3rd T20I: 15ರ ವಯಸ್ಸಿನಲ್ಲೇ ವಿಶ್ವದಾಖಲೆ! ಜಿಂಬಾಬ್ವೆ ವಿರುದ್ಧ ಮತ್ತೊಮ್ಮೆ ಅಬ್ಬರಿಸಿದ Vaibhav Sooryavanshi

ಮೂರನೇ ಟಿ20 ಪಂದ್ಯದಲ್ಲಿ ಭಾರತದ ಯುವ ಕ್ರಿಕೆಟ್ ಸಂಚಲನ ವೈಭವ್ ಸೂರ್ಯವಂಶಿ ಮತ್ತೊಮ್ಮೆ ತನ್ನ ಬ್ಯಾಟಿಂಗ್ ಮೂಲಕ ಮಿಂಚಿದ್ದು, ಟೂರ್ನಿಯಲ್ಲಿ ಮತ್ತೊಂದು ಆಕರ್ಷಕ ಅರ್ಧಶತಕ ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.
Vaibhav Sooryavanshi Scripts History
ವೈಭವ್ ಸೂರ್ಯವಂಶಿ ಭರ್ಜರಿ ಬ್ಯಾಟಿಂಗ್
Updated on

ಹರಾರೆ: ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲಿ ಭಾರತದ ಉದಯೋನ್ಮುಖ ಬ್ಯಾಟರ್ ಮತ್ತೊಂದು ವಿಶ್ವದಾಖಲೆ ನಿರ್ಮಿಸಿದ್ದು, 16 ವರ್ಷ ತುಂಬುವ ಮೊದಲೇ ಎರಡು ಅಂತಾರಾಷ್ಟ್ರೀಯ ಅರ್ಧಶತಕ ಸಿಡಿಸಿದ ಮೊದಲ ಪೂರ್ಣ ಸದಸ್ಯ ರಾಷ್ಟ್ರದ ಬ್ಯಾಟರ್ ಕೀರ್ತಿಗೆ ಭಾಜನರಾಗಿದ್ದಾರೆ.

ಹರಾರೆ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಡೆಯುತ್ತಿರುವ ಮೂರನೇ ಟಿ20 ಪಂದ್ಯದಲ್ಲಿ ಭಾರತದ ಯುವ ಕ್ರಿಕೆಟ್ ಸಂಚಲನ ವೈಭವ್ ಸೂರ್ಯವಂಶಿ ಮತ್ತೊಮ್ಮೆ ತನ್ನ ಬ್ಯಾಟಿಂಗ್ ಮೂಲಕ ಮಿಂಚಿದ್ದು, ಟೂರ್ನಿಯಲ್ಲಿ ಮತ್ತೊಂದು ಆಕರ್ಷಕ ಅರ್ಧಶತಕ ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

15 ವರ್ಷದ ವೈಭವ್ ಈ ಪಂದ್ಯದ ಆರಂಭದಲ್ಲಿ ಎಚ್ಚರಿಕೆಯ ಆಟವಾಡಿದರೂ ನಂತರ ಜಿಂಬಾಬ್ವೆ ಬೌಲರ್‌ಗಳ ಮೇಲೆ ಪ್ರಾಬಲ್ಯ ಸಾಧಿಸಿದರು. ಕೇವಲ 31 ಎಸೆತಗಳಲ್ಲಿ 6 ಬೌಂಡರಿ ಮತ್ತು 2 ಸಿಕ್ಸರ್‌ಗಳ ನೆರವಿನಿಂದ ಅರ್ಧಶತಕ ಪೂರೈಸಿದ ಅವರು, ತಂಡಕ್ಕೆ ಭದ್ರ ಅಡಿಪಾಯ ಹಾಕಿದರು. ಇದು ಈ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ವೈಭವ್ ದಾಖಲಿಸಿದ ಎರಡನೇ ಅರ್ಧಶತಕವಾಗಿದೆ.

ಆ ಮೂಲಕ ವೈಭವ್ ಸೂರ್ಯವಂಶಿ ಮೊದಲೆರಡು ಅಂತಾರಾಷ್ಟ್ರೀಯ ಅರ್ಧಶತಕ ಸಿಡಿಸಿದ ಮೊದಲ ಪೂರ್ಣ ಸದಸ್ಯ ರಾಷ್ಟ್ರದ ಕಿರಿಯ ಬ್ಯಾಟರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

Vaibhav Sooryavanshi Scripts History
'ಕಂಫರ್ಟ್ ಬೇಡ, ಆತ್ಮವಿಶ್ವಾಸ ಇರಲಿ': ಜಿಂಬಾಬ್ವೆ ವಿರುದ್ಧದ ಟಿ20 ಸರಣಿ ಗೆಲುವಿನ ಹೊರತಾಗಿಯೂ ವಿವಿಎಸ್ ಲಕ್ಷ್ಮಣ್ ಎಚ್ಚರಿಕೆ!

16 ವರ್ಷ ತುಂಬುವ ಮೊದಲೇ ಐತಿಹಾಸಿಕ ಸಾಧನೆ

ಈ ಅರ್ಧಶತಕದೊಂದಿಗೆ ವೈಭವ್ ಸೂರ್ಯವಂಶಿ, 16 ವರ್ಷ ತುಂಬುವ ಮೊದಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಎರಡು 50ಕ್ಕೂ ಅಧಿಕ ಮೊತ್ತ ದಾಖಲಿಸಿದ ಮೊದಲ ಪೂರ್ಣ ಸದಸ್ಯ (Full Member) ರಾಷ್ಟ್ರದ ಬ್ಯಾಟರ್ ಎಂಬ ಅಪರೂಪದ ದಾಖಲೆಗೆ ಪಾತ್ರರಾದರು.

ಒಟ್ಟಾರೆ, ಈ ಸಾಧನೆ ಮಾಡಿದ ಎರಡನೇ ಆಟಗಾರ ವೈಭವ್. ಇದಕ್ಕೂ ಮೊದಲು ನೇಪಾಳದ ಕುಶಲ್ ಮಲ್ಲ ಮಾತ್ರ 16 ವರ್ಷ ತುಂಬುವ ಮೊದಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅರ್ಧಶತಕ ದಾಖಲಿಸಿದ್ದರು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದ ಭಾರತ, ಬೃಹತ್ ಮೊತ್ತ

ಇನ್ನು ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ತೀರ್ಮಾನಿಸಿದರು. ಒಂದೇ ಪಿಚ್‌ನಲ್ಲಿ ಪಂದ್ಯ ನಡೆಯುತ್ತಿರುವುದರಿಂದ ಅದು ಕ್ರಮೇಣ ನಿಧಾನಗತಿಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ್ದೇವೆ ಎಂದು ಶ್ರೇಯಸ್ ಅಯ್ಯರ್ ತಿಳಿಸಿದರು.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗಧಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 192 ರನ್ ಕಲೆಹಾಕಿದ್ದು, ಜಿಂಬಾಬ್ವೆಗೆ ಗೆಲ್ಲಲು 193 ರನ್ ಗಳ ಬೃಹತ್ ಗುರಿ ನೀಡಿದೆ.

ಭಾರತದ ಪರ ವೈಭವ್ ಸೂರ್ಯವಂಶಿ ಕೇವಲ 49 ಎಸೆತಗಳಲ್ಲಿ 4 ಸಿಕ್ಸರ್ ಮತ್ತು 8 ಬೌಂಡರಿಗಳ ನೆರವಿನಿಂದ 81 ರನ್ ಪೇರಿಸಿದರೆ, ಇಶಾನ್ ಕಿಶನ್ (29), ಶ್ರೇಯಸ್ ಅಯ್ಯರ್ (27) ರಿಂಕು ಸಿಂಗ್ (25) ಮತ್ತು ತಿಲಕ್ ವರ್ಮಾ (ಅಜೇಯ 11) ಅಲ್ಪ ಪ್ರಮಾಣದ ರನ್ ಗಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com