖಲೆ ಮುರಿದರು.

ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಐದನೇ ಆಟಗಾರ

ಇಂಗ್ಲೆಂಡ್ ವಿರುದ್ಧದ ಈ ಪಂದ್ಯವು ವಿರಾಟ್ ಕೊಹ್ಲಿಗೆ 561ನೇ ಅಂತರರಾಷ್ಟ್ರೀಯ ಪಂದ್ಯವಾಗಿದ್ದು, ಪಾಂಟಿಂಗ್ ಅವರ 560 ಪಂದ್ಯಗಳ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ಈಗ ಕೇವಲ ನಾಲ್ಕು ಆಟಗಾರರು ಮಾತ್ರ ವಿರಾಟ್ ಕೊಹ್ಲಿಗಿಂತ ಮುಂದಿದ್ದು, ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು 664 ಪಂದ್ಯಗಳೊಂದಿಗೆ ಅಗ್ರ ಸ್ಥಾನದಲ್ಲಿದ್ದಾರೆ. ಅವರ ನಂತರ ಮಹೇಲ ಜಯವರ್ಧನೆ(652), ಕುಮಾರ್ ಸಂಗಕ್ಕಾರ(594) ಹಾಗೂ ಸನತ್ ಜಯಸೂರ್ಯ(586) ನಂತರದ ಸ್ಥಾನದಲ್ಲಿದ್ದಾರೆ.

Virat Kohli
'ಅದುವೇ ವಿರಾಟ್ ಕೊಹ್ಲಿ ವಿಶೇಷತೆ': ಭಾರತದ ಮಾಜಿ ಕೋಚ್ ಅಭಿಷೇಕ್ ನಾಯರ್‌ ಸಲಹೆ ತಿರಸ್ಕರಿಸಿದ್ದ 'ಕಿಂಗ್'!

ಕಾರ್ಡಿಫ್‌ನಲ್ಲಿ ಖಾತೆ ತೆರೆದ ಕೊಹ್ಲಿ

ಇಂದು ನಡೆದ ಇಂಗ್ಲೆಂಡ್‌ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದರು. ಹಾಗೆಯೇ ಕಾರ್ಡಿಫ್‌ನ ಸೋಫಿಯಾ ಗಾರ್ಡನ್ಸ್‌ನಲ್ಲಿ ತಮ್ಮ ರನ್​ಗಳ ಖಾತೆಯನ್ನು ತೆರೆದರು.

ಈ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ಕಾರ್ಡಿಫ್‌ನ ಸೋಫಿಯಾ ಗಾರ್ಡನ್ಸ್‌ನಲ್ಲಿ ಏಕೈಕ ಪಂದ್ಯವನ್ನಾಡಿದ್ದರು. ಆದರೆ ಆ ಪಂದ್ಯದಲ್ಲಿ ಕೊಹ್ಲಿಗೆ ಖಾತೆ ತೆರೆಯಲು ಸಾಧ್ಯವಾಗಿರಲಿಲ್ಲ. ಆದರೀಗ ಈ ಮೈದಾನದಲ್ಲಿ ಕೊಹ್ಲಿ ಖಾತೆ ತೆರೆಯುವುದರ ಜೊತೆಗೆ ಅರ್ಧಶತಕದ ಇನ್ನಿಂಗ್ಸ್ ಕೂಡ ಪೂರೈಸಿದ್ದಾರೆ.

ಇಂಗ್ಲೆಂಡ್ ನೆಲದಲ್ಲಿ ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಈಗ ಇಂಗ್ಲೆಂಡ್ ನೆಲದಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್ ಸೇರಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಅವರು ಇಂಗ್ಲೆಂಡ್‌ನಲ್ಲಿ ಸದ್ಯ 2,646 ರನ್‌ಗಳನ್ನು (ಪಂದ್ಯದಲ್ಲಿ ಮುಂದುವರಿದಿದೆ) ಗಳಿಸಿದ್ದಾರೆ. ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ಇಂಗ್ಲೆಂಡ್‌ನಲ್ಲಿ 59 ಪಂದ್ಯಗಳ 79 ಇನಿಂಗ್ಸ್‌ಗಳನ್ನು ಅವರು ಆಡಿದ್ದಾರೆ. ಇಂಗ್ಲೆಂಡ್ ನೆಲದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಏಷ್ಯಾದ ಯಾವುದೇ ಬ್ಯಾಟರ್ ಗಳಿಸಿದ ಗರಿಷ್ಠ ರನ್ ಇದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com