India vs Afghanistan 2nd ODI: ಟಾಸ್ ಗೆದ್ದ ಅಫ್ಘಾನಿಸ್ತಾನ ಬ್ಯಾಟಿಂಗ್ ಆಯ್ಕೆ; LSG ಆಟಗಾರ ಪ್ರಿನ್ಸ್ ಯಾದವ್‌ಗೆ ಸ್ಥಾನ!

ಗಾಯದಿಂದಾಗಿ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಭಾರತವು ಕುಲದೀಪ್ ಯಾದವ್ ಮತ್ತು ಯಶಸ್ವಿ ಜೈಸ್ವಾಲ್ ಅವರನ್ನು ಕೂಡ ತಂಡಕ್ಕೆ ಸೇರಿಸಿಕೊಂಡಿದೆ.
Afghanistan have won the toss and elected to bowl in the 2nd ODI.
ಟಾಸ್ ಗೆದ್ದ ಅಫ್ಘಾನಿಸ್ತಾನ
Updated on

ಲಖನೌ: ಮೂರು ಪಂದ್ಯಗಳ ಸರಣಿಯ ಎರಡನೇ ಏಕದಿನ ಪಂದ್ಯದಲ್ಲಿ ಬುಧವಾರ ಅಫ್ಘಾನಿಸ್ತಾನ ನಾಯಕ ಹಶ್ಮತುಲ್ಲಾ ಶಾಹಿದಿ ಟಾಸ್ ಗೆದ್ದು, ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ಭಾರತ, ಐಪಿಎಲ್ 2026ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ಪರ ಅದ್ಭುತ ಪ್ರದರ್ಶನ ನೀಡಿದ ವೇಗಿ ಪ್ರಿನ್ಸ್ ಯಾದವ್ ಅವರಿಗೆ ಚೊಚ್ಚಲ ಅವಕಾಶ ನೀಡಿದೆ.

ಆದಾಗ್ಯೂ, ಗಾಯದಿಂದಾಗಿ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಭಾರತವು ಕುಲದೀಪ್ ಯಾದವ್ ಮತ್ತು ಯಶಸ್ವಿ ಜೈಸ್ವಾಲ್ ಅವರನ್ನು ಕೂಡ ತಂಡಕ್ಕೆ ಸೇರಿಸಿಕೊಂಡಿದೆ.

ಅಫ್ಘಾನಿಸ್ತಾನ ಪರ ದರ್ವಿಶ್ ರಸೂಲಿ ಮತ್ತು ಬಿಲಾಲ್ ಸಮಿ ಚೊಚ್ಚಲ ಪಂದ್ಯವನ್ನಾಡಲಿದ್ದಾರೆ.

ಉಭಯ ದೇಶಗಳ ತಂಡಗಳು

ಭಾರತ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ, ಶುಭಮನ್ ಗಿಲ್ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಗುರ್ನೂರ್ ಬ್ರಾರ್, ಅರ್ಶದೀಪ್ ಸಿಂಗ್, ಪ್ರಿನ್ಸ್ ಯಾದವ್.

ಅಫ್ಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಜದ್ರಾನ್, ಸೇದಿಕುಲ್ಲಾ ಅಟಲ್, ರಹಮತ್ ಷಾ, ಹಶ್ಮತುಲ್ಲಾ ಶಾಹಿದಿ (ನಾಯಕ), ದರ್ವಿಶ್ ರಸೂಲಿ, ರಶೀದ್ ಖಾನ್, ನಂಗೆಯಾಲಿಯಾ ಖರೋಟಿ, ಎಎಮ್ ಘಜನ್ಫರ್, ಮೊಹಮ್ಮದ್ ಸಲೀಮ್ ಸಫಿ, ಬಿಲಾಲ್ ಸಾಮಿ.

Afghanistan have won the toss and elected to bowl in the 2nd ODI.
ಭಾರತದ ಸ್ಟಾರ್ ಆಟಗಾರ ಮೂರು ಸ್ವರೂಪಗಳಲ್ಲಿ ಆಡಬೇಕು; ಯಶಸ್ವಿ ಜೈಸ್ವಾಲ್‌ ಬೆಂಬಲಕ್ಕೆ ನಿಂತ ವೀರೇಂದ್ರ ಸೆಹ್ವಾಗ್!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com